Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:6 - ಪರಿಶುದ್ದ ಬೈಬಲ್‌

6 ಅವನು ಕರುಣೆಯಿಲ್ಲದೆ ಇಂತಹ ಕೆಟ್ಟಕಾರ್ಯವನ್ನು ಮಾಡಿದ್ದಕ್ಕಾಗಿ ಕುರಿಮರಿಯ ಬೆಲೆಯ ನಾಲ್ಕರಷ್ಟು ಹಿಂದಕ್ಕೆ ಕೊಡಲೇಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಲೇಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಕನಿಕರಪಡದೆ ಈ ಕಾರ್ಯವನ್ನು ಮಾಡಿದ್ದರಿಂದ, ಆ ಕುರಿಗೋಸ್ಕರವಾಗಿ ನಾಲ್ಕರಷ್ಟು ತಿರುಗಿ ಕೊಡಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:6
7 ತಿಳಿವುಗಳ ಹೋಲಿಕೆ  

“ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಅದನ್ನು ಕೊಯಿದರೆ ಅಥವಾ ಮಾರಿದರೆ, ಅವನು ತಾನು ಕದ್ದ ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನೂ ಅಥವಾ ತಾನು ಕದ್ದ ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನೂ ಕೊಡಬೇಕು.


ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.


ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ಕುಣಿಯನ್ನು ತೋಡಿದವನು ಆ ಪಶುವಿಗೆ ಪ್ರತಿಯಾಗಿ ಈಡುಕೊಡಬೇಕು. ಅವನು ಈಡುಕೊಟ್ಟ ನಂತರ ಆ ಸತ್ತ ಪಶುವು ಅವನದಾಗುತ್ತದೆ.


ಸುಳ್ಳಾಣೆ ಇಟ್ಟುಕೊಂಡ ವಸ್ತುವನ್ನಾಗಲಿ ಸಂಪೂರ್ಣವಾಗಿ ತಂದುಕೊಡಬೇಕು. ಅದರೊಂದಿಗೆ ಅದರ ಐದನೆಯ ಒಂದಂಶವನ್ನು ಹೆಚ್ಚಾಗಿ ತಂದುಕೊಡಬೇಕು. ದೋಷಪರಿಹಾರಕ ಯಜ್ಞವನ್ನು ಅರ್ಪಿಸುವ ದಿನದಲ್ಲಿಯೇ ನಿಜವಾದ ಯಜಮಾನನಿಗೆ ಇದನ್ನು ತಂದುಕೊಡಬೇಕು.


ಅವರಿಂದ ಕಿತ್ತುಕೊಂಡ ಹೊಲಗದ್ದೆಗಳನ್ನು, ದ್ರಾಕ್ಷಾತೋಟ, ಎಣ್ಣೆಮರಗಳ ತೋಟ ಮತ್ತು ಅವರ ಮನೆಗಳನ್ನು ಅವರಿಗೆ ಈಗಲೇ ಹಿಂದಕ್ಕೆ ಕೊಡಿರಿ. ಅವರಿಂದ ವಸೂಲಿ ಮಾಡಿದ ಬಡ್ಡಿಯನ್ನು ಹಿಂದಕ್ಕೆ ಕೊಡಿರಿ. ನೀವು ಯಾವ ಯಾವದಕ್ಕೆ ಬಡ್ಡಿ ವಸೂಲಿ ಮಾಡಿರುವಿರೋ ಎಲ್ಲವನ್ನು ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು