2 ಸಮುಯೇಲ 12:21 - ಪರಿಶುದ್ದ ಬೈಬಲ್21 ದಾವೀದನ ಸೇವಕರು ಅವನಿಗೆ, “ನೀನು ಹೀಗೇಕೆ ಮಾಡುತ್ತಿರುವೆ? ಮಗುವು ಇನ್ನೂ ಜೀವಂತವಾಗಿದ್ದಾಗ ನೀನು ಊಟಮಾಡಲಿಲ್ಲ. ನೀನು ಗೋಳಾಡಿದೆ, ಆದರೆ ಮಗುವು ಸತ್ತಮೇಲೆ ನೀನು ಮೇಲಕ್ಕೆದ್ದು ಊಟ ಮಾಡಿದೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇದನ್ನು ನೋಡಿ ಅವನ ಸೇವಕರು ಅವನಿಗೆ, “ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸಮಾಡಿದ್ದೀ. ಹುಡುಗನು ಸತ್ತ ನಂತರ ಎದ್ದು ಊಟ ಮಾಡಿರುವೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇದನ್ನು ನೋಡಿದ ಸೇವಕರು ಅವನಿಗೆ, “ಇದೇನು ನೀವು ಮಾಡಿದ್ದು? ಹುಡುಗ ಜೀವದಿಂದಿದ್ದಾಗ ಅಳುತ್ತಾ ಉಪವಾಸವಾಗಿದ್ದಿರಿ. ಹುಡುಗ ಸತ್ತ ನಂತರ ಎದ್ದು ಊಟಮಾಡಿದಿರಿ!” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇದನ್ನು ನೋಡಿ ಅವನ ಸೇವಕರು ಅವನಿಗೆ - ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸವಾಗಿದ್ದಿ; ಹುಡುಗನು ಸತ್ತನಂತರ ಎದ್ದು ಊಟಮಾಡಿದಿ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನ ಸೇವಕರು ಅವನಿಗೆ, “ಇದು ಏನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ, ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದೆ. ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದೆ,” ಎಂದರು. ಅಧ್ಯಾಯವನ್ನು ನೋಡಿ |