2 ಸಮುಯೇಲ 1:21 - ಪರಿಶುದ್ದ ಬೈಬಲ್21 “ಗಿಲ್ಬೋವದ ಪರ್ವತಗಳಲ್ಲಿ ಮಂಜೂ ಮಳೆಯೂ ಸುರಿಯದಿರಲಿ. ಆ ಹೊಲಗಳಿಂದ ಕಾಣಿಕೆಯ ವಸ್ತುಗಳೂ ಬಾರದಿರಲಿ. ಅಲ್ಲಿನ ಶಕ್ತಿಸಂಪನ್ನರ ಗುರಾಣಿಗಳೆಲ್ಲ ತುಕ್ಕುಹಿಡಿದಿವೆ. ಸೌಲನ ಗುರಾಣಿಯು ಎಣ್ಣೆಯಿಲ್ಲದೆ ಬಿದ್ದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮಳೆಯಾಗಲಿ, ಮಂಜಾಗಲಿ ಬೀಳದಿರಲಿ ಆ ಗಿಲ್ಬೋವ ಗುಡ್ಡಗಳ ಮೇಲೆ ಅದರ ಮೇಲಿನ ಹೊಲಗಳು ಬೆಳೆಕೊಡದಿರಲಿ ನೈವೇದ್ಯಕೆ. ಏಕೆನೆ ಅಲ್ಲಿ ಬಿದ್ದಿವೆ ಯುದ್ಧವೀರರ ಕತ್ತಿಗುರಾಣಿ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆ ಸೌಲನ ಗುರಾಣಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಗಿಲ್ಬೋವಗುಡ್ಡಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ; ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಬೀಳದೆ ಇರಲಿ, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಯೂ ಅವಮಾನಗೊಂಡು ಬಿದ್ದವು. ಸೌಲನ ಗುರಾಣಿಯೂ ಎಣ್ಣೆಯಿಂದ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆಯಿತು. ಅಧ್ಯಾಯವನ್ನು ನೋಡಿ |
ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:
ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ: “ಆ ಮರವು ಪಾತಾಳಕ್ಕೆ ಹೋದ ದಿವಸದಲ್ಲಿ ನಾನು ಜನರನ್ನು ಅಳುವಂತೆ ಮಾಡಿದೆನು. ಅದನ್ನು ನಾನು ಆಳವಾದ ಸಾಗರದಿಂದ ಮುಚ್ಚಿಬಿಟ್ಟೆನು. ನಾನು ಅದರ ನದಿಗಳನ್ನೂ ಬೇರೆ ನೀರಿನ ತೊರೆಗಳನ್ನೂ ನಿಲ್ಲಿಸಿಬಿಟ್ಟೆನು. ಲೆಬನೋನ್ ಅದಕ್ಕಾಗಿ ಶೋಕಿಸುವಂತೆ ಮಾಡಿದೆನು. ಆ ದೊಡ್ಡ ಮರವು ಹೋದುದಕ್ಕಾಗಿ ಆ ಪ್ರಾಂತ್ಯದ ಬೇರೆ ಎಲ್ಲಾ ಮರಗಳು ದುಃಖದಿಂದ ಕಾಯಿಲೆಯಲ್ಲಿ ಬಿದ್ದವು.