2 ಸಮುಯೇಲ 11:8 - ಪರಿಶುದ್ದ ಬೈಬಲ್8 ನಂತರ ದಾವೀದನು ಊರೀಯನಿಗೆ, “ಮನೆಗೆ ಹೋಗಿ ವಿಶ್ರಾಂತಿಯನ್ನು ಪಡೆ” ಎಂದನು. ಊರೀಯನು ರಾಜನ ಮನೆಯನ್ನು ಬಿಟ್ಟುಹೋದನು. ಊರೀಯನಿಗೆ ರಾಜನು ಕೊಡುಗೆಗಳನ್ನು ಸಹ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನಿಗೆ, “ಮನೆಗೆ ಹೋಗಿ ಕೈಕಾಲು ತೊಳೆದುಕೋ” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅನಂತರ ಅವನಿಗೆ, “ನೀನು ಮನೆಗೆ ಹೋಗಿ ಕೈಕಾಲು ತೊಳೆದುಕೋ,” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮನೆಗೆ ಹೋಗಿ ಕೈಕಾಲು ತೊಳೆದುಕೋ ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದಾವೀದನು ಊರೀಯನಿಗೆ, “ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ,” ಎಂದನು. ಊರೀಯನು ಅರಸನ ಮನೆಯಿಂದ ಹೊರಟುಹೋದನು. ನಂತರ ಅರಸನು ಅವನಿಗೆ ಉಪಹಾರ ಕಳುಹಿಸಿದನು. ಅಧ್ಯಾಯವನ್ನು ನೋಡಿ |