Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:9 - ಪರಿಶುದ್ದ ಬೈಬಲ್‌

9 ಸೌಲನು ನನಗೆ, ‘ದಯವಿಟ್ಟು ನನ್ನನ್ನು ಕೊಂದುಬಿಡು. ನಾನು ಬಹು ಸಂಕಟದಲ್ಲಿದ್ದೇನೆ. ನಾನು ಈಗಾಗಲೇ ಸತ್ತವನಂತಿದ್ದೇನೆ’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಅವನು ನನಗೆ, ‘ನೀನು ದಯೆಮಾಡಿ ಹತ್ತಿರ ಬಂದು ನನ್ನನ್ನು ಕೊಂದು ಹಾಕು. ಯಾಕೆಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವುದರಿಂದ ನನಗೆ ಸಂಕಟ ಹಿಡಿದದೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಅವರು, “ನೀನು ಮನಸ್ಸುಮಾಡಿ ಹತ್ತಿರ ಬಂದು ನನ್ನನ್ನು ಕೊಂದುಹಾಕು; ಏಕೆಂದರೆ, ನನ್ನಲ್ಲಿ ಇನ್ನೂ ಪೂರ್ಣಶಕ್ತಿಯಿದ್ದರೂ ಪ್ರಾಣಸಂಕಟಕ್ಕೆ ಸಿಕ್ಕಿಕೊಂಡಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಅವನು ನನಗೆ - ನೀನು ಕೃಪೆಮಾಡಿ ಹತ್ತಿರ ಬಂದು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವದರಿಂದ ನನಗೆ ಸಂಕಟ ಹಿಡಿದದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಅವನು ನನಗೆ, ‘ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು. ಏಕೆಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣವಾಗಿರುವುದರಿಂದ ಸಂಕಟವು ನನ್ನನ್ನು ಹಿಡಿದಿದೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:9
6 ತಿಳಿವುಗಳ ಹೋಲಿಕೆ  

ನಂತರ ಸೌಲನು, ‘ನೀನು ಯಾರು?’ ಎಂದು ಕೇಳಿದನು. ‘ನಾನೊಬ್ಬ ಅಮಾಲೇಕ್ಯನು’ ಎಂದು ನಾನು ಹೇಳಿದೆನು.


ಆದ್ದರಿಂದ ನಾನು ಅವನನ್ನು ಕೊಂದೆನು. ಅವನು ಮತ್ತೆ ಜೀವದಿಂದ ಉಳಿಯಲಾರದಷ್ಟು ಗಾಯಗೊಂಡಿದ್ದಾನೆಂಬುದು ನನಗೆ ತಿಳಿದಿತ್ತು. ನಂತರ ನಾನು ಅವನ ತಲೆಯಿಂದ ಕಿರೀಟವನ್ನೂ ತೋಳಿನ ಕವಚವನ್ನೂ ತೆಗೆದುಕೊಂಡೆನು. ನನ್ನ ಒಡೆಯನೇ, ನಾನು ಆ ಕಿರೀಟವನ್ನು ಮತ್ತು ತೋಳಿನ ಕವಚವನ್ನು ನಿನ್ನ ಬಳಿಗೆ ತಂದಿದ್ದೇನೆ” ಎಂದು ಹೇಳಿದನು.


ಕೂಡಲೆ ಅಬೀಮೆಲೆಕನು ತನ್ನ ಆಯುಧವಾಹಕನಿಗೆ, “ನಿನ್ನ ಖಡ್ಗವನ್ನು ಹೊರತೆಗೆದು ನನ್ನನ್ನು ಕೊಂದುಬಿಡು. ‘ಒಬ್ಬ ಹೆಂಗಸು ಅಬೀಮೆಲೆಕನನ್ನು ಕೊಂದಳು’ ಎಂದು ಜನರು ಹೇಳಬಾರದು. ಅದಕ್ಕಾಗಿ ನೀನು ನನ್ನನ್ನು ಕೊಲ್ಲಬೇಕೆಂದು ನನ್ನ ಇಚ್ಛೆ” ಎಂದನು. ಆದ್ದರಿಂದ ಆ ಸೇವಕನು ಅಬೀಮೆಲೆಕನನ್ನು ತನ್ನ ಕತ್ತಿಯಿಂದ ಇರಿದನು; ಅಬೀಮೆಲೆಕನು ಸತ್ತನು.


ಸೌಲನು ತನ್ನ ಅಯುಧವಾಹಕನಿಗೆ, “ನಿನ್ನ ಖಡ್ಗದಿಂದ ಇರಿದು ನನ್ನನ್ನು ಕೊಂದುಬಿಡು. ಆಗ, ಈ ಪರದೇಶೀಯರು ನನ್ನನ್ನು ಗಾಯಗೊಳಿಸುವುದಕ್ಕಾಗಲಿ ಅಪಹಾಸ್ಯ ಮಾಡುವುದಕ್ಕಾಗಲಿ ಸಾಧ್ಯವಾಗುವುದಿಲ್ಲ” ಎಂದನು. ಆದರೆ ಸೌಲನ ಆಯುಧವಾಹಕನು ನಿರಾಕರಿಸಿದನು. ಸೌಲನ ಸಹಾಯಕನು ಬಹಳ ಭಯಗೊಂಡಿದ್ದನು. ಆದ್ದರಿಂದ ಸೌಲನು ತನ್ನ ಸ್ವಂತ ಖಡ್ಗದಿಂದಲೇ ಇರಿದು ಆತ್ಮಹತ್ಯೆ ಮಾಡಿಕೊಂಡನು.


ಆಗ ಸೌಲನು ತನ್ನ ಆಯುಧ ಹೊರುವವನಿಗೆ, “ನಿನ್ನ ಖಡ್ಗದಿಂದ ನನ್ನನ್ನು ಇರಿದು ಕೊಂದುಹಾಕು. ಆಗ ಪರದೇಶಿಯರು ಬಂದು ನನ್ನನ್ನು ಗಾಯಪಡಿಸಿ ಹಾಸ್ಯಮಾಡಲು ಸಾಧ್ಯವಾಗುವುದಿಲ್ಲ” ಎಂದನು. ಆದರೆ ಅವನ ಆಯುಧಹೊರುವವನು ಅದಕ್ಕೆ ಒಪ್ಪಲಿಲ್ಲ; ಸೌಲನನ್ನು ಕೊಲ್ಲಲು ಅವನು ಹೆದರಿದನು. ಆಗ ಸೌಲನು ತನ್ನ ಖಡ್ಗದ ಮೇಲೆ ತಾನೇ ಬಿದ್ದು ಸತ್ತನು.


ಆ ದಿನಗಳಲ್ಲಿ ಜನರು ಸಾಯುವುದಕ್ಕೆ ಮಾರ್ಗವನ್ನು ಹುಡುಕಿದರೂ ಅವರಿಗೆ ಸಿಕ್ಕುವುದಿಲ್ಲ. ಅವರು ಮರಣವನ್ನು ಬಯಸಿದರೂ ಮರಣವು ಅವರಿಗೆ ಮರೆಯಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು