Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:23 - ಪರಿಶುದ್ದ ಬೈಬಲ್‌

23 “ಸೌಲನು ಮತ್ತು ಯೋನಾತಾನನು ಒಬ್ಬರನ್ನೊಬ್ಬರು ಪ್ರೀತಿಸಿದರು; ತಮ್ಮ ಪರಸ್ಪರ ಜೀವಿತದಲ್ಲಿ ಆನಂದಿಸಿದರು. ಸೌಲನು ಮತ್ತು ಯೋನಾತಾನನು ಮರಣದಲ್ಲೂ ಒಂದಾದರು. ಅವರು ಹದ್ದುಗಳಿಗಿಂತ ವೇಗವಾಗಿ ಹೋದರು; ಸಿಂಹಗಳಿಗಿಂತ ಶಕ್ತಿಶಾಲಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸೌಮ್ಯರು, ಅತಿಪ್ರಿಯರು, ಆ ಸೌಲ-ಯೋನಾತಾನರು ಬಾಳಿನಲು, ಸಾವಿನಲು ಬಿಟ್ಟಗಲದವರು. ಹದ್ದಿಗಿಂತ ಅಧಿಕ ವೇಗ ಅವರದು ಸಿಂಹಕ್ಕಿಂತ ಹೆಚ್ಚಿನ ಶಕ್ತಿ ಅವರದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು; ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು; ಸಿಂಹಗಳಿಗಿಂತಲೂ ಬಲವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ, ಸಂತೋಷಕರವಾಗಿಯೂ ಇದ್ದರು. ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ, ಸಿಂಹಗಳಿಗಿಂತ ಬಲವುಳ್ಳವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:23
14 ತಿಳಿವುಗಳ ಹೋಲಿಕೆ  

ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. ಇದು ನಮಗೆ ತುಂಬ ಅಪಾಯಕಾರಿಯಾಗಿದೆ; ನಾವು ಹಾಳಾಗಿಹೋದೆವು.


ಔತಣದ ಏಳನೆಯ ದಿನ ಸೂರ್ಯಾಸ್ತಮಾನಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ಅರ್ಥ ಗೊತ್ತಾಯಿತು. ಅವರು ಸಂಸೋನನಲ್ಲಿಗೆ ಬಂದು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು; ಸಿಂಹಕ್ಕಿಂತ ಕ್ರೂರವಾದದ್ದು ಯಾವುದು” ಎಂದರು. ಅದಕ್ಕೆ ಸಂಸೋನನು ಅವರಿಗೆ, “ನೀವು ನನ್ನ ಹಸುವಿನಿಂದ ನೇಗಿಲು ಹೊಡೆಯದ್ದಿದ್ದರೆ ಒಗಟನ್ನು ಬಿಡಿಸುವುದು ನಿಮ್ಮಿಂದ ಆಗುತ್ತಿರಲಿಲ್ಲ” ಎಂದನು.


ನಮ್ಮನ್ನು ಅಟ್ಟಿಸಿಕೊಂಡು ಬಂದ ಜನರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತಲೂ ವೇಗಶಾಲಿಗಳಾಗಿದ್ದರು. ಅವರು ನಮ್ಮನ್ನು ಬೆಟ್ಟಗಳಿಗೆ ಅಟ್ಟಿಸಿಕೊಂಡು ಬಂದರು. ನಮ್ಮನ್ನು ಹಿಡಿಯುವುದಕ್ಕಾಗಿ ಮರುಭೂಮಿಯಲ್ಲಿ ಅವಿತುಕೊಂಡರು.


ಸಿಂಹವು ಎಲ್ಲಾ ಪ್ರಾಣಿಗಳಲ್ಲಿ ಅತಿ ಬಲಿಷ್ಠವಾದದ್ದು; ಅದು ಯಾವುದಕ್ಕೂ ಭಯಪಡುವುದಿಲ್ಲ.


ಜಂಬುಗಿಡದಿಂದ ಮಾಡಿದ ದೋಣಿಗಳಂತೆಯೂ ಹದ್ದು ತನ್ನ ಬೇಟೆಯ ಮೇಲೆ ಎರಗಲು ಹಾರಿಹೋಗುವಂತೆಯೂ ನನ್ನ ದಿನಗಳು ವೇಗವಾಗಿ ಹೋಗುತ್ತಿವೆ.


ದಾವೀದನು ಸೌಲನೊಂದಿಗೆ ಮಾತನಾಡಿದ ಬಳಿಕ ಯೋನಾತಾನನು ದಾವೀದನೊಂದಿಗೆ ಒಂದಾದನು. ಯೋನಾತಾನನು ತನ್ನನ್ನು ಪ್ರೀತಿಸುವಷ್ಟೇ ದಾವೀದನನ್ನು ಪ್ರೀತಿಸಲಾರಂಭಿಸಿದನು.


“ಬಹಳ ದೂರದಿಂದ ಒಂದು ಜನಾಂಗವು ನಿಮ್ಮೊಂದಿಗೆ ಯುದ್ಧಮಾಡಲು ಬರುವಂತೆ ಯೆಹೋವನು ಮಾಡುವನು. ನೀವು ಅವರ ಭಾಷೆಯನ್ನು ಅರಿಯದಿರುವಿರಿ. ಆಕಾಶದಿಂದ ಹದ್ದು ಹಾರಿಬರುವಂತೆ ಅತೀ ವೇಗವಾಗಿ ಅವರು ನಿಮ್ಮ ಮೇಲೆ ಬೀಳುವರು.


ಅರಣ್ಯದಲ್ಲಿದ್ದ ಕೋಟೆಯಲ್ಲಿ ಗಾದ್ ಕುಲದ ಕೆಲವರು ದಾವೀದನನ್ನು ಸೇರಿಕೊಂಡರು. ಇವರು ಯುದ್ಧದಲ್ಲಿ ನುರಿತ ಸೈನಿಕರಾಗಿದ್ದರು. ಈಟಿ ಬರ್ಜಿಗಳಲ್ಲಿ ಪರಿಣಿತರು; ಸಿಂಹಗಳಂತೆ ಕ್ರೂರಿಗಳು; ಬೆಟ್ಟದ ಮೇಲೆ ಜಿಂಕೆಯ ತರಹ ವೇಗವಾಗಿ ಓಡಬಲ್ಲವರು.


ಯೆಹೋಯಾದಾವನ ಮಗನಾದ ಬೆನಾಯನು ಅವರಲ್ಲಿ ಒಬ್ಬನು. ಅವನು ಬಲಿಷ್ಠ ವ್ಯಕ್ತಿಯಾಗಿದ್ದನು. ಅವನು ಕಬ್ಜಯೇಲಿನವನಾಗಿದ್ದನು. ಬೆನಾಯನು ಅನೇಕ ಸಾಹಸಕಾರ್ಯಗಳನ್ನು ಮಾಡಿದನು. ಬೆನಾಯನು ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಬೆನಾಯನು ಮಂಜುಸುರಿಯುವಾಗ ಒಂದು ತಗ್ಗಿನಲ್ಲಿ ಇಳಿದು ಸಿಂಹವನ್ನು ಕೊಂದನು.


ಯೋನಾತಾನನು, “ಎಂದಿಗೂ ಇಲ್ಲ. ನನ್ನ ತಂದೆಯು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ! ನನ್ನ ತಂದೆಯು ನನಗೆ ತಿಳಿಸದೆ ಏನನ್ನೂ ಮಾಡುವುದಿಲ್ಲ. ಅದು ಬಹು ಮುಖ್ಯವಾದದ್ದೇ ಆಗಿರಲಿ ಇಲ್ಲವೆ ಮುಖ್ಯವಾಗಿಲ್ಲದ್ದೇ ಆಗಿರಲಿ, ನನ್ನ ತಂದೆಯು ನನಗೆ ತಿಳಿಸೇ ತಿಳಿಸುತ್ತಾನೆ. ನನ್ನ ತಂದೆಯು ನಿನ್ನನ್ನು ಕೊಲ್ಲಬೇಕೆಂದಿದ್ದರೆ ನಾನು ನಿನಗೆ ತಿಳಿಸುತ್ತಿರಲಿಲ್ಲವೇ?” ಎಂದು ಹೇಳಿದನು.


ಚೆರೂಯಳಿಗೆ ಯೋವಾಬ್, ಅಬೀಷೈ ಮತ್ತು ಅಸಾಹೇಲ್ ಎಂಬ ಮೂವರು ಮಕ್ಕಳಿದ್ದರು. ಅವರೆಲ್ಲಾ ಅಲ್ಲಿದ್ದರು. ಅಸಾಹೇಲನು ವೇಗದ ಓಟಗಾರ. ಅವನು ಕಾಡಿನ ಜಿಂಕೆಯಂತೆ ವೇಗವಾಗಿ ಓಡಬಲ್ಲವನಾಗಿದ್ದನು.


ಇಸ್ರೇಲಿನ ಕುವರಿಯರೇ, ಸೌಲನಿಗಾಗಿ ಗೋಳಾಡಿರಿ! ಸೌಲನು ನಿಮಗೆ ಕೆಂಪು ಬಟ್ಟೆಗಳನ್ನು ಉಡಿಸಿದನು. ಸೌಲನು ಸುವರ್ಣಾಭರಣಗಳನ್ನು ಬಟ್ಟೆಗಳ ಮೇಲೆ ತೊಡಿಸಿದನು.


ಹೌದು, ಜೆರುಸಲೇಮಿನ ಸ್ತ್ರೀಯರೇ, ನನ್ನ ಪ್ರಿಯನು ಅತ್ಯಂತ ಮನೋಹರನು; ಅವನ ನುಡಿ ಬಹು ಇಂಪು. ಅವನೇ ನನ್ನ ಪ್ರಿಯನು; ಅವನೇ ನನ್ನ ಕಾಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು