2 ಸಮುಯೇಲ 1:24 - ಪರಿಶುದ್ದ ಬೈಬಲ್24 ಇಸ್ರೇಲಿನ ಕುವರಿಯರೇ, ಸೌಲನಿಗಾಗಿ ಗೋಳಾಡಿರಿ! ಸೌಲನು ನಿಮಗೆ ಕೆಂಪು ಬಟ್ಟೆಗಳನ್ನು ಉಡಿಸಿದನು. ಸೌಲನು ಸುವರ್ಣಾಭರಣಗಳನ್ನು ಬಟ್ಟೆಗಳ ಮೇಲೆ ತೊಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ, ನಿಮಗೆ ಉಲ್ಲಾಸಕರವಾದ ರಕ್ತಾಂಬರಗಳನ್ನು ಉಡಿಸಿ, ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸೌಲನಿಗಾಗಿ ಅತ್ತು ಪ್ರಲಾಪಿಸಿರಿ ಇಸ್ರಯೇಲಿನ ಮಹಿಳೆಯರೇ, ಉಲ್ಲಾಸಕರ ರಕ್ತಾಂಬರಗಳ ಉಡಿಸಿದವನು ಅವನೇ ಅಲ್ಲವೆ ನಿಮಗೆ? ಅವುಗಳ ಮೇಲೆ ಸುವರ್ಣಾಂಬರಗಳ ತೊಡಿಸಿದವನು ಆತನೇ ಅಲ್ಲವೆ ನಿಮಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ; ನಿಮಗೆ ಉಲ್ಲಾಸಕರವಾದ ರಕ್ತಾಂಬರಗಳನ್ನು ಉಡಿಸಿ ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಇಸ್ರಾಯೇಲಿನ ಪುತ್ರಿಯರೇ, ಸೌಲನಿಗೋಸ್ಕರ ಅಳಿರಿ. ನಿಮಗೆ ರಕ್ತಾಂಬರವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ. ನಿಮ್ಮ ಉಡುಗೆಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ. ಅಧ್ಯಾಯವನ್ನು ನೋಡಿ |
‘ಖಂಡಿತವಾಗಿ ಅವರು ಗೆದ್ದಿದ್ದಾರೆ, ತಾವು ಸೋಲಿಸಿದ ಜನರಿಂದ ವಸ್ತುಗಳನ್ನು ಪಡೆಯುತ್ತಿದ್ದಾರೆ! ಆ ವಸ್ತುಗಳನ್ನು ತಮ್ಮಲ್ಲಿಯೇ ಹಂಚಿಕೊಳ್ಳುತ್ತಿದ್ದಾರೆ! ಪ್ರತಿಯೊಬ್ಬ ಸೈನಿಕನು ಒಬ್ಬಿಬ್ಬರು ಹುಡುಗಿಯರನ್ನು ತೆಗೆದುಕೊಳ್ಳುತ್ತಿರಬೇಕು. ಸೀಸೆರನು ವರ್ಣರಂಜಿತ ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು. ಹೌದು! ವಿಜಯಿ ಸೀಸೆರನು ಧರಿಸಲು ಬಣ್ಣಬಣ್ಣದ ಒಂದು ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು; ಅಥವಾ ಎರಡು ಬಟ್ಟೆಗಳನ್ನು ತೆಗೆದುಕೊಳ್ಳುತ್ತಿರಬಹುದು.’