Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:19 - ಪರಿಶುದ್ದ ಬೈಬಲ್‌

19 ಹದದೆಜೆರನ ಸೇವೆಯಲ್ಲಿದ್ದ ರಾಜರಿಗೆ ಇಸ್ರೇಲರು ತಮ್ಮನ್ನು ಸೋಲಿಸಿದುದು ತಿಳಿದುಬಂತು. ಆದುದರಿಂದ ಅವರು ಇಸ್ರೇಲರೊಂದಿಗೆ ಶಾಂತಿಸಂಧಾನ ಮಾಡಿಕೊಂಡು ಅವರ ಸೇವಕರಾದರು. ಅಂದಿನಿಂದ ಅಮ್ಮೋನಿಯರಿಗೆ ಮತ್ತೆ ಸಹಾಯಮಾಡಲು ಅರಾಮ್ಯರು ಭಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರಿಂದ ತಾವು ಸೋತುಹೋದೆವೆಂದು ತಿಳಿದು, ಅವರೊಡನೆ ಒಪ್ಪಂದ ಮಾಡಿಕೊಂಡು, ಅವರಿಗೆ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಧೈರ್ಯದಿಂದ ಮುಂದೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹದದೆಜೆರನಿಗೆ ದಾಸರಾಗಿದ್ದ ರಾಜರೆಲ್ಲರೂ ಇಸ್ರಯೇಲರ ಮುಂದೆ ತಮ್ಮ ಕೈಸಾಗದೆಂದು ತಿಳಿದು ಅವರೊಡನೆ ಸಂಧಾನ ಮಾಡಿಕೊಂಡು ಅವರ ಅಧೀನರಾದರು. ಅಂದಿನಿಂದ ಸಿರಿಯಾದವರು ಅಮ್ಮೋನಿಯರಿಗೆ ಸಹಾಯ ಮಾಡುವುದಕ್ಕೆ ಧೈರ್ಯಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರ ಮುಂದೆ ತಮ್ಮ ಕೈಸಾಗದೆಂದು ತಿಳಿದು ಅವರೊಡನೆ ಒಪ್ಪಂದಮಾಡಿಕೊಂಡು ಅವರ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯ ಮಾಡುವದಕ್ಕೆ ಧೈರ್ಯಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹದದೆಜೆರನ ಸೇವಕರಾದ ಸಮಸ್ತ ಅರಸರು ತಾವು ಇಸ್ರಾಯೇಲರ ಮುಂದೆ ಸೋತುಹೋದದ್ದನ್ನು ಕಂಡಾಗ, ಅವರು ಇಸ್ರಾಯೇಲರ ಸಂಗಡ ಸಂಧಾನ ಮಾಡಿಕೊಂಡು ಅವರಿಗೆ ಅಧೀನರಾದರು. ತರುವಾಯ ಅರಾಮ್ಯರು ಅಮ್ಮೋನಿಯರಿಗೆ ಮತ್ತೆ ಸಹಾಯ ಮಾಡುವುದಕ್ಕೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:19
12 ತಿಳಿವುಗಳ ಹೋಲಿಕೆ  

ಬಳಿಕ ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಅರಾಮ್ಯರು ದಾವೀದನ ಸೇವಕರಾದರು ಮತ್ತು ಅವನಿಗೆ ಕಾಣಿಕೆಗಳನ್ನು ತಂದರು. ದಾವೀದನು ಹೋದ ಸ್ಥಳಗಳಲ್ಲೆಲ್ಲ ಯೆಹೋವನು ಜಯವನ್ನು ಉಂಟುಮಾಡಿದನು.


ಅವಳ ಯಾತನೆಯನ್ನು ಕಂಡು ರಾಜರುಗಳು ಭಯದಿಂದ ದೂರನಿಂತು ಹೀಗೆನ್ನುವರು: ‘ಅಯ್ಯೋ, ಅಯ್ಯೋ, ಮಹಾನಗರಿಯೇ, ಬಲಿಷ್ಠವಾದ ಬಾಬಿಲೋನ್ ಪಟ್ಟಣವೇ, ಒಂದೇ ಗಳಿಗೆಯಲ್ಲಿ ನಿನಗೆ ದಂಡನೆ ಆಯಿತಲ್ಲಾ!’


ಅರಸನೇ, ನೀನು ರಾಜಾಧಿರಾಜ. ಪರಲೋಕದ ದೇವರು ನಿನಗೆ ರಾಜ್ಯ, ಬಲ, ಪರಾಕ್ರಮ ಮತ್ತು ವೈಭವಗಳನ್ನು ದಯಪಾಲಿಸಿದ್ದಾನೆ.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


ಹದದೆಜರನು ತಾನು ದಾವೀದನ ಸೈನ್ಯದಿಂದ ಸೋಲಿಸಲ್ಪಟ್ಟನೆಂದು ಗೊತ್ತಾದಾಗ ದಾವೀದನೊಂದಿಗೆ ಸಂಧಾನ ಮಾಡಿ ಅವನ ಸೇವಕನಾದನು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯ ಮಾಡುವುದನ್ನು ನಿರಾಕರಿಸಿದರು.


ಬೆನ್ಹದದನು ಅರಾಮಿನ ರಾಜ. ಅವನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವನ ಹತ್ತಿರ ಮೂವತ್ತೆರಡು ಮಂದಿ ರಾಜರಿದ್ದರು. ಅವರ ಬಳಿ ಕುದುರೆಗಳೂ ರಥಗಳೂ ಇದ್ದವು. ಅವರು ಸಮಾರ್ಯಕ್ಕೆ ವಿರುದ್ಧವಾಗಿ ಹೋಗಿ ಅದಕ್ಕೆ ಮುತ್ತಿಗೆ ಹಾಕಿದರು.


ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.


ಯೆಹೋಶುವನು ಹಿಂದಿರುಗಿ ಹೋಗಿ ಹಾಚೋರನ್ನು ಸ್ವಾಧೀನಪಡಿಸಿಕೊಂಡನು. ಯೆಹೋಶುವನು ಹಾಚೋರಿನ ಅರಸನನ್ನು ಕೊಂದನು. (ಹಾಚೋರ್ ಇಸ್ರೇಲಿನ ವಿರುದ್ಧ ಹೋರಾಡಿದ ಎಲ್ಲ ರಾಜ್ಯಗಳಿಗೆ ಮುಂದಾಳಾಗಿತ್ತು.)


ಹದದೆಜೆರನು ರೆಹೋಬನ ಮಗ ಹಾಗೂ ಚೋಬದ ರಾಜ. ದಾವೀದನು ಯೂಫ್ರೇಟೀಸ್ ನದಿಯ ಸುತ್ತಲಿನ ಪ್ರದೇಶವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ, ಹದದೆಜೆರನನ್ನು ಸೋಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು