2 ಸಮುಯೇಲ 11:16 - ಪರಿಶುದ್ದ ಬೈಬಲ್16 ಅಮ್ಮೋನಿಯರಲ್ಲಿ ಅತ್ಯಂತ ಧೈರ್ಯಶಾಲಿಗಳು ಆ ನಗರದಲ್ಲಿ ಎಲ್ಲಿರುವರೆಂಬುದನ್ನು ಯೋವಾಬನು ಗುರುತಿಸಿದನು. ಆ ಸ್ಥಳಕ್ಕೆ ಕಳುಹಿಸಲು ಊರೀಯನನ್ನು ಆರಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶೂರರಾದ ಶತ್ರುಸೈನಿಕರು ಎಲ್ಲಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶತ್ರುಸೈನಿಕರು ಎಲ್ಲಿ ಪ್ರಬಲರಾಗಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೋವಾಬನು ಪಟ್ಟಣಕ್ಕೆ ಮುತ್ತಿಗೆಹಾಕುವಾಗ ಶೂರರಾದ ಶತ್ರುಸೈನಿಕರೆಲ್ಲಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹಾಗೆಯೇ ಯೋವಾಬನು ಆ ಪಟ್ಟಣವನ್ನು ಮುತ್ತಿಗೆ ಹಾಕುವಾಗ, ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳಿದುಕೊಂಡು, ಅಲ್ಲಿ ಊರೀಯನನ್ನು ನಿಲ್ಲಿಸಿದನು. ಅಧ್ಯಾಯವನ್ನು ನೋಡಿ |
“ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿದ್ದನ್ನು ಸಹ ನೀನು ಜ್ಞಾಪಿಸಿಕೊ. ಇಸ್ರೇಲಿನ ಇಬ್ಬರು ಸೇನಾಧಿಪತಿಗಳನ್ನು ಅವನು ಕೊಂದುಹಾಕಿದನು. ಅವರು ಯಾರೆಂದರೆ: ನೇರನ ಮಗನಾದ ಅಬ್ನೇರನು ಮತ್ತು ಯೆತೆರನ ಮಗನಾದ ಅಮಾಸನು. ಈ ಜನರ ರಕ್ತವು ಅವನ ಸೊಂಟಪಟ್ಟಿಯ ಕತ್ತಿ ಹಾಗೂ ಯುದ್ಧಕಾಲದಲ್ಲಿ ತೊಡುವ ಪಾದರಕ್ಷೆಗಳ ಮೇಲೆ ಚಿಮ್ಮಿತು. ಶಾಂತಿಯ ಕಾಲದಲ್ಲಿ ಅವನು ಅವರನ್ನು ಕೊಂದುಹಾಕಿದನು. ಆದ್ದರಿಂದ ನಾನು ಅವನನ್ನು ದಂಡಿಸಬೇಕಾಗಿತ್ತು.