Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:6 - ಪರಿಶುದ್ದ ಬೈಬಲ್‌

6 ಅಮ್ಮೋನಿಯರು ತಾವು ದಾವೀದನಿಗೆ ಶತ್ರುಗಳಾಗಿರುವುದಾಗಿ ತಿಳಿದುಕೊಂಡರು. ಆದ್ದರಿಂದ ಅಮ್ಮೋನಿಯರು ಹಣಕೊಟ್ಟು ಬೇತ್‌ರೆಹೋಬ್ ಮತ್ತು ಚೋಬಾಗಳಿಂದ ಅರಾಮ್ಯರ ಇಪ್ಪತ್ತುಸಾವಿರ ಮಂದಿ ಭೂದಳವನ್ನು ಬರಮಾಡಿಕೊಂಡರು. ಅಮ್ಮೋನಿಯರು ಮಾಕಾದ ರಾಜನನ್ನು ಮತ್ತು ಅವನ ಒಂದು ಸಾವಿರ ಸೈನಿಕರನ್ನು ಹಾಗೂ ಟೋಬ್‌ನಿಂದ ಹನ್ನೆರಡು ಸಾವಿರ ಮಂದಿ ಸೈನಿಕರನ್ನು ಬರಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತ್ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತಾವು ದಾವೀದನಿಗೆ ವೈರಿಗಳಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಹಣಕೊಟ್ಟು ಬೇತ್ ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಸಿರಿಯಾದವರ ಇಪ್ಪತ್ತು ಸಾವಿರಮಂದಿ ಕಾಲಾಳುಗಳನ್ನು, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನು ಹಾಗು ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರು ತಿಳಿದು ಹಣಕೊಟ್ಟು ಬೇತ್‍ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:6
24 ತಿಳಿವುಗಳ ಹೋಲಿಕೆ  

ಚೋಬದ ರಾಜನಾದ ಹದದೆಜೆರನ ಸಹಾಯಕ್ಕೆ ದಮಸ್ಕದ ಅರಾಮ್ಯರು ಬಂದರು. ಆದರೆ ದಾವೀದನು ಆ ಇಪ್ಪತ್ತೆರಡು ಸಾವಿರ ಅರಾಮ್ಯರನ್ನು ಸಂಹರಿಸಿದನು.


ಹದದೆಜೆರನು ರೆಹೋಬನ ಮಗ ಹಾಗೂ ಚೋಬದ ರಾಜ. ದಾವೀದನು ಯೂಫ್ರೇಟೀಸ್ ನದಿಯ ಸುತ್ತಲಿನ ಪ್ರದೇಶವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ, ಹದದೆಜೆರನನ್ನು ಸೋಲಿಸಿದನು.


ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ಈ ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ಪೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನನಗಿರುವ ಜನರು ಕೆಲವರೇ. ಈ ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನನಗೆ ವಿರೋಧವಾಗಿ ಹೋರಾಡಿದರೆ ನಾನೂ ನನ್ನ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು.


ಆಕೀಷನು ದಾವೀದನಲ್ಲಿ ಭರವಸೆ ಇಡತೊಡಗಿದನು. ಆಕೀಷನು ತನ್ನೊಳಗೆ, “ಈಗ ದಾವೀದನ ಸ್ವಂತ ಜನರೇ ಅವನನ್ನು ದ್ವೇಷಿಸುವರು. ಇಸ್ರೇಲರು ದಾವೀದನನ್ನು ಬಹಳವಾಗಿ ದ್ವೇಷಿಸುತ್ತಾರೆ. ಈಗ ದಾವೀದನು ಶಾಶ್ವತವಾಗಿ ನನ್ನ ಸೇವೆಮಾಡುವನು” ಎಂದುಕೊಂಡನು.


ಲಯಿಷಿನಲ್ಲಿ ವಾಸಮಾಡುತ್ತಿದ್ದ ಜನರನ್ನು ರಕ್ಷಿಸುವವರು ಯಾರೂ ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹುದೂರದಲ್ಲಿದ್ದ ಕಾರಣ ಅವರೂ ಬರುವಂತಿರಲಿಲ್ಲ. ಲಯಿಷಿನವರು ಆರಾಮಿನ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಂಡಿರಲಿಲ್ಲ. ಹೀಗಾಗಿ ಅವರೂ ಸಹಾಯಕ್ಕೆ ಬರಲಿಲ್ಲ. ಬೇತ್‌ರೆಹೋಬಿನ ಕಣಿವೆಯಲ್ಲಿದ್ದ ಈ ನಗರವನ್ನು ದಾನ್ಯರು ಹೊಸದಾಗಿ ಕಟ್ಟಿದರು. ಆ ನಗರವು ಅವರ ವಾಸಸ್ಥಾನವಾಯಿತು.


ಅಮ್ಮೋನಿಯರು ಯುದ್ಧ ಪ್ರಾರಂಭಿಸಿದ ತರುವಾಯ ಗಿಲ್ಯಾದಿನ ನಾಯಕರು ಯೆಫ್ತಾಹನ ಹತ್ತಿರ ಹೋದರು. ಯೆಫ್ತಾಹನು ಟೋಬ್ ದೇಶವನ್ನು ಬಿಟ್ಟು ಗಿಲ್ಯಾದಿಗೆ ಬರಬೇಕೆಂಬುದು ಅವರ ಅಪೇಕ್ಷೆಯಾಗಿತ್ತು.


ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸಮಾಡತೊಡಗಿದನು. ಟೋಬ್ ದೇಶದಲ್ಲಿ ಕೆಲವು ಪುಂಡರು ಯೆಫ್ತಾಹನ ಜೊತೆ ಸೇರಿಕೊಂಡರು.


ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು.


ಆತನು ಸೋಲಿಸಿದ ದೇಶಗಳು ಯಾವುವೆಂದರೆ: ಅರಾಮ್, ಮೋವಾಬ್, ಅಮ್ಮೋನಿಯ, ಫಿಲಿಷ್ಟಿಯ ಮತ್ತು ಅಮಾಲೇಕ್ಯ. ಚೋಬದ ರಾಜನಾದ ರೆಹೋಬನ ಮಗ ಹದದೆಜೆರನನ್ನು ಸಹ ದಾವೀದನು ಸೋಲಿಸಿದನು.


ಇಸ್ರೇಲರೆಲ್ಲರೂ ಈ ಸುದ್ದಿಯನ್ನು ಕೇಳಿ, “ಸೌಲನು ಫಿಲಿಷ್ಟಿಯರ ನಾಯಕನನ್ನು ಕೊಂದನು. ಈಗ ಫಿಲಿಷ್ಟಿಯರು ಇಸ್ರೇಲರನ್ನು ನಿಜವಾಗಿಯೂ ದ್ವೇಷಿಸುತ್ತಾರೆ” ಎಂದು ಹೇಳಿದರು. ಇಸ್ರೇಲರೆಲ್ಲ ಗಿಲ್ಗಾಲಿನಲ್ಲಿ ಸೌಲನನ್ನು ಜೊತೆಸೇರಲು ಕರೆಹೋಯಿತು.


ಮನಸ್ಸೆ ಕುಲದ ಯಾಯೀರ ಎಂಬಾತನು ಅರ್ಗೋಬ್ ಪ್ರದೇಶಗಳನ್ನು ವಶಪಡಿಸಿಕೊಂಡನು. ಆ ಪ್ರದೇಶ ಗೆಷೂರ್ಯರ ಮತ್ತು ಮಾಕಾತ್ಯರ ದೇಶದ ಮೇರೆಯ ತನಕ ಹಬ್ಬಿತ್ತು. ಆದ್ದರಿಂದ ಆ ಪ್ರದೇಶಕ್ಕೆ ಯಾಯೀರ್ ಎಂಬ ಹೆಸರು ಬಂತು. ಇಂದಿಗೂ ಜನರು ಆ ಊರುಗಳಿಗೆ, “ಯಾಯೀರನ ಬಾಷಾನ್ ಊರುಗಳು” ಎಂದು ಕರೆಯುತ್ತಾರೆ.)


“ನಮಗೆ ಹೋಗಲು ಅಪ್ಪಣೆಕೊಡಬೇಕೆಂದು ನೀವು ಫರೋಹನನ್ನು ಕೇಳಿ ನಮಗೆ ಕೆಟ್ಟದ್ದನ್ನು ಮಾಡಿದಿರಿ. ಫರೋಹನು ಮತ್ತು ಅವನ ಅಧಿಕಾರಿಗಳು ನಮ್ಮನ್ನು ದ್ವೇಷಿಸುವಂತೆ ನೀವು ಮಾಡಿದ್ದರಿಂದ ಯೆಹೋವನು ನಿಮಗೆ ತೀರ್ಪು ನೀಡಲಿ. ಅವರು ನಮ್ಮನ್ನು ಕೊಲ್ಲುವುದಕ್ಕೆ ನೀವು ಅವಕಾಶ ಮಾಡಿಕೊಟ್ಟಿರಿ” ಎಂದು ಹೇಳಿದರು.


ಅವರು ದಾವೀದನಿಗೆ ಈ ಸುದ್ದಿಯನ್ನು ತಿಳಿಸಿದರು. ಆಗ ದಾವೀದನು ತನ್ನ ಬಳಿಗೆ ಬರಲು ಬಹಳ ನಾಚಿಕೆಯಿಂದಿದ್ದ ಅಧಿಕಾರಗಳ ಬಳಿಗೆ ಸಂದೇಶಕರನ್ನು ಕಳುಹಿಸಿ, “ನಿಮ್ಮ ಗಡ್ಡಗಳು ಮತ್ತೆ ಬೆಳೆಯುವವರೆಗೆ ಜೆರಿಕೊವಿನಲ್ಲಿ ಇರಿ. ಅನಂತರ ಜೆರುಸಲೇಮಿಗೆ ಬನ್ನಿ” ಎಂದು ತಿಳಿಸಿದನು.


ಇದು ದಾವೀದನಿಗೆ ತಿಳಿಯಿತು. ಆದ್ದರಿಂದ ಅವನು ಯೋವಾಬನನ್ನು ಎಲ್ಲಾ ಶೂರ ಸೈನಿಕರೊಂದಿಗೆ ಕಳುಹಿಸಿದನು.


ಮಾಕಾದ ಅಹಸ್ಬೈನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲನ ಮಗ ಎಲೀಯಾಮ್,


ಅರಾಮ್ಯರ ಸೇನೆಯು ರಥಗಳ, ಕುದುರೆಗಳ ಮತ್ತು ಮಹಾಸೇನೆಯ ರಣಘೋಷವನ್ನು ಕೇಳುವಂತೆ ಯೆಹೋವನು ಮಾಡಿದ್ದನು. ಅರಾಮ್ಯ ಸೈನಿಕರು, “ಇಸ್ರೇಲಿನ ರಾಜನು, ಹಿತ್ತೀಯರಿಗೆ ಮತ್ತು ಈಜಿಪ್ಟಿನವರಿಗೆ ಹಣಕೊಟ್ಟು ನಮ್ಮ ವಿರುದ್ಧ ಹೋರಾಟಕ್ಕೆ ಬರುವಂತೆ ಮಾಡಿದ್ದಾನೆ” ಎಂದು ಮಾತನಾಡಿಕೊಂಡು,


ಒಮ್ಮೆ, ಕೆಲವು ರಾಜರು ಒಟ್ಟಾಗಿ ಸೇರಿಬಂದರು. ಆ ಪಟ್ಟಣದ ಮೇಲೆ ದಾಳಿ ಮಾಡಲೆಂದು ಅವರೆಲ್ಲ ಅದರತ್ತ ನಡೆದರು.


ಆ ಸೈನಿಕರು ಮಿಚ್ಫದಲ್ಲಿ ವಾಸವಾಗಿದ್ದ ಗೆದಲ್ಯನಲ್ಲಿಗೆ ಬಂದರು. ಆ ಸೈನಿಕರು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಅವನ ಸೋದರ ಯೋನಾಥಾನ, ತನ್ಹಮೆತನ ಮಗನಾದ ಸೆರಾಯ, ನೆಟೋಫದವನಾದ ಏಫಯನ ಮಕ್ಕಳು, ಮಾಕಾ ಊರಿನ ಯೆಜನ್ಯ ಮತ್ತು ಅವರ ಸಂಗಡ ಇದ್ದ ಜನರು.


ಸಂಬಳಕ್ಕಾಗಿ ದುಡಿಯುವ ಈಜಿಪ್ಟಿನ ಸೈನಿಕರು ಕೊಬ್ಬಿದ ಕರುಗಳಂತಿದ್ದಾರೆ. ಅವರೆಲ್ಲರು ಹಿಂತಿರುಗಿ ಓಡಿಹೋಗುವರು. ಅವರು ಧೈರ್ಯದಿಂದ ಧಾಳಿಯನ್ನು ಎದುರಿಸಲಾರರು. ಅವರ ವಿನಾಶದ ಕಾಲ ಬರುತ್ತಿದೆ. ಬೇಗ ಅವರನ್ನು ದಂಡಿಸಲಾಗುವುದು.


ಅಹೀತೋಫೆಲನು ಅಬ್ಷಾಲೋಮನಿಗೆ, “ನಿಮ್ಮ ತಂದೆಯು, ಮನೆಯನ್ನು ಕಾಯುವುದಕ್ಕೆ ತನ್ನ ಕೆಲವು ಪತ್ನಿಯರನ್ನು ಇಲ್ಲಿ ಬಿಟ್ಟುಹೋಗಿದ್ದಾನೆ. ನೀನು ಅವರೊಂದಿಗೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ದ್ವೇಷಿಸುವನೆಂಬುದು ಇಸ್ರೇಲರಿಗೆಲ್ಲ ಆಗ ತಿಳಿಯುವುದು; ನಿನಗೆ ಮತ್ತಷ್ಟು ಬೆಂಬಲವನ್ನು ಕೊಡಲು ನಿನ್ನ ಜನರೆಲ್ಲರನ್ನು ಪ್ರೋತ್ಸಾಹಿಸಿದಂತಾಗುತ್ತದೆ” ಎಂದನು.


ದಾವೀದನು ಚೋಬದ ಸೈನ್ಯವನ್ನು ಸೋಲಿಸಿದ ಬಳಿಕ, ರೆಜೋನನು ಕೆಲವು ಜನರನ್ನು ಒಟ್ಟುಗೂಡಿಸಿಕೊಂಡು, ಆ ಕಿರುಸೇನೆಗೆ ತಾನೇ ನಾಯಕನಾದನು. ರೆಜೋನನು ದಮಸ್ಕಕ್ಕೆ ಹೋಗಿ ಅಲ್ಲಿಯೇ ನೆಲೆಸಿದನು. ರೆಜೋನನು ದಮಸ್ಕದ ರಾಜನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು