2 ಸಮುಯೇಲ 11:15 - ಪರಿಶುದ್ದ ಬೈಬಲ್15 ದಾವೀದನು ಆ ಪತ್ರದಲ್ಲಿ, “ಯುದ್ಧವು ಹೆಚ್ಚು ಭೀಕರವಾಗಿ ನಡೆಯುವ ಕಡೆ ಊರೀಯನನ್ನು ಮುಂದಿನ ಸಾಲಿನಲ್ಲಿ ನಿಲ್ಲಿಸು. ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡಿ. ಅವನು ಯುದ್ಧದಲ್ಲಿ ಕೊಲ್ಲಲ್ಪಡಲಿ” ಎಂದು ಬರೆದಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದರಲ್ಲಿ, “ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂಭಾಗದಲ್ಲಿ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿರಿ” ಎಂಬುದಾಗಿ ಬರೆದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದರಲ್ಲಿ ಹೀಗೆ ಬರೆಯಲಾಗಿತ್ತು : “ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರಯುದ್ಧ ನಡೆಯುತ್ತಿರುವ ಕಡೆ, ಮುಂಭಾಗದಲ್ಲೇ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅದರಲ್ಲಿದ್ದದ್ದೇನಂದರೆ - ಊರೀಯನು ಗಾಯಹೊಂದಿ ಸಾಯುವಂತೆ ಅವನನ್ನು ಘೋರಯುದ್ಧ ನಡೆಯುತ್ತಿರುವ ಕಡೆಗೆ ಮುಂಭಾಗದಲ್ಲಿ ನಿಲ್ಲಿಸಿ ನೀವು ಹಿಂದಕ್ಕೆ ಸರಿದುಕೊಳ್ಳಿರಿ ಎಂಬದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆ ಪತ್ರದಲ್ಲಿ, “ಊರೀಯನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂದೆ ನಿಲ್ಲಿಸಿ, ಅವನು ಗಾಯಗೊಂಡು ಸಾಯುವಂತೆ, ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿದುಕೊಳ್ಳಿರಿ,” ಎಂದು ಬರೆದಿದ್ದನು. ಅಧ್ಯಾಯವನ್ನು ನೋಡಿ |
ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.
ಸೌಲನು ಅವರಿಗೆ, “ನೀವು ದಾವೀದನ ಬಳಿಗೆ ಹೋಗಿ ಹೇಳಿ: ‘ನೀನು ರಾಜನ ಮಗಳಿಗಾಗಿ ಹಣ ಕೊಡಬೇಕಿಲ್ಲ. ಸೌಲನು ತನ್ನ ಶತ್ರುಗಳ ಮೇಲೆ ಸೇಡನ್ನು ತೀರಿಸಿಕೊಳ್ಳುತ್ತಾನೆ. ಆದ್ದರಿಂದ ಅವನ ಮಗಳನ್ನು ಮದುವೆಯಾಗಲು ಕೊಡಬೇಕಾದ ದಕ್ಷಿಣೆ ಏನೆಂದರೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲುಗಳು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು. ಸೌಲನ ರಹಸ್ಯವಾದ ಉಪಾಯ ಇದಾಗಿದ್ದಿತು. ಫಿಲಿಷ್ಟಿಯರು ದಾವೀದನನ್ನು ಕೊಂದು ಬಿಡಬಹುದೆಂದು ಸೌಲನು ಭಾವಿಸಿದ್ದನು.