Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:25 - ಪರಿಶುದ್ದ ಬೈಬಲ್‌

25 ದಾವೀದನು ಸಂದೇಶಕನಿಗೆ, “ನೀನು ಹೋಗಿ ಯೋವಾಬನಿಗೆ: ‘ಇದರಿಂದ ನೀನು ತಳಮಳಗೊಳ್ಳಬೇಡ. ಒಂದೇ ಖಡ್ಗವು ಈ ಹೊತ್ತು ಒಬ್ಬನನ್ನು ಕೊಂದರೆ, ಇನ್ನೊಂದು ದಿನ ಇನ್ನೊಬ್ಬನನ್ನು ಕೊಲ್ಲುವುದು. ರಬ್ಬ ನಗರದ ಮೇಲೆ ಧೈರ್ಯವಾಗಿ ಆಕ್ರಮಣಮಾಡು. ಆಗ ನೀನು ನಗರವನ್ನು ಗೆಲ್ಲುವೆ!’ ಈ ಮಾತುಗಳಿಂದ ಯೋವಾಬನನ್ನು ಹುರಿದುಂಬಿಸು” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದಕ್ಕೆ ದಾವೀದನು ದೂತನಿಗೆ, “ನೀನು ಹೋಗು, ಇದಕ್ಕೋಸ್ಕರ ವ್ಯಸನಪಡಬೇಡ. ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ, ನಾಳೆ ಇನ್ನೊಬ್ಬನನ್ನು ನುಂಗುವುದು, ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬುದಾಗಿ ಅರಸನು ಆಜ್ಞಾಪಿಸುತ್ತಾನೆ ಎಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ದಾವೀದನು ಆ ದೂತನಿಗೆ, “ನೀನು ಹೋಗಿ ಯೋವಾಬನಿಗೆ, ‘ವ್ಯಸನಪಡಬೇಕಾಗಿಲ್ಲ; ಕತ್ತಿ ಈ ದಿನ ಒಬ್ಬನನ್ನು ನುಂಗಿದರೆ ನಾಳೆ ಇನ್ನೊಬ್ಬನನ್ನು ನುಂಗುತ್ತದೆ. ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿ, ಎಂಬುದಾಗಿ ಅರಸರು ಆಜ್ಞಾಪಿಸುತ್ತಾರೆ’ ಎಂದು ಹೇಳಿ ಅವನನ್ನು ಧೈರ್ಯಪಡಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ದಾವೀದನು ದೂತನಿಗೆ ನೀನು ಹೋಗಿ - ಇದಕ್ಕೋಸ್ಕರವಾಗಿ ವ್ಯಸನ ಪಡಬೇಡ; ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ ನಾಳೆ ಇನ್ನೊಬ್ಬನನ್ನು ನುಂಗುವದು. ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬದಾಗಿ ಅರಸನು ಆಜ್ಞಾಪಿಸುತ್ತಾನೆಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ದಾವೀದನು ಆ ದೂತನಿಗೆ, “ನೀನು ಯೋವಾಬನಿಗೆ, ‘ಇದು ನಿನ್ನನ್ನು ಕದಲಿಸದಿರಲಿ. ಖಡ್ಗವು ಇವನನ್ನಾದರೂ ಸರಿ, ಅವನನ್ನಾದರೂ ಸರಿ ತಿಂದುಬಿಡುವುದು. ನೀನು ಪಟ್ಟಣವನ್ನು ನಿರ್ಮೂಲ ಮಾಡುವ ಹಾಗೆ, ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ,’ ಎಂದು ಹೇಳಿ, ಅವನನ್ನು ಬಲಪಡಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:25
8 ತಿಳಿವುಗಳ ಹೋಲಿಕೆ  

ಯೋವಾಬನು ಅಮ್ಮೋನಿಯರ ರಾಜಧಾನಿಯಾದ ರಬ್ಬಕ್ಕೆ ವಿರುದ್ಧವಾಗಿ ಹೋರಾಡಿ ಆ ನಗರವನ್ನು ವಶಪಡಿಸಿಕೊಂಡನು.


ಆದರೆ ಅದರ ಕಡೆ ಗಮನವಿರಲಿ. ಅದು ತಾನಾಗಿ ಇಸ್ರೇಲಿಗೆ ಸೇರಿದ ಬೇತ್‌ಷೆಮೆಷಿನ ಕಡೆಗೆ ಹೋದರೆ, ಆಗ ಆ ದೊಡ್ಡ ಕೇಡನ್ನು ನಮಗುಂಟು ಮಾಡಿದವನು ಯೆಹೋವನೇ ಸರಿ. ಆದರೆ ಹಸುಗಳು ಬೇತ್‌ಷೆಮೆಷಿಗೆ ಹೋಗದಿದ್ದರೆ, ನಮ್ಮನ್ನು ಶಿಕ್ಷಿಸಿದವನು ಯೆಹೋವನಲ್ಲವೆಂದು ನಮಗೆ ಗೊತ್ತಾಗುವುದು. ನಮಗುಂಟಾದ ಕಾಯಿಲೆಯು ತಾನಾಗಿಯೇ ಬಂದದ್ದೆಂದು ತಿಳಿಯುವುದು” ಎಂದು ಹೇಳಿದರು.


ನಗರದ ಗೋಡೆಯ ಮೇಲಿದ್ದ ಜನರು ನಿಮ್ಮ ಸೈನಿಕರ ಮೇಲೆ ಬಾಣಗಳನ್ನು ಎಸೆದರು. ನಿಮ್ಮ ಸೈನಿಕರಲ್ಲಿ ಕೆಲವರನ್ನು ಕೊಂದರು. ಹಿತ್ತಿಯನಾದ ನಿನ್ನ ಸೈನಿಕ ಊರೀಯನೂ ಸಹ ಸತ್ತುಹೋದನು” ಎಂದು ಹೇಳಿದನು.


ತನ್ನ ಗಂಡನಾದ ಊರೀಯನು ಸತ್ತನೆಂಬ ಸುದ್ದಿಯು ಬತ್ಷೆಬೆಳಿಗೆ ತಿಳಿಯಿತು. ಆಗ ಅವಳು ತನ್ನ ಗಂಡನಿಗಾಗಿ ಗೋಳಾಡಿದಳು.


ಇಸ್ರೇಲರು ಯೆಹೋವನ ಬಳಿಗೆ ಹೋಗಿ ಸಾಯಂಕಾಲದವರೆಗೂ ಮೊರೆಯಿಟ್ಟರು. “ನಾವು ಮತ್ತೆ ಬೆನ್ಯಾಮೀನ್ಯರೊಡನೆ ಯುದ್ಧ ಮಾಡಲು ಹೋಗಬೇಕೇ? ಅವರು ನಮ್ಮ ಬಂಧುಗಳು” ಎಂದು ಅವರು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಹೋಗಿರಿ, ಅವರ ವಿರುದ್ಧ ಯುದ್ಧ ಮಾಡಿರಿ” ಎಂದು ಉತ್ತರಿಸಿದನು. ಇಸ್ರೇಲರು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿದರು. ಮೊದಲನೇ ದಿನದಂತೆ ಅವರು ಮತ್ತೊಮ್ಮೆ ಯುದ್ಧಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು