2 ಸಮುಯೇಲ 12:5 - ಪರಿಶುದ್ದ ಬೈಬಲ್5 ದಾವೀದನು ಶ್ರೀಮಂತನ ಮೇಲೆ ಬಹಳ ಕೋಪಗೊಂಡನು. ಅವನು ನಾತಾನನಿಗೆ, “ಯೆಹೋವನ ಆಣೆಯಾಗಿ ಈ ಕಾರ್ಯವನ್ನು ಮಾಡಿದ ಮನುಷ್ಯನು ಸಾಯಲೇಬೇಕು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, “ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದನ್ನು ಕೇಳಿದ್ದೇ ದಾವೀದನು ಆ ವ್ಯಕ್ತಿಯ ಮೇಲೆ ಕಡುಕೋಪಗೊಂಡು ನಾತಾನನಿಗೆ, “ಸರ್ವೇಶ್ವರನಾಣೆ, ಆ ವ್ಯಕ್ತಿ ಸಾಯಲೇ ಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ - ಯೆಹೋವನಾಣೆ, ಆ ಮನುಷ್ಯನು ಸಾಯಲೇ ಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ, “ಯೆಹೋವ ದೇವರ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು. ಅಧ್ಯಾಯವನ್ನು ನೋಡಿ |
“ಆಗ ಶ್ರೀಮಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಶ್ರೀಮಂತನು ಆ ಪ್ರಯಾಣಿಕನಿಗೆ ಊಟವನ್ನು ಕೊಡಲು ಇಚ್ಛಿಸಿದನು. ಆದರೆ ಶ್ರೀಮಂತನು ಆ ಪ್ರಯಾಣಿಕನಿಗೆ ಕೊಡಲು ತನ್ನ ಸ್ವಂತ ಕುರಿಗಳಿಂದಾಗಲಿ ದನಗಳಿಂದಾಗಲಿ ಯಾವುದನ್ನೇ ಆಗಲಿ ತೆಗೆದುಕೊಳ್ಳಲು ಇಚ್ಛಿಸಲಿಲ್ಲ. ಶ್ರೀಮಂತನು ಆ ಬಡವನಿಂದ ಕುರಿಮರಿಯನ್ನು ತೆಗೆದುಕೊಂಡು ಅದನ್ನು ಕೊಯ್ಯಿಸಿ ತನ್ನ ಅತಿಥಿಗಾಗಿ ಅಡಿಗೆ ಮಾಡಿಸಿದನು” ಎಂದು ಹೇಳಿದನು.