Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:1 - ಪರಿಶುದ್ದ ಬೈಬಲ್‌

1 ವಸಂತಕಾಲದಲ್ಲಿ, ಎಲ್ಲಾ ರಾಜರೂ ಯುದ್ಧಕ್ಕೆ ಹೊರಡುವ ಸಮಯ ಬಂದಾಗ, ದಾವೀದನು ಯೋವಾಬನನ್ನೂ ಅವನ ಸೇವಕರನ್ನೂ ಮತ್ತು ಇಸ್ರೇಲರೆಲ್ಲರನ್ನೂ ಅಮ್ಮೋನಿಯರೊಂದಿಗೆ ಯುದ್ಧಮಾಡಲು ಕಳುಹಿಸಿದನು. ಯೋವಾಬನ ಸೈನ್ಯವು ರಬ್ಬಕ್ಕೆ ಮುತ್ತಿಗೆ ಹಾಕಿತು. ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರಾಜರೆಲ್ಲರು ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ, ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರಾಜರು ಸಾಮಾನ್ಯವಾಗಿ ಯುದ್ಧಕ್ಕೆ ಹೊರಡುವ ವಸಂತಕಾಲ ಅದು. ದಾವೀದನು ಯೋವಾಬನನ್ನು, ತನ್ನ ಸೇವಕರನ್ನು ಹಾಗು ಎಲ್ಲ ಇಸ್ರಯೇಲರನ್ನು ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ದಾವೀದನು ಜೆರುಸಲೇಮಿನಲ್ಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮರುವರುಷ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆಹಾಕಿದರು. ದಾವೀದನು ಯೆರೂಸಲೇವಿುನಲ್ಲಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ, ಅವನ ಸಂಗಡದಲ್ಲಿದ್ದ ಅವನ ಸೇವಕರನ್ನೂ, ಸಮಸ್ತ ಇಸ್ರಾಯೇಲರನ್ನೂ ಕಳುಹಿಸಿದನು. ಅವರು ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ ರಬ್ಬ ನಗರಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:1
15 ತಿಳಿವುಗಳ ಹೋಲಿಕೆ  

ವಸಂತಕಾಲದಲ್ಲಿ ರಾಜರುಗಳು ಯುದ್ಧಕ್ಕೆ ಹೊರಡುವ ಸಮಯ. ಯೋವಾಬನೂ ತನ್ನ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟನು. ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು. ಇಸ್ರೇಲಿನ ಸೈನ್ಯವು ಅಮ್ಮೋನ್ ದೇಶದೊಳಗೆ ನುಗ್ಗಿ ಅದನ್ನು ನಾಶಮಾಡಿದರು. ಆಮೇಲೆ ರಬ್ಬ ಪಟ್ಟಣಕ್ಕೆ ಮುತ್ತಿಗೆಹಾಕಿ ಸಂಪೂರ್ಣವಾಗಿ ನಾಶಮಾಡಿದರು.


ವಸಂತಮಾಸದಲ್ಲಿ ಬೆನ್ಹದದನು ಅರಾಮ್ಯದ ಜನರನ್ನು ಒಟ್ಟುಗೂಡಿಸಿದನು. ಅವನು ಇಸ್ರೇಲರ ವಿರುದ್ಧ ಹೋರಾಡಲು ಅಫೇಕಕ್ಕೆ ಹೋದನು.


ಆಗ ಆ ಪ್ರವಾದಿಯು ರಾಜನಾದ ಅಹಾಬನಲ್ಲಿಗೆ ಹೋಗಿ, “ಅರಾಮಿನ ರಾಜನಾದ ಬೆನ್ಹದದನು ಮುಂದಿನ ವಸಂತಮಾಸದಲ್ಲಿ ನಿನ್ನ ವಿರುದ್ಧ ಯುದ್ಧಮಾಡಲು ಮತ್ತೆ ಬರುತ್ತಾನೆ. ಈಗ ನೀನು ಮನೆಗೆ ಹೋಗಿ ನಿನ್ನ ಸೈನ್ಯವನ್ನು ಬಲಪಡಿಸು. ಅವನ ವಿರುದ್ಧ ನೀನು ಸಮರ್ಥನಾಗಲು ಎಚ್ಚರಿಕೆಯಿಂದ ಉಪಾಯಗಳನ್ನು ಮಾಡು” ಎಂದು ಹೇಳಿದನು.


ಪ್ರೀತಿ ಮಾಡುವ ಸಮಯ, ದ್ವೇಷಿಸುವ ಸಮಯ. ಯುದ್ಧಮಾಡುವ ಸಮಯ, ಶಾಂತಿಯಿಂದಿರುವ ಸಮಯ.


ವಸಂತ ಕಾಲದಲ್ಲಿ ನೆಬೂಕದ್ನೆಚ್ಚರನು ತನ್ನ ಸೇವಕರನ್ನು ಕಳುಹಿಸಿ ಯೆಹೋಯಾಕೀನನನ್ನು ಕರೆಯಿಸಿದನು. ಆ ಸೇವಕರು ದೇವಾಲಯದ ಕೆಲವು ವಸ್ತುಗಳನ್ನೂ ಅವನ ಜೊತೆಯಲ್ಲಿ ಬಾಬಿಲೋನಿಗೆ ತೆಗೆದುಕೊಂಡು ಹೋದರು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿಗೆ ಚಿದ್ಕೀಯನನ್ನು ಹೊಸ ಅರಸನನ್ನಾಗಿ ಮಾಡಿದನು. ಚಿದ್ಕೀಯನು ಯೆಹೋಯಾಕೀನನ ಸಂಬಂಧಿಕನಾಗಿದ್ದನು.


(ಓಗನು ಬಾಷಾನಿನ ರಾಜನಾಗಿದ್ದನು. ಎದ್ರೈ ಮತ್ತು ಸಲ್ಕಾ ಬಾಷಾನಿನಲ್ಲಿದ್ದ ಓಗನ ರಾಜ್ಯದ ಪಟ್ಟಣಗಳಾಗಿದ್ದವು. ಅವನು ರೆಫಾಯರಲ್ಲಿ ಅಳಿದುಳಿದವರಲ್ಲಿ ಒಬ್ಬನಾಗಿದ್ದನು. ಅವನ ಮಂಚವು ಕಬ್ಬಿಣದಿಂದ ಮಾಡಲ್ಪಟ್ಟಿತ್ತು. ಅದು ಹದಿಮೂರು ಅಡಿ ಉದ್ದವಿತ್ತು ಮತ್ತು ಆರು ಅಡಿ ಅಗಲವಿತ್ತು. ಆ ಮಂಚವು ಈಗಲೂ ಅಮ್ಮೋನಿಯರು ವಾಸಿಸುವ ರಬ್ಬಾದಲ್ಲಿದೆ.)


ಯಾವ ಮಾರ್ಗದಲ್ಲಿ ಖಡ್ಗವು ಬರುವದೋ ಆ ದಾರಿಯನ್ನು ಗುರುತಿಸು. ಒಂದು ರಸ್ತೆಯು ಅಮ್ಮೋನಿಯರ ನಗರವಾದ ರಬ್ಬಾಗೆ ಹೋಗುವದು. ಇನ್ನೊಂದು ಮಾರ್ಗವು ಯೆಹೂದದಲ್ಲಿರುವ ಭದ್ರಪಡಿಸಲ್ಪಟ್ಟ ಪಟ್ಟಣವಾಗಿರುವ ಜೆರುಸಲೇಮಿಗೆ ಹೋಗುವುದು.


ಆಗ ಯೆಹೋವನು ಆ ಜನಾಂಗಗಳ ವಿರುದ್ಧವಾಗಿ ಯುದ್ಧ ಮಾಡುವನು. ಅದು ಭಯಂಕರವಾದ ಕಾದಾಟವಾಗಿರುವದು.


ಫಿಲಿಷ್ಟಿಯ ಸೇನಾಧಿಪತಿಗಳು ಇಸ್ರೇಲರೊಂದಿಗೆ ಹೋರಾಡಲು ಹೋಗುತ್ತಲೇ ಇದ್ದರು. ಆದರೆ ದಾವೀದನು ಪ್ರತಿಸಲವೂ ಅವರನ್ನು ಸೋಲಿಸುತ್ತಿದ್ದನು. ದಾವೀದನು ಸೌಲನ ಒಬ್ಬ ಯಶಸ್ವಿಯಾದ ಅಧಿಕಾರಿಯಾಗಿದ್ದನು! ಆದ್ದರಿಂದ ದಾವೀದನು ಪ್ರಖ್ಯಾತನಾದನು.


ಅರಾಮ್ಯರು ಓಡಿಹೋಗುತ್ತಿರುವುದನ್ನು ನೋಡಿದ ಅಮ್ಮೋನಿಯರು ಅಬೀಷೈಯನ್ನು ಬಿಟ್ಟು ಓಡಿಹೋದರು. ಅವರು ತಮ್ಮ ನಗರಕ್ಕೆ ಹಿಂದಿರುಗಿದರು. ಯೋವಾಬನು ಯುದ್ಧರಂಗದಿಂದ ಹಿಂದಿರುಗಿ ಜೆರುಸಲೇಮಿಗೆ ಬಂದನು.


ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” ಯೆಹೋವನು ಹೀಗೆನ್ನುತ್ತಾನೆ:


“ಹೆಷ್ಬೋನಿನ ಜನರೇ, ಗೋಳಾಡಿರಿ; ಏಕೆಂದರೆ ಆಯಿ ಎಂಬ ಪಟ್ಟಣ ನಾಶವಾಯಿತು. ರಬ್ಬಾದ ಸ್ತ್ರೀಯರೇ, ಅಮ್ಮೋನಿನ ಸ್ತ್ರೀಯರೇ, ಗೋಳಾಡಿರಿ. ದುಃಖಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಗೋಳಾಡಿರಿ. ರಕ್ಷಣೆಗಾಗಿ ನಗರಕ್ಕೆ ಓಡಿಹೋಗಿರಿ. ಏಕೆಂದರೆ ನಿಮ್ಮ ಶತ್ರುಗಳು ಬರುತ್ತಿದ್ದಾರೆ. ಅವರು ಮಲ್ಕಾಮ್ ದೇವತೆಯನ್ನು ತೆಗೆದುಕೊಂಡು ಹೋಗುತ್ತಾರೆ. ಶತ್ರುಗಳು ಮಲ್ಕಾಮ್ ದೇವತೆಯ ಯಾಜಕರನ್ನೂ ಪ್ರಧಾನರನ್ನೂ ತೆಗೆದುಕೊಂಡು ಹೋಗುವರು.


ಆದ್ದರಿಂದ ನಾನು ರಬ್ಬದ ಗೋಡೆಗಳಲ್ಲಿ ಬೆಂಕಿ ಹಾಕುವೆನು. ಆ ಬೆಂಕಿಯು ರಬ್ಬದ ಉನ್ನತ ಗೋಪುರಗಳನ್ನು ನಾಶಮಾಡುವದು; ಹಗಲಿನ ಯುದ್ಧದ ಕೂಗಾಟದಂತೆಯೂ ಸುಂಟರಗಾಳಿಯಂತೆಯೂ ಸಂಕಟವು ಅವರ ದೇಶಕ್ಕೆ ಬರುವದು.


ದೇವರೇ, ನೀನು ನಮ್ಮನ್ನು ಕೈಬಿಟ್ಟಿರುವೆ. ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲ. ಹೀಗಿರಲು, ಕೋಟೆಕೊತ್ತಲುಗಳುಳ್ಳ ಪಟ್ಟಣಕ್ಕೆ ನನ್ನನ್ನು ನಡೆಸುವವರು ಯಾರು? ಎದೋಮಿನ ವಿರುದ್ಧ ನನ್ನನ್ನು ನಡೆಸುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು