2 ಸಮುಯೇಲ 10:14 - ಪರಿಶುದ್ದ ಬೈಬಲ್14 ಅರಾಮ್ಯರು ಓಡಿಹೋಗುತ್ತಿರುವುದನ್ನು ನೋಡಿದ ಅಮ್ಮೋನಿಯರು ಅಬೀಷೈಯನ್ನು ಬಿಟ್ಟು ಓಡಿಹೋದರು. ಅವರು ತಮ್ಮ ನಗರಕ್ಕೆ ಹಿಂದಿರುಗಿದರು. ಯೋವಾಬನು ಯುದ್ಧರಂಗದಿಂದ ಹಿಂದಿರುಗಿ ಜೆರುಸಲೇಮಿಗೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ, ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಅಮ್ಮೋನಿಯರೊಡನೆ ಯುದ್ಧ ಮಾಡುವುದನ್ನು ಬಿಟ್ಟು ಯೆರೂಸಲೇಮಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು ಜೆರುಸಲೇಮಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇವರು ಓಡಿಹೋಗುವದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವದನ್ನು ಬಿಟ್ಟು ಯೆರೂಸಲೇವಿುಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರು ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು, ಯೆರೂಸಲೇಮಿಗೆ ತಿರುಗಿಹೋದನು. ಅಧ್ಯಾಯವನ್ನು ನೋಡಿ |
ದಾವೀದನು ಅಬೀಷೈಯನಿಗೆ, “ಬಿಕ್ರೀಯ ಮಗನಾದ ಶೆಬನು ಅಬ್ಷಾಲೋಮನಿಗಿಂತ ನಮಗೆ ಹೆಚ್ಚು ಅಪಾಯಕಾರಿಯಾಗಿದ್ದಾನೆ. ಆದ್ದರಿಂದ ನನ್ನ ಸೇವಕರನ್ನು ಕರೆದುಕೊಂಡು, ಶೆಬನನ್ನು ಅಟ್ಟಿಸಿಕೊಂಡು ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಳ್ಳುವುದಕ್ಕಿಂತ ಮುಂಚೆಯೇ ತ್ವರಿತವಾಗಿ ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಂಡರೆ, ಅವನು ನಮ್ಮಿಂದ ತಪ್ಪಿಸಿಕೊಂಡು ಬಿಡುತ್ತಾನೆ” ಎಂದು ಹೇಳಿದನು.