Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:15 - ಪರಿಶುದ್ದ ಬೈಬಲ್‌

15 ಇಸ್ರೇಲರು ತಮ್ಮನ್ನು ಸೋಲಿಸಿದರೆಂಬುದನ್ನು ಅರಾಮ್ಯರು ತಿಳಿದುಕೊಂಡರು. ಆದ್ದರಿಂದ ಅವರೆಲ್ಲರೂ ಒಟ್ಟಾಗಿ ಸೇರಿ ಒಂದು ದೊಡ್ಡ ಸೈನ್ಯವನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಾಮ್ಯರಿಗೆ ತಮ್ಮ ಸೈನ್ಯವು ಇಸ್ರಾಯೇಲ್ಯರಿಂದ ಅಪಜಯಹೊಂದಿತೆಂದು ಗೊತ್ತಾದಾಗ ಅವರೆಲ್ಲರೂ ಒಟ್ಟಾಗಿ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸಿರಿಯಾದವರಿಗೆ ತಮ್ಮ ಸೈನ್ಯ ಇಸ್ರಯೇಲರಿಂದ ಪರಾಭವಗೊಂಡಿತೆಂದು ಗೊತ್ತಾದಾಗ ಅವರೆಲ್ಲರೂ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅರಾಮ್ಯರಿಗೆ ತಮ್ಮ ಸೈನ್ಯವು ಇಸ್ರಾಯೇಲ್ಯರಿಂದ ಅಪಜಯಹೊಂದಿತೆಂದು ಗೊತ್ತಾದಾಗ ಅವರೆಲ್ಲರೂ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರೆಲ್ಲರು ಒಟ್ಟಾಗಿ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:15
11 ತಿಳಿವುಗಳ ಹೋಲಿಕೆ  

ಅನ್ಯಜನಾಂಗಗಳು ಕೋಪಗೊಂಡಿರುವುದೇಕೆ? ಅವರು ಮೂರ್ಖತನದ ಸಂಚುಗಳನ್ನು ಮಾಡುತ್ತಿರುವುದೇಕೆ?


ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.


ಹದದೆಜೆರನು ರೆಹೋಬನ ಮಗ ಹಾಗೂ ಚೋಬದ ರಾಜ. ದಾವೀದನು ಯೂಫ್ರೇಟೀಸ್ ನದಿಯ ಸುತ್ತಲಿನ ಪ್ರದೇಶವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ, ಹದದೆಜೆರನನ್ನು ಸೋಲಿಸಿದನು.


ಅರಾಮ್ಯರು ಓಡಿಹೋಗುತ್ತಿರುವುದನ್ನು ನೋಡಿದ ಅಮ್ಮೋನಿಯರು ಅಬೀಷೈಯನ್ನು ಬಿಟ್ಟು ಓಡಿಹೋದರು. ಅವರು ತಮ್ಮ ನಗರಕ್ಕೆ ಹಿಂದಿರುಗಿದರು. ಯೋವಾಬನು ಯುದ್ಧರಂಗದಿಂದ ಹಿಂದಿರುಗಿ ಜೆರುಸಲೇಮಿಗೆ ಬಂದನು.


ಯೂಫ್ರೇಟೀಸ್ ನದಿಯ ಮತ್ತೊಂದು ತೀರದಲ್ಲಿ ವಾಸಿಸುತ್ತಿದ್ದ ಅರಾಮ್ಯರನ್ನು ಕರೆತರಲು ಹದದೆಜೆರನು ಸಂದೇಶಕರನ್ನು ಕಳುಹಿಸಿದನು. ಈ ಅರಾಮ್ಯರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.


ಹಾಚೋರಿನ ಅರಸನಾದ ಯಾಬೀನನು ನಡೆದ ಎಲ್ಲ ಸಂಗತಿಗಳ ಬಗ್ಗೆ ಕೇಳಿದನು. ಅದಕ್ಕಾಗಿ ಅವನು ಅನೇಕ ಅರಸರ ಸೈನ್ಯಗಳನ್ನು ಒಟ್ಟಿಗೆ ಸೇರಿಸುವ ನಿರ್ಧಾರವನ್ನು ಮಾಡಿದನು. ಮಾದೋನಿನ ಅರಸನಾದ ಯೋಬಾಬನಿಗೆ, ಶಿಮ್ರೋನಿನ ಅರಸನಿಗೆ, ಅಕ್ಷಾಫಿನ ಅರಸನಿಗೆ ಯಾಬೀನನು ಸಂದೇಶವನ್ನು ಕಳುಹಿಸಿದನು.


ಈ ಎಲ್ಲ ಅರಸರು ಮೇರೋಮ್ ಸಣ್ಣ ನದಿಯ ಹತ್ತಿರ ಒಟ್ಟುಗೂಡಿ ತಮ್ಮ ಸೈನ್ಯಗಳನ್ನು ಒಂದೇ ಪಾಳೆಯದಲ್ಲಿ ಸೇರಿಸಿದರು. ಅವರು ಇಸ್ರೇಲಿನ ವಿರುದ್ಧ ಯುದ್ಧ ಮಾಡಲು ಯೋಜನೆಗಳನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು