Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:2 - ಪರಿಶುದ್ದ ಬೈಬಲ್‌

2 ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದನು. ಆದ್ದರಿಂದ ಅವನ ಮಗನಿಗೆ ನಾನು ದಯೆತೋರಿಸುವೆನು” ಎಂದು ಹೇಳಿದನು. ಆದ್ದರಿಂದ ತಂದೆಯ ಸಾವಿನಿಂದ ಶೋಕತಪ್ತನಾಗಿರುವ ಹಾನೂನನನ್ನು ಸಂತೈಸಲು ದಾವೀದನು ತನ್ನ ಅಧಿಕಾರಿಗಳನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ, ನಾನು ಅವನ ಮಗ ಹಾನೂನನಿಗೂ ದಯೆತೋರಿಸುವೆನು” ಎಂದುಕೊಂಡು, ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ತನ್ನ ಪ್ರತಿನಿಧಿಗಳನ್ನು ಕಳುಹಿಸಿದನು. ದಾವೀದನ ಪ್ರತಿನಿಧಿಗಳು ಅಮ್ಮೋನಿಯರ ದೇಶಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದಾವೀದನು, “ನಾಹಾಷನು ನನಗೆ ಸ್ನೇಹತೋರಿಸಿದ್ದರಿಂದ ನಾನೂ ಅವನ ಮಗ ಹಾನೂನನಿಗೆ ಸ್ನೇಹ ತೋರಿಸುವೆನು,” ಎಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕಾಗಿ ತನ್ನ ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದಾವೀದನು - ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವದಕ್ಕೋಸ್ಕರ ತನ್ನ ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:2
6 ತಿಳಿವುಗಳ ಹೋಲಿಕೆ  

ಅಮ್ಮೋನಿಯನಾದ ನಾಹಾಷನು ಒಂದು ತಿಂಗಳ ನಂತರ, ತನ್ನ ಸೈನ್ಯದೊಂದಿಗೆ ಯಾಬೇಷ್‌ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನ ಜನರೆಲ್ಲ ನಾಹಾಷನಿಗೆ, “ನೀನು ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುವುದಾದರೆ, ನಾವು ನಿನ್ನ ಸೇವೆಮಾಡುತ್ತೇವೆ” ಎಂದು ಹೇಳಿದರು.


ದಾವೀದನು ಮಹನಯಿಮಿಗೆ ಬಂದನು. ಶೋಬಿ, ಮಾಕೀರ್ ಮತ್ತು ಬರ್ಜಿಲ್ಲೈಯರು ಆ ಸ್ಥಳದಲ್ಲಿದ್ದರು. (ಶೋಬಿಯು ಅಮ್ಮೋನಿಯರ ಪಟ್ಟಣವಾದ ರಬ್ಬಾದ ಊರಿನ ನಾಹಾಷನ ಮಗ. ಮಾಕೀರನು ಲೋದೆಬಾರಿನ ಅಮ್ಮೀಯೇಲನ ಮಗ. ಬರ್ಜಿಲ್ಲೈಯು ಗಿಲ್ಯಾದ್ ನಾಡಿನ ರೋಗೆಲೀಮ್ ನಗರದವನು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು