2 ಸಮುಯೇಲ 12:10 - ಪರಿಶುದ್ದ ಬೈಬಲ್10 ನೀನು ಅವನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಮತ್ತು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದ ಕತ್ತಿಯು ನಿನ್ನ ಕುಟುಂಬವನ್ನು ಸದಾ ಹಿಡಿದಿರುವುದು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದೆ; ಹಾಗು ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ. ಆದ್ದರಿಂದ ಕತ್ತಿ ನಿನ್ನ ಮನೆಯನ್ನು ಬಿಟ್ಟು ತೊಲಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದದರಿಂದಲೂ ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದರಿಂದಲೂ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಈಗ ನೀನು ನನ್ನನ್ನು ತಿರಸ್ಕರಿಸಿ, ಹಿತ್ತಿಯನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡದ್ದರಿಂದ, ಖಡ್ಗವು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ತೊಲಗದು. ಅಧ್ಯಾಯವನ್ನು ನೋಡಿ |
ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.