2 ಸಮುಯೇಲ 11:3 - ಪರಿಶುದ್ದ ಬೈಬಲ್3 ದಾವೀದನು ತನ್ನ ಸೇವಕರನ್ನು ಕರೆದು ಅವಳು ಯಾರೆಂದು ಕೇಳಿದನು. ಒಬ್ಬ ಸೇವಕನು, “ಅವಳು ಎಲೀಯಾಮನ ಮಗಳಾದ ಬತ್ಷೆಬೆಳು. ಹಿತ್ತಿಯನಾದ ಊರೀಯನ ಹೆಂಡತಿ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕೂಡಲೆ ದಾವೀದನು ಒಬ್ಬನನ್ನು ಕರೆದು, “ಆ ಸ್ತ್ರೀ ಯಾರು?” ಎಂದು ವಿಚಾರಿಸಲು ಅವನು, “ಆಕೆಯು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆ ಅಲ್ಲವೇ?” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕೂಡಲೆ ದಾವೀದನು ಒಬ್ಬನನ್ನು ಕರೆದು ಆ ಸ್ತ್ರೀ ಯಾರೆಂದು ಕೇಳಿದನು. ಅವನು, “ಆಕೆ ಎಲೀಯಾಮನ ಮಗಳೂ ಹಿತ್ತಿಯನಾದ ಊರೀಯನ ಹೆಂಡತಿಯೂ ಆದ ಬತ್ಷೆಬೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕೂಡಲೆ ದಾವೀದನು ಒಬ್ಬನನ್ನು ಕರೆದು ಆ ಸ್ತ್ರೀ ಯಾರೆಂದು ಕೇಳಲು ಅವನು - ಆಕೆಯು ಎಲೀಯಾಮನ ಮಗಳೂ ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆಯಲ್ಲವೋ ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆ ಸ್ತ್ರೀಯು ಬಹು ಸೌಂದರ್ಯವುಳ್ಳ ರೂಪವತಿಯಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವುದಕ್ಕೆ ಕಳುಹಿಸಿದಾಗ ಒಬ್ಬನು, “ಅವಳು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಬತ್ಷೆಬೆಳು,” ಎಂದನು. ಅಧ್ಯಾಯವನ್ನು ನೋಡಿ |
ಆದರೆ ಬಡವನ ಹತ್ತಿರ ಅವನೇ ತಂದ ಒಂದು ಕುರಿಮರಿಯ ಹೊರತಾಗಿ ಬೇರೇನೂ ಇರಲಿಲ್ಲ. ಆ ಕುರಿಮರಿಯನ್ನು ಬಹು ಪ್ರೀತಿಯಿಂದ ಆ ಬಡವನು ಸಾಕಿದನು. ಅವನ ಮಕ್ಕಳೊಂದಿಗೆ ಈ ಕುರಿಮರಿಯೂ ಬೆಳೆಯಿತು. ಆ ಕುರಿಮರಿಯು ಬಡವನ ಊಟವನ್ನೇ ತಿನ್ನುತ್ತಿತ್ತು. ಅವನ ಬಟ್ಟಲಿನಲ್ಲಿಯೇ ಅದು ನೀರನ್ನು ಕುಡಿಯುತ್ತಿತ್ತು. ಅವನ ಎದೆಯ ಮೇಲೆಯೇ ಆ ಕುರಿಮರಿಯು ಮಲಗುತ್ತಿತ್ತು. ಆ ಕುರಿಮರಿಯು ಬಡವನಿಗೆ ಮಗಳಂತೆಯೇ ಇತ್ತು.