2 ಸಮುಯೇಲ 1:14 - ಪರಿಶುದ್ದ ಬೈಬಲ್14 ದಾವೀದನು ಆ ಯುವಕನಿಗೆ, “ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ಕೊಲ್ಲಲು ನೀನು ಹೆದರಲಿಲ್ಲವೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದಾವೀದನು ಅವನಿಗೆ, “ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ಏಕೆ ಭಯಪಡಲಿಲ್ಲ?” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದಾವೀದನು, “ಕೈಯೆತ್ತಿ ಸರ್ವೇಶ್ವರನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ನೀನು ಹಿಂಜರಿಯಲಿಲ್ಲ ಏಕೆ?” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದಾವೀದನು ಅವನಿಗೆ - ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವದಕ್ಕೆ ಏಕೆ ಭಯಪಡಲಿಲ್ಲ ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈ ಎತ್ತುವುದಕ್ಕೆ ಯಾಕೆ ಭಯಪಡಲಿಲ್ಲ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |
ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:
ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.
ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.