2 ಸಮುಯೇಲ 1:26 - ಪರಿಶುದ್ದ ಬೈಬಲ್26 ನನ್ನ ಸೋದರನಾದ ಯೋನಾತಾನನೇ, ನಿನಗಾಗಿ ನಾನು ದುಃಖಿಸುವೆ! ನಿನ್ನ ಗೆಳೆತನವು ನನಗೆ ಉಲ್ಲಾಸದಾಯಕವಾಗಿತ್ತು. ನನ್ನ ಮೇಲಿನ ನಿನ್ನ ಪ್ರೀತಿಯು ಸ್ತ್ರೀಯರ ಪ್ರೀತಿಗಿಂತಲೂ ಅತಿಶಯವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೋನಾತಾನನೇ, ನನ್ನ ಸಹೋದರನೇ ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ. ನೀನು ನನಗೆ ಮನೋಹರನಾಗಿದ್ದಿ. ನನ್ನ ಮೇಲಿನ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದು. ಅದು ಸತಿ ಪ್ರೇಮಕ್ಕಿಂತ ಶ್ರೇಷ್ಠವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಯೋನಾತಾನನೇ, ಸಹೋದರನೇ, ಮನೋಹರನೇ, ನಿನ್ನ ಮರಣ ತಂದಿದೆ ಅತೀವ ಸಂಕಟ ನನಗೆ, ನನ್ನ ಮೇಲೆ ನಿನಗಿದ್ದ ಪ್ರೀತಿ ಅದೆಷ್ಟು ಆಶ್ಚರ್ಯಕರ! ಸತಿಪ್ರೇಮಕ್ಕಿಂತಲೂ ಅದು ಅಮೋಘಕರ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯೋನಾತಾನನೇ, ನನ್ನ ಸಹೋದರನೇ, ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ; ನೀನು ನನಗೆ ಬಹುಮನೋಹರನಾಗಿದ್ದಿ. ನನ್ನ ಮೇಲಿದ್ದ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದೇ ಸರಿ; ಅದು ಸತೀಪ್ರೇಮಕ್ಕಿಂತ ಶ್ರೇಷ್ಠವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನನ್ನ ಸಹೋದರನಾದ ಯೋನಾತಾನನೇ, ನಾನು ನಿನಗೋಸ್ಕರ ಶೋಕಿಸುತ್ತೇನೆ. ನೀನು ನನಗೆ ಬಹಳ ಮನೋಹರನಾಗಿದ್ದಿ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯಕರವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು. ಅಧ್ಯಾಯವನ್ನು ನೋಡಿ |