Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:20 - ಪರಿಶುದ್ದ ಬೈಬಲ್‌

20 ಆಗ ದಾವೀದನು ನೆಲದಿಂದ ಮೇಲಕ್ಕೆದ್ದನು. ಅವನು ತನ್ನನ್ನು ಶುಚಿಗೊಳಿಸಿಕೊಂಡನು. ಅವನು ತನ್ನ ಬಟ್ಟೆಗಳನ್ನು ಬದಲಿಸಿ ಬೇರೆ ಬಟ್ಟೆಗಳನ್ನು ಧರಿಸಿದನು. ನಂತರ ಅವನು ಯೆಹೋವನನ್ನು ಆರಾಧಿಸುವುದಕ್ಕಾಗಿ ಆತನ ಆಲಯಕ್ಕೆ ಹೋದನು. ಅವನು ಮನೆಗೆ ಹೋಗಿ ತಿನ್ನಲು ಏನನ್ನಾದರೂ ಕೊಡುವಂತೆ ಕೇಳಿದನು. ಅವನ ಸೇವಕರು ಕೊಟ್ಟ ಸ್ವಲ್ಪ ಆಹಾರವನ್ನು ಅವನು ತಿಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಸರ್ವೇಶ್ವರನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ದಾವೀದನು ನೆಲದಿಂದೆದ್ದು ಸ್ನಾನಮಾಡಿ ತೈಲ ಹಚ್ಚಿಕೊಂಡು ತನ್ನ ಬಟ್ಟೆಗಳನ್ನು ಬದಲಿಸಿ ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರತರಿಸಿ ಊಟಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ, ತೈಲವನ್ನು ಹಚ್ಚಿಕೊಂಡವನಾಗಿ, ಬದಲು ವಸ್ತ್ರಗಳನ್ನು ಧರಿಸಿಕೊಂಡು, ಯೆಹೋವ ದೇವರ ಮನೆಗೆ ಹೋಗಿ, ಅವರನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನ ಕೋರಿಕೆಯ ಮೇರೆಗೆ ಅವರು ಅವನಿಗೆ ಆಹಾರವನ್ನು ಬಡಿಸಿದರು ಮತ್ತು ಅವನು ತಿನ್ನುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:20
20 ತಿಳಿವುಗಳ ಹೋಲಿಕೆ  

ಆಗ ಯೋಬನು ತನ್ನ ಮೇಲಂಗಿಯನ್ನು ಹರಿದುಕೊಂಡು, ತಲೆಯನ್ನು ಬೋಳಿಸಿಕೊಂಡು, ನೆಲದ ಮೇಲೆ ಮೊಣಕಾಲೂರಿ ದೇವರಿಗೆ ಸ್ತೋತ್ರಸಲ್ಲಿಸುತ್ತಾ,


ನೀನು ಸ್ನಾನ ಮಾಡಿ ಶೃಂಗರಿಸಿಕೊಂಡು ಶ್ರೇಷ್ಠವಾದ ಉಡುಪುಗಳನ್ನು ಧರಿಸಿಕೊಂಡು ಕಣಕ್ಕೆ ಹೋಗು. ಆದರೆ ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೆ ಅವನಿಗೆ ಮರೆಯಾಗಿರು.


ಆದ್ದರಿಂದ ನೀವು ಉಪವಾಸ ಮಾಡುವಾಗ, ಮುಖವನ್ನು ತೊಳೆದುಕೊಳ್ಳಿರಿ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳಿರಿ.


ಒಳ್ಳೆಯ ಉಡುಪುಗಳನ್ನು ಧರಿಸಿಕೊಂಡು ನಿನ್ನನ್ನು ಅಲಂಕರಿಸಿಕೊ.


ಯೋಬನು ತನ್ನ ಹೆಂಡತಿಗೆ, “ನೀನು ಮೂರ್ಖಳಂತೆ ಮಾತಾಡುತ್ತಿರುವೆ! ದೇವರು ಒಳ್ಳೆಯವುಗಳನ್ನು ಕೊಡುವಾಗ ನಾವು ಅವುಗಳನ್ನು ಸ್ವೀಕರಿಸಿಕೊಳ್ಳುತ್ತೇವೆ. ಆತನು ಕೆಟ್ಟದ್ದನ್ನು ಕೊಡುವಾಗ ನಾವು ಸ್ವೀಕರಿಸಿಕೊಳ್ಳಬಾರದೋ?” ಎಂದು ಉತ್ತರಕೊಟ್ಟನು. ಈ ಸಂಕಟದಲ್ಲಿಯೂ ಯೋಬನು ಪಾಪ ಮಾಡಲಿಲ್ಲ ಹಾಗೂ ದೇವರ ವಿರುದ್ಧ ಯಾವ ಮಾತನ್ನು ಆಡಲಿಲ್ಲ.


ಆಗ ರಾಜನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತು, “ನನ್ನ ಒಡೆಯನಾದ ಯೆಹೋವನೇ, ನಾನೆಷ್ಟರವನು? ನನ್ನ ಕುಲ ಎಷ್ಟರದು? ನೀನು ನನ್ನನ್ನೇಕೆ ಇಷ್ಟು ಉದ್ಧರಿಸಿದೆ?


ನಾನು ಬಾಯಿತೆರೆದು ಮಾತಾಡುವುದಿಲ್ಲ. ನೀನು ನ್ಯಾಯಕ್ಕೆ ತಕ್ಕಂತೆ ಮಾಡಿರುವೆ.


ದಾವೀದನು ಪವಿತ್ರ ಪೆಟ್ಟಿಗೆಗಾಗಿ ಒಂದು ಗುಡಾರವನ್ನು ನಿರ್ಮಿಸಿದನು. ಇಸ್ರೇಲರು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಗುಡಾರದಲ್ಲಿ ಪ್ರತ್ಯೇಕವಾದ ಸ್ಥಳದಲ್ಲಿ ಇಟ್ಟರು. ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.


ನೀನು ನನ್ನ ತಲೆಗೆ ಎಣ್ಣೆಯನ್ನು ಹಚ್ಚಲಿಲ್ಲ. ಈಕೆಯಾದರೋ ನನ್ನ ಪಾದಗಳಿಗೆ ಪರಿಮಳತೈಲವನ್ನು ಹಚ್ಚಿದಳು.


ಆದರೆ ದಾವೀದನು ತನ್ನ ಸೇವಕರು ಗುಸುಗುಸು ಮಾತನಾಡುವುದನ್ನು ಕೇಳಿ, ಮಗು ಸತ್ತಿದೆಯೆಂಬುದನ್ನು ಅರ್ಥಮಾಡಿಕೊಂಡನು. ಆದ್ದರಿಂದ ದಾವೀದನು ತನ್ನ ಸೇವಕರನ್ನು ಕರೆದು, “ಮಗು ಸತ್ತುಹೋಯಿತೇ?” ಎಂದು ಕೇಳಿದನು. “ಹೌದು, ಸತ್ತುಹೋಯಿತು” ಎಂದು ಸೇವಕರು ಉತ್ತರಿಸಿದರು.


ದಾವೀದನ ಸೇವಕರು ಅವನಿಗೆ, “ನೀನು ಹೀಗೇಕೆ ಮಾಡುತ್ತಿರುವೆ? ಮಗುವು ಇನ್ನೂ ಜೀವಂತವಾಗಿದ್ದಾಗ ನೀನು ಊಟಮಾಡಲಿಲ್ಲ. ನೀನು ಗೋಳಾಡಿದೆ, ಆದರೆ ಮಗುವು ಸತ್ತಮೇಲೆ ನೀನು ಮೇಲಕ್ಕೆದ್ದು ಊಟ ಮಾಡಿದೆ?” ಎಂದು ಕೇಳಿದರು.


ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು.


ಸೌಲನ ಮೊಮ್ಮಗನಾದ ಮೆಫೀಬೋಶೆತನು ರಾಜನಾದ ದಾವೀದನನ್ನು ನೋಡಲು ಬಂದನು. ರಾಜನು ಜೆರುಸಲೇಮನ್ನು ಬಿಟ್ಟು ಸುರಕ್ಷಿತವಾಗಿ ಮತ್ತೆ ಹಿಂದಿರುಗುವತನಕ ಮೆಫೀಬೋಶೆತನು ತನ್ನ ಪಾದಗಳನ್ನು ಲಕ್ಷಿಸಿರಲಿಲ್ಲ; ಗಡ್ಡವನ್ನು ಬೋಳಿಸಿರಲಿಲ್ಲ ಮತ್ತು ಬಟ್ಟೆಗಳನ್ನು ಒಗೆದಿರಲಿಲ್ಲ.


ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.


ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ನನ್ನ ಸರ್ವಾಂಗಗಳೇ, ಆತನ ಪವಿತ್ರ ಹೆಸರನ್ನು ಕೊಂಡಾಡಿರಿ!


ಯೆಹೋವನು ಕನಿಕರವುಳ್ಳವನೂ ಕೃಪಾಪೂರ್ಣನೂ ತಾಳ್ಮೆಯುಳ್ಳವನೂ ಪ್ರೀತಿಪೂರ್ಣನೂ ಆಗಿದ್ದಾನೆ.


ನಿನ್ನನ್ನು ಜ್ಞಾನಿಯೆಂದು ಪರಿಗಣಿಸಿಕೊಳ್ಳದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದರಿಂದ ದೂರವಾಗಿರು.


ಈಗ ನಾನು ನಿನ್ನಲ್ಲಿ ಬೇಡಿಕೊಳ್ಳುತ್ತೇನೆ, ನನ್ನ ಪಾಪವನ್ನು ಕ್ಷಮಿಸು. ನನ್ನೊಂದಿಗೆ ಹಿಂದಿರುಗಿ ಬಾ, ಆಗ ನಾನು ಯೆಹೋವನನ್ನು ಆರಾಧಿಸಲು ಸಾಧ್ಯವಾಗುವುದು” ಎಂದು ಅವನನ್ನು ಬೇಡಿಕೊಂಡನು.


ಆಗ ಸಮುವೇಲನು ಸೌಲನ ಜೊತೆಯಲ್ಲಿ ಹೋದನು. ಸೌಲನು ದೇವರನ್ನು ಆರಾಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು