2 ಸಮುಯೇಲ 11:13 - ಪರಿಶುದ್ದ ಬೈಬಲ್13 ಆಗ ದಾವೀದನು ತನ್ನನ್ನು ಬಂದು ಕಾಣುವಂತೆ ಊರೀಯನಿಗೆ ಹೇಳಿ ಕಳುಹಿಸಿದನು; ಊರೀಯನು ದಾವೀದನೊಂದಿಗೆ ಕುಡಿದು ಊಟ ಮಾಡಿದನು. ದಾವೀದನು ಊರೀಯನನ್ನು ಮತ್ತನನ್ನಾಗಿ ಮಾಡಿದನು. ಆದರೂ ಊರೀಯನು ಮನೆಗೆ ಹೋಗಲಿಲ್ಲ. ಅಂದು ಸಂಜೆ ರಾಜನ ಮನೆಯ ಹೊರಬಾಗಿಲಿನಲ್ಲಿ ಸೇವಕರೊಂದಿಗೆ ಮಲಗಲು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮರುದಿನ ದಾವೀದನು ಅವನನ್ನು ಅನ್ನಪಾನಗಳನ್ನೂ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ, ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿಕೊಂಡು ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮರುದಿನ ದಾವೀದನು ಅವನನ್ನು ಅನ್ನಪಾನ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ ಕುಡಿಸಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮರುದಿನ ದಾವೀದನು ಅವನನ್ನು ಅನ್ನಪಾನತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರಕೊಂಡುಹೋಗಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದಾವೀದನು ಅವನನ್ನು ಕರೆದಾಗ, ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ, ತನ್ನ ಯಜಮಾನನ ಸೇವಕರ ಸಂಗಡ ಮಲಗುವುದಕ್ಕೆ ಹೊರಟುಹೋದನು. ಅಧ್ಯಾಯವನ್ನು ನೋಡಿ |