2 ಸಮುಯೇಲ 10:5 - ಪರಿಶುದ್ದ ಬೈಬಲ್5 ಅವರು ದಾವೀದನಿಗೆ ಈ ಸುದ್ದಿಯನ್ನು ತಿಳಿಸಿದರು. ಆಗ ದಾವೀದನು ತನ್ನ ಬಳಿಗೆ ಬರಲು ಬಹಳ ನಾಚಿಕೆಯಿಂದಿದ್ದ ಅಧಿಕಾರಗಳ ಬಳಿಗೆ ಸಂದೇಶಕರನ್ನು ಕಳುಹಿಸಿ, “ನಿಮ್ಮ ಗಡ್ಡಗಳು ಮತ್ತೆ ಬೆಳೆಯುವವರೆಗೆ ಜೆರಿಕೊವಿನಲ್ಲಿ ಇರಿ. ಅನಂತರ ಜೆರುಸಲೇಮಿಗೆ ಬನ್ನಿ” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ಈ ವರ್ತಮಾನವನ್ನು ದಾವೀದನಿಗೆ ಹೇಳಿ ಕಳುಹಿಸಿದಾಗ ಅವನು ಬಹಳವಾಗಿ ಅಪಮಾನ ಹೊಂದಿದ ಅವರಿಗೆ “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋ ಪಟ್ಟಣದಲ್ಲಿದ್ದು ಅನಂತರ ಹಿಂತಿರುಗಿ ಬನ್ನಿರಿ” ಎಂದು ತನ್ನ ಸೇವಕರ ಮೂಲಕ ಹೇಳಿಕಳುಹಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆವರು ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದರು. ಬಹಳವಾಗಿ ಅಪಮಾನ ಹೊಂದಿದ ಅವರಿಗೆ ದಾವೀದನು ಆಳುಗಳ ಮುಖಾಂತರ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಜೆರಿಕೋವಿನಲ್ಲಿದ್ದು ಅನಂತರ ಬನ್ನಿ,” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರು ಈ ವರ್ತಮಾನವನ್ನು ದಾವೀದನಿಗೆ ಹೇಳಿ ಕಳುಹಿಸಿದಾಗ ಅವನು ಬಹಳವಾಗಿ ಅಪಮಾನಹೊಂದಿದ ಅವರಿಗೆ ಆಳುಗಳ ಮುಖಾಂತರವಾಗಿ - ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿದ್ದು ಅನಂತರ ಬನ್ನಿರಿ ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ಈ ವಿಷಯದ ಕುರಿತು ದಾವೀದನಿಗೆ ಹೇಳಿ ಕಳುಹಿಸಿದಾಗ, ಬಹಳ ಅಪಮಾನ ಹೊಂದಿದ ಅವರಿಗೆ ದಾವೀದನು ತನ್ನ ಆಳುಗಳನ್ನು ಅವರಿಗೆದುರಾಗಿ ಕಳುಹಿಸಿ, “ನಿಮ್ಮ ಗಡ್ಡಗಳು ಬೆಳೆಯುವವರೆಗೂ ಯೆರಿಕೋವಿನಲ್ಲಿ ಇರಿ. ಆಮೇಲೆ ತಿರುಗಿ ಬನ್ನಿರಿ” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿ |
ಅಹಾಬನ ಕಾಲದಲ್ಲಿ ಬೇತೇಲಿನ ಹೀಯೇಲನು ಜೆರಿಕೊ ಪಟ್ಟಣವನ್ನು ಮತ್ತೆ ನಿರ್ಮಿಸಿದನು. ಹೀಯೇಲನು ನಗರದಲ್ಲಿ ಈ ಕೆಲಸವನ್ನು ಮಾಡಲು ಆರಂಭಿಸಿದ ಕಾಲದಲ್ಲಿಯೇ ಅವನ ಹಿರಿಯ ಮಗನಾದ ಅಬೀರಾಮನು ಸತ್ತುಹೋದನು. ಹೀಯೇಲನು ನಗರದ ಬಾಗಿಲುಗಳನ್ನು ಕಟ್ಟಿಸಿದಾಗ, ಅವನ ಕಿರಿಯ ಮಗನಾದ ಸೆಗೂಬನು ಸತ್ತುಹೋದನು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ನೂನನ ಮಗನಾದ ಯೆಹೋಶುವನ ಮೂಲಕ ಯೆಹೋವನು ಇದನ್ನು ತಿಳಿಸಿದ್ದನು.