2 ಸಮುಯೇಲ 11:2 - ಪರಿಶುದ್ದ ಬೈಬಲ್2 ಅವನು ಸಾಯಂಕಾಲ ತನ್ನ ಹಾಸಿಗೆಯಿಂದ ಮೇಲೆದ್ದು ಅರಮನೆಯ ಮಾಳಿಗೆಯ ಮೇಲಕ್ಕೆ ಹೋಗಿ ತಿರುಗಾಡುತ್ತಿದ್ದನು. ದಾವೀದನು ಮಾಳಿಗೆಯ ಮೇಲಿರುವಾಗ, ಒಬ್ಬ ಹೆಂಗಸು ಸ್ನಾನ ಮಾಡುತ್ತಿರುವುದನ್ನು ನೋಡಿದನು. ಅವಳು ಅತ್ಯಂತ ಸುಂದರಳಾಗಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ಒಂದು ದಿವಸ ಸಂಜೇ ಹೊತ್ತಿನಲ್ಲಿ ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿರುವಾಗ ಅಲ್ಲಿಂದ ಬಹುಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವದನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು, ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇದ್ದು, ಸ್ನಾನ ಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಕಂಡನು. ಅಧ್ಯಾಯವನ್ನು ನೋಡಿ |
ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.