Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:2 - ಪರಿಶುದ್ದ ಬೈಬಲ್‌

2 ಮೂರನೆಯ ದಿನ ಒಬ್ಬ ಯುವ ಸೈನಿಕನು ಚಿಕ್ಲಗಿಗೆ ಬಂದನು. ಈ ಮನುಷ್ಯನು ಸೌಲನಿದ್ದ ಪಾಳೆಯದಿಂದ ಬಂದವನು. ಅವನು ಬಟ್ಟೆಗಳೆಲ್ಲವನ್ನು ಹರಿದುಕೊಂಡಿದ್ದನು; ತಲೆಯ ಮೇಲೆ ಧೂಳನ್ನು ಹಾಕಿಕೊಂಡಿದ್ದನು. ಅವನು ದಾವೀದನ ಬಳಿಗೆ ಬಂದು ಅವನ ಮುಂದೆ, ತನ್ನ ತಲೆಯನ್ನು ನೆಲಕ್ಕೆ ಬಾಗಿಸಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೂರನೆಯ ದಿನದಲ್ಲಿ ಸೌಲನ ಠಾಣ್ಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ವ್ಯಕ್ತಿ ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು. ಅವನು ಸಂತಾಪದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೂರನೆಯ ದಿನದಲ್ಲಿ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಸೌಲನ ಪಾಳೆಯದಿಂದ ಹೊರಟು ದಾವೀದನ ಬಳಿಗೆ ಬಂದು, ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:2
25 ತಿಳಿವುಗಳ ಹೋಲಿಕೆ  

ಆ ದಿನದಂದು ಬೆನ್ಯಾಮೀನ್ ಕುಲದ ಒಬ್ಬನು ದುಃಖದಿಂದ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಧೂಳನ್ನು ಹಾಕಿಕೊಂಡು, ರಣರಂಗದಿಂದ ತಪ್ಪಿಸಿಕೊಂಡು ಓಡಿಹೋದನು.


ಆದರೆ ಒಮ್ಮೆ ಒಬ್ಬ ವ್ಯಕ್ತಿಯು ತಾನು ಶುಭ ಸುದ್ದಿಯನ್ನು ನನಗೆ ತರುತ್ತಿದ್ದೇನೆಂದು ಯೋಚಿಸಿದನು. ಅವನು, ‘ನೋಡು, ಸೌಲನು ಸತ್ತನು’ ಎಂದು ನನಗೆ ಹೇಳಿದನು. ಈ ಸುದ್ದಿಯನ್ನು ನನಗೆ ತಿಳಿಸಿದ್ದರಿಂದ ನಾನು ಅವನಿಗೆ ಕೊಡುಗೆಗಳನ್ನು ಕೊಡಬಹುದೆಂದು ಅವನು ಭಾವಿಸಿದನು. ಆದರೆ ನಾನು ಅವನನ್ನು ಚಿಕ್ಲಗಿನಲ್ಲಿ ಕೊಂದೆನು.


ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದ ಬೇಗನೆ ಇಳಿದು ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದಳು.


ಇದನ್ನು ಕೇಳಿ ಯೆಹೋಶುವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ನೆಲದ ಮೇಲೆ ಬೋರಲಾಗಿ ಬಿದ್ದುಕೊಂಡನು. ಸಾಯಂಕಾಲದವರೆಗೂ ಯೆಹೋಶುವನು ಹಾಗೆಯೇ ಇದ್ದನು. ಇಸ್ರೇಲಿನ ಹಿರಿಯರೂ ಹಾಗೆಯೇ ಮಾಡಿದರು. ಅವರು ದುಃಖದಿಂದ ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡರು.


ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.


ಆ ಸಮಯದಲ್ಲಿ ಯೇಸು ತಾನು ಜೆರುಸಲೇಮಿಗೆ ಹೋಗಬೇಕೆಂದು ಮತ್ತು ಅಲ್ಲಿ ಯೆಹೂದ್ಯರ ಹಿರಿಯ ನಾಯಕರಿಂದಲೂ ಮಹಾಯಾಜಕರಿಂದಲೂ ಮತ್ತು ಧರ್ಮೋಪದೇಶಕರಿಂದಲೂ ತಾನು ಅನೇಕ ಕಷ್ಟಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಜೀವಂತವಾಗಿ ಎದ್ದುಬರಬೇಕಾಗಿದೆ ಎಂದು ತನ್ನ ಶಿಷ್ಯರಿಗೆ ವಿವರಿಸಿ ಹೇಳಿದನು.


ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.


ನಿಮ್ಮ ಬಟ್ಟೆಗಳನ್ನಲ್ಲ, ಹೃದಯವನ್ನು ಹರಿಯಿರಿ.” ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. ಆತನು ಬೇಗನೆ ಕೋಪಿಸುವುದಿಲ್ಲ. ಆತನಲ್ಲಿ ಆಳವಾದ ಪ್ರೀತಿ ಇದೆ. ಆತನು ಯೋಚಿಸಿದ ಶಿಕ್ಷೆಯನ್ನು ಒಂದುವೇಳೆ ನಿಮಗೆ ಕೊಡದೆ ತನ್ನ ಮನಸ್ಸನ್ನು ಬದಲಾಯಿಸಬಹುದು.


ಎರಡು ದಿವಸಗಳ ತರುವಾಯ ನಮ್ಮನ್ನು ತಿರುಗಿ ಜೀವಂತ ಮಾಡುವನು. ಮೂರನೇ ದಿವಸದಲ್ಲಿ ನಮ್ಮನ್ನು ಎಬ್ಬಿಸುವನು. ಆಗ ನಾವು ಆತನ ಸಮೀಪದಲ್ಲಿ ವಾಸಿಸಬಹುದು.


ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.


ಮೂರನೇ ದಿವಸದಲ್ಲಿ ಎಸ್ತೇರಳು ವಿಶೇಷ ಬಟ್ಟೆಗಳನ್ನು ಧರಿಸಿ ಅರಸನ ಅರಮನೆಯ ಒಳಾಂಗಣದಲ್ಲಿ ನಿಂತುಕೊಂಡಳು. ಅದು ರಾಜ ದರ್ಬಾರಿನ ಮುಂದೆ ಇತ್ತು. ರಾಜನು ಸಿಂಹಾಸನದ ಮೇಲೆ, ಪ್ರಜೆಗಳು ಪ್ರವೇಶಿಸುವ ಬಾಗಿಲಿಗೆ ಎದುರಾಗಿ ಕುಳಿತಿದ್ದನು.


ದಾವೀದನು ಬೆಟ್ಟದ ಮೇಲೆ ದೇವರನ್ನು ಆರಾಧಿಸಿದನು. ಆ ಸಮಯದಲ್ಲಿ ಅರ್ಕೀಯನಾದ ಹೂಷೈ ಎಂಬವನು ಅವನಲ್ಲಿಗೆ ಬಂದನು. ಹೂಷೈನ ಅಂಗಿಯು ಹರಿದಿತ್ತು. ಅವನ ತಲೆಯ ಮೇಲೆಲ್ಲಾ ಧೂಳಿತ್ತು.


ತೆಕೋವದ ಆ ಸ್ತ್ರೀಯು ರಾಜನ ಬಳಿಗೆ ಬಂದಾಗ ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ರಾಜನೇ, ನನಗೆ ಸಹಾಯಮಾಡು” ಎಂದು ಹೇಳಿದಳು.


ಬಾಲಕನು ಹೊರಟುಹೋದನು. ದಾವೀದನು ತಾನು ಅಡಗಿದ್ದ ಬೆಟ್ಟದ ಮತ್ತೊಂದು ಕಡೆಯ ಸ್ಥಳದಿಂದ ಹೊರಬಂದನು. ದಾವೀದನು ಯೋನಾತಾನನ ಮುಂದೆ ಬಂದು ಮೂರು ಸಲ ತನ್ನ ಮುಖವನ್ನು ನೆಲದವರೆಗೂ ಬಗ್ಗಿಸಿ ನಮಸ್ಕರಿಸಿದನು. ನಂತರ ದಾವೀದ ಮತ್ತು ಯೋನಾತಾನರು ಪರಸ್ಪರ ಮುದ್ದಿಟ್ಟರು, ಅವರಿಬ್ಬರೂ ಒಟ್ಟಾಗಿ ಅತ್ತರು. ದಾವೀದನು ಯೋನಾತಾನನಿಗಿಂತ ಹೆಚ್ಚು ಅತ್ತನು.


ಆ ಬೆನ್ಯಾಮೀನ್ಯನು ಏಲಿಯ ಬಳಿಗೆ ಹೋಗಿ, “ನಾನು ಈ ದಿನವೇ ರಣರಂಗದಿಂದ ಓಡಿಬಂದೆನು” ಎಂದು ಹೇಳಿದನು. ಏಲಿಯು, “ನನ್ನ ಮಗನೇ ಏನಾಯಿತು?” ಎಂದು ಕೇಳಿದನು.


ಸಹೋದರರು, “ಸ್ವಾಮೀ, ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಜೀವಂತವಾಗಿದ್ದಾನೆ” ಎಂದು ಹೇಳಿದನು. ಬಳಿಕ ಅವರು ಮತ್ತೆ ಯೋಸೇಫನಿಗೆ ಅಡ್ಡಬಿದ್ದರು.


ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡು ಬಹುದಿನಗಳವರೆಗೆ ದುಃಖಪಟ್ಟನು.


ಆ ಸಮಯದಲ್ಲಿ ರೂಬೇನನು ತನ್ನ ಸಹೋದರರೊಡನೆ ಇರಲಿಲ್ಲ. ಅವರು ಯೋಸೇಫನನ್ನು ಮಾರಿದ್ದು ಅವನಿಗೆ ಗೊತ್ತಿರಲಿಲ್ಲ. ರೂಬೇನನು ಬಾವಿಗೆ ಹಿಂತಿರುಗಿ ಬಂದಾಗ, ಯೋಸೇಫನನ್ನು ಅಲ್ಲಿ ಕಾಣದೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು.


ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಅಬ್ರಹಾಮನು ದೃಷ್ಟಿಸಿ ನೋಡಿದಾಗ ತಾವು ಹೋಗಲಿದ್ದ ಸ್ಥಳವು ದೂರದಲ್ಲಿ ಅವನಿಗೆ ಕಾಣಿಸಿತು.


ದಾವೀದನು ಅವನಿಗೆ, “ನೀನು ಎಲ್ಲಿಂದ ಬಂದೆ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಾನು ಇಸ್ರೇಲರ ಪಾಳೆಯದಿಂದ ತಪ್ಪಿಸಿಕೊಂಡು ಬಂದೆ” ಎಂದು ಹೇಳಿದನು.


ನಿನಗೋಸ್ಕರ ಅವರು ದುಃಖಿಸುತ್ತಾ ಅಳುವರು; ತಲೆಯ ಮೇಲೆ ಧೂಳನ್ನು ತೂರಿಕೊಂಡು ಬೂದಿರಾಶಿಯ ಮೇಲೆ ಹೊರಳಾಡುವರು.


ತಾಮಾರಳು ಬೂದಿಯನ್ನು ತೆಗೆದುಕೊಂಡು ತನ್ನ ತಲೆಯ ಮೇಲೆ ಸುರಿದುಕೊಂಡು ತನ್ನ ನಿಲುವಂಗಿಯನ್ನು ಹರಿದುಕೊಂಡಳು; ತನ್ನ ತಲೆಯ ಮೇಲೆ ಕೈಗಳನ್ನಿಟ್ಟುಕೊಂಡು ಗಟ್ಟಿಯಾಗಿ ಗೋಳಾಡಿದಳು.


ರಾಜನು ಅವನ ಸೇವಕರೊಂದಿಗೆ ತನ್ನ ಕಡೆ ಬರುತ್ತಿರುವುದನ್ನು ಅರೌನನು ನೋಡಿದನು. ಅರೌನನು ಹೊರಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು