Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:18 - ಪರಿಶುದ್ದ ಬೈಬಲ್‌

18 ಈ ಶೋಕಗೀತೆಯನ್ನು ಯೆಹೂದದ ಜನರಿಗೆ ಕಲಿಸಬೇಕೆಂದು ಅವನು ತನ್ನ ಜನರಿಗೆ ಹೇಳಿದನು. ಈ ಗೀತೆಗೆ “ಬಿಲ್ಲು” ಎಂದು ಹೆಸರು. ಈ ಗೀತೆಯನ್ನು ಯಾಷಾರ್ ಗ್ರಂಥದಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಿಲ್ಲೆ ಎಂಬ ಈ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಆ ಗೀತವು ಯಾಷಾರ್ ಗ್ರಂಥದಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ‘ಬಿಲ್ಲೆ’ ಎಂಬ ಈ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಇದರ ಉಲ್ಲೇಖ ‘ಯಾಷಾರ್’ ಎಂಬ ಗ್ರಂಥದಲ್ಲಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಈ ಗೀತವು ಯಾಷಾರ್ ಗ್ರಂಥದಲ್ಲಿ ಬರೆದಿರುತ್ತದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ದಾವೀದನು ಬಿಲ್ಲೆ ಎಂಬ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಹೇಳಿದನು. ಇದು ಯಾಷಾರನ ಗ್ರಂಥದಲ್ಲಿ ಬರೆಯಲಾಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:18
4 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರು ಶತ್ರುಗಳನ್ನು ಸೋಲಿಸುವವರೆಗೆ ಸೂರ್ಯನೂ ಚಲಿಸಲಿಲ್ಲ, ಚಂದ್ರನೂ ಚಲಿಸಲಿಲ್ಲ. ಈ ಕಥೆಯು ಯಾಷಾರ್ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. ಸೂರ್ಯನು ಆಕಾಶದ ಮಧ್ಯದಲ್ಲಿ ನಿಂತನು. ಅವನು ಇಡೀ ದಿನ ಚಲಿಸಲಿಲ್ಲ.


ಸೀನಾಯಿ ಬೆಟ್ಟದ ಬಳಿಯಲ್ಲಿ ನೀನು ಯೆಹೋವನ ಸನ್ನಿಧಾನದಲ್ಲಿ ನಿಂತಿದ್ದನ್ನು ನೀವು ಜ್ಞಾಪಕ ಮಾಡಿಕೊಳ್ಳಿರಿ. ಆತನು ನನಗೆ ಹೇಳಿದ್ದೇನೆಂದರೆ: ‘ನಾನು ಹೇಳುವ ಮಾತುಗಳನ್ನು ಕೇಳುವಂತೆ ಜನರನ್ನೆಲ್ಲಾ ಒಟ್ಟುಗೂಡಿಸು. ನನ್ನ ಮಾತುಗಳನ್ನು ಕೇಳಿ ಅವರು ಜೀವಮಾನವೆಲ್ಲಾ ನನ್ನನ್ನು ಸನ್ಮಾನಿಸಲು ಮತ್ತು ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು ಮತ್ತು ಅವರ ಮಕ್ಕಳಿಗೂ ಕಲಿಸುವರು.’


“ಯೆಹೂದನೇ, ನಿನ್ನ ಸಹೋದರರು ನಿನ್ನನ್ನೇ ಹೊಗಳುವರು. ನೀನು ನಿನ್ನ ವೈರಿಗಳನ್ನು ಸೋಲಿಸುವೆ. ನಿನ್ನ ಸಹೋದರರು ನಿನಗೇ ಅಡ್ಡಬೀಳುವರು.


“ಇಸ್ರೇಲೇ, ನಿನ್ನ ಸೌಂದರ್ಯವೆಲ್ಲ ಉನ್ನತಸ್ಥಳಗಳಲ್ಲಿ ನಾಶವಾಯಿತು. ಬಲಶಾಲಿಗಳಾದ ಜನರೆಲ್ಲ ಬಿದ್ದು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು