Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:12 - ಪರಿಶುದ್ದ ಬೈಬಲ್‌

12 ನೀನು ಶಕ್ತನಾಗಿರು. ನಮ್ಮ ಜನರಿಗಾಗಿ ಮತ್ತು ನಮ್ಮ ದೇವರ ನಗರಗಳಿಗಾಗಿ ಧೈರ್ಯದಿಂದ ಹೋರಾಡೋಣ. ಯೆಹೋವನು ತನಗೆ ಸರಿಯೆನಿಸುವುದನ್ನು ಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದ್ದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಪೌರುಷವನ್ನು ತೋರಿಸೋಣ; ಯೆಹೋವನು ತನಗೆ ಸರಿಕಾಣುವಂಥದನ್ನು ಮಾಡಲಿ ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ, ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:12
24 ತಿಳಿವುಗಳ ಹೋಲಿಕೆ  

ಜಾಗರೂಕರಾಗಿರಿ, ನಂಬಿಕೆಯಲ್ಲಿ ದೃಢವಾಗಿರಿ. ಧೈರ್ಯದಿಂದಿರಿ ಮತ್ತು ಬಲಿಷ್ಠರಾಗಿರಿ.


ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”


ಸಮುವೇಲನು ಏನನ್ನೂ ಮುಚ್ಚಿಡದೆ, ಎಲ್ಲವನ್ನೂ ಏಲಿಗೆ ತಿಳಿಸಿದನು. ಏಲಿಯು, “ಆತನು ಯೆಹೋವ. ಆತನು ತನಗೆ ಸರಿಕಾಣುವದನ್ನೇ ಮಾಡಲಿ” ಎಂದು ಹೇಳಿದನು.


ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.”


ನಮಗೆದುರಾಗಿ ಬಂದಿದ್ದ ಪರಿಸ್ಥಿತಿಯನ್ನು ನಾನು ಚೆನ್ನಾಗಿ ಅವಲೋಕಿಸಿ ನಮ್ಮ ಜನರೊಂದಿಗೆ ಕುಟುಂಬ ಕುಟುಂಬವಾಗಿ, ಅಧಿಕಾರಿಗಳಿಗೆ ಮತ್ತು ಉಳಿದ ಜನರಿಗೆ ಹೀಗೆ ಹೇಳಿದೆನು: “ನಮ್ಮ ವೈರಿಗಳ ಬಗ್ಗೆ ನೀವು ಏನೂ ಹೆದರಬೇಡಿರಿ. ನಮ್ಮ ದೇವರನ್ನು ನೆನಪುಮಾಡಿರಿ. ಯೆಹೋವನು ಬಲಶಾಲಿಯೂ ಸರ್ವಶಕ್ತನೂ ಆಗಿದ್ದಾನೆ. ನೀವು ನಿಮ್ಮ ಸಹೋದರರಿಗಾಗಿ, ನಿಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ನಿಮ್ಮನಿಮ್ಮ ಹೆಂಡತಿಯರಿಗಾಗಿ ಮತ್ತು ಮನೆಗಳಿಗಾಗಿ ಹೋರಾಡಿರಿ.”


ಫಿಲಿಷ್ಟಿಯರೇ, ಧೈರ್ಯದಿಂದಿರಿ! ಶೂರರಂತೆ ಹೋರಾಡಿ! ಇಬ್ರಿಯರು ಪುರಾತನ ಕಾಲದಲ್ಲಿ ನಮಗೆ ಗುಲಾಮರಾಗಿದ್ದರು. ಆದಕಾರಣ ಶೂರರಂತೆ ಹೋರಾಡಿರಿ, ಇಲ್ಲವಾದರೆ ನೀವು ಅವರಿಗೆ ಗುಲಾಮರಾಗುವಿರಿ!” ಎಂದು ಹೇಳಿದರು.


ಆದರೆ ಇಸ್ರೇಲರು ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ. ನಿನಗೆ ಸರಿಯೆನಿಸಿದಂತೆ ಮಾಡು. ಆದರೆ ದಯವಿಟ್ಟು ಇಂದು ನಮ್ಮನ್ನು ರಕ್ಷಿಸು” ಎಂದು ಪ್ರಾರ್ಥಿಸಿದರು.


ನಾವು ಧೈರ್ಯಶಾಲಿಗಳಾಗಿದ್ದು ಅಂಜದೆ ನಮ್ಮ ಜನರಿಗಾಗಿಯೂ ನಮ್ಮ ದೇವರ ಪಟ್ಟಣಗಳಿಗಾಗಿಯೂ ಯುದ್ಧಮಾಡೋಣ. ಯೆಹೋವನು ತನ್ನ ಚಿತ್ತದಂತೆ ನಮ್ಮನ್ನು ನಡೆಸಲಿ” ಎಂದು ಹೇಳಿದನು.


“ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.


ದಾವೀದನು ಸೌಲನಿಗೆ, “ಜನರು ಗೊಲ್ಯಾತನಿಗೆ ಹೆದರಿಕೊಳ್ಳುವುದು ಬೇಕಾಗಿಲ್ಲ. ನಾನು ನಿನ್ನ ಸೇವಕ. ನಾನು ಈ ಫಿಲಿಷ್ಟಿಯನ ವಿರುದ್ಧ ಹೋರಾಡುತ್ತೇನೆ” ಎಂದು ಹೇಳಿದನು.


ಆ ಕೋಟೆಯಲ್ಲಿದ್ದ ಫಿಲಿಷ್ಟಿಯರು ಯೋನಾತಾನ ಮತ್ತು ಅವನ ಸಹಾಯಕನಿಗೆ, “ನಮ್ಮ ಹತ್ತಿರಕ್ಕೆ ಬನ್ನಿ. ನಾವು ನಿಮಗೆ ಒಂದು ಪಾಠ ಕಲಿಸುತ್ತೇವೆ” ಎಂದು ಕೂಗಿ ಹೇಳಿದರು. ಯೋನಾತಾನನು ತನ್ನ ಸಹಾಯಕನಿಗೆ, “ಬೆಟ್ಟದ ಮೇಲಿನವರೆಗೆ ನನ್ನನ್ನು ಹಿಂಬಾಲಿಸು. ಯೆಹೋವನು ಇಸ್ರೇಲರ ವಶಕ್ಕೆ ಫಿಲಿಷ್ಟಿಯರನ್ನು ಒಪ್ಪಿಸಿದ್ದಾನೆ” ಎಂದು ಹೇಳಿದನು.


ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.


ಯಾರಾದರೂ ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದರೆ ಅಥವಾ ಯಾರಾದರೂ ನಿನ್ನನ್ನು ವಿರೋಧಿಸಿದರೆ ಅವನನ್ನು ಕೊಲ್ಲಲಾಗುವುದು. ನೀನು ಮಾತ್ರ ಸ್ಥಿರಚಿತ್ತನಾಗಿರು; ಧೈರ್ಯಶಾಲಿಯಾಗಿರು” ಎಂದು ಹೇಳಿದರು.


ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಭೂಮಿಯು ಸಾರವಾದದ್ದೋ ಅಥವಾ ನಿಸ್ಸಾರವಾದದ್ದೋ, ಮರಗಳನ್ನು ಹೊಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಲು ಪ್ರಯತ್ನ ಮಾಡಿ” ಎಂದು ಹೇಳಿದನು. (ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.)


ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;


ಯೋವಾಬನು ಅಬೀಷೈಗೆ, “ಅರಾಮ್ಯರು ನನಗಿಂತ ಬಲಶಾಲಿಗಳೆಂದು ಕಂಡುಬಂದರೆ ನೀನು ನನಗೆ ಸಹಾಯಮಾಡು. ಅಮ್ಮೋನಿಯರು ನಿನಗೆ ಬಲಶಾಲಿಗಳೆಂದು ಕಂಡು ಬಂದರೆ ನಾನು ನಿನ್ನ ಸಹಾಯಕ್ಕೆ ಬರುತ್ತೇನೆ.


ಆಮೇಲೆ ಮೋಶೆಯು ಯೆಹೋಶುವನನ್ನು ಕರೆದು ಎಲ್ಲಾ ಇಸ್ರೇಲರ ಎದುರಿನಲ್ಲಿ, “ಶಕ್ತಿಶಾಲಿಯಾಗಿದ್ದು ಧೈರ್ಯಗೊಂಡಿರು. ನೀನು ಈ ಜನರನ್ನು ಯೆಹೋವನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂಥ ದೇಶಕ್ಕೆ ನಡೆಸು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಇಸ್ರೇಲರಿಗೆ ಸಹಾಯ ಮಾಡು.


ಆದರೆ ನನ್ನ ಮೇಲೆ ಯೆಹೋವನಿಗೆ ಇಷ್ಟವಿಲ್ಲವೆಂದು ತೋರಿದರೆ, ಆಗ ನನ್ನ ವಿರುದ್ಧವಾಗಿ ಆತನು ತನಗೆ ತೋಚಿದ್ದನ್ನು ಮಾಡಲಿ” ಎಂದನು.


ಅವರೆಲ್ಲಾ ಸೇರಿ ಜೆರುಸಲೇಮಿಗೆ ವಿರುದ್ಧವಾಗಿ ಗಲಭೆ ಎಬ್ಬಿಸುವ ಹಂಚಿಕೆಯನ್ನು ಹೂಡಿದರು; ಯುದ್ಧ ಮಾಡುವ ಯೋಚನೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು