2 ಸಮುಯೇಲ 1:6 - ಪರಿಶುದ್ದ ಬೈಬಲ್6 ಅದಕ್ಕೆ ಆ ಯುವಕನು, “ನಾನು ಆಕಸ್ಮಿಕವಾಗಿ ಗಿಲ್ಬೋವದ ಶಿಖರದ ಮೇಲಿದ್ದೆ. ಸೌಲನು ತನ್ನ ಭರ್ಜಿಯ ಮೇಲೆ ಒರಗಿಕೊಂಡಿದ್ದನ್ನು ಅಲ್ಲಿಂದಲೇ ನಾನು ನೋಡಿದೆ. ಫಿಲಿಷ್ಟಿಯರ ರಥಗಳು ಮತ್ತು ಕುದುರೆಸವಾರರು ಸೌಲನ ಹತ್ತಿರಕ್ಕೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನಾನು ಆಕಸ್ಮಿಕವಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವುದನ್ನೂ ರಥಗಳು ಮತ್ತು ರಾಹುತರು ಅವನನ್ನು ಹಿಂದಟ್ಟಿ ಬರುತ್ತಿರುವುದನ್ನೂ ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವನು, “ನಾನು ಅಕಸ್ಮಾತ್ತಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಹೋದಾಗ ಸೌಲ ತಮ್ಮ ಭರ್ಜಿಯನ್ನೂರಿಕೊಂಡು ನಿಂತಿದ್ದರು. ರಥಿಕರೂ ರಾಹುತರೂ ಅವರನ್ನು ಹಿಂದಟ್ಟಿಬರುತ್ತಿರುವುದನ್ನೂ ಕಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾನು ಅಕಸ್ಮಾತ್ತಾಗಿ ಗಿಲ್ಬೋವಪರ್ವತ ಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವದನ್ನೂ ರಥಿಕರೂ ರಾಹುತರೂ ಅವನನ್ನು ಹಿಂದಟ್ಟಿ ಬರುತ್ತಿರುವದನ್ನೂ ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಅವನು, “ನಾನು ಅಕಸ್ಮಾತ್ತಾಗಿ ಗಿಲ್ಬೋವ ಬೆಟ್ಟಕ್ಕೆ ಹೋಗಿದ್ದೆನು. ಅಲ್ಲಿ ಸೌಲನು ತನ್ನ ಈಟಿಯನ್ನು ಊರಿಕೊಂಡು ನಿಂತಿದ್ದನು. ಆಗ ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು. ಅಧ್ಯಾಯವನ್ನು ನೋಡಿ |