2 ಸಮುಯೇಲ 12:8 - ಪರಿಶುದ್ದ ಬೈಬಲ್8 ಅವನ ಕುಟುಂಬವನ್ನೂ ಅವನ ಪತ್ನಿಯರನ್ನೂ ನಿನಗೆ ಕೊಟ್ಟವನು ನಾನೇ. ನಿನ್ನನ್ನು ಇಸ್ರೇಲಿನ ಮತ್ತು ಯೆಹೂದದ ರಾಜನನ್ನಾಗಿ ಮಾಡಿದವನು ನಾನೇ. ಅದು ಸಾಲದು ಎನ್ನುವಂತೆ, ನಾನು ಮತ್ತಷ್ಟು ಹೆಚ್ಚಿನದನ್ನೂ ನೀಡಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ನಾನು ನಿನಗೆ ನಿನ್ನ ಯಜಮಾನನ ಮನೆಯನ್ನು ಒಪ್ಪಿಸಿದೆನು. ಅವನ ಹೆಂಡತಿಯರನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಇಸ್ರಾಯೇಲ್ ಹಾಗೂ ಯೆಹೂದ ಕುಲಗಳನ್ನು ನಿನಗೆ ವಶಪಡಿಸಿದೆನು. ಇದೂ ಸಾಕಾಗಾದೆ ಹೋಗಿದ್ದರೆ ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದಲ್ಲದೆ, ನಾನು ನಿನಗೆ ನಿನ್ನ ಯಜಮಾನನ ಮನೆಯನ್ನೂ ಅವನ ಮಡದಿಯರನ್ನೂ ನಿನ್ನ ಮಡಿಲಿಗೆ ಹಾಕಿದೆ. ಇಸ್ರಯೇಲ್ ಮತ್ತು ಯೆಹೂದ ಕುಲಗಳನ್ನು ನಿನ್ನ ವಶಕ್ಕೆ ಕೊಟ್ಟೆ. ಇದೂ ಸಾಲದಿದ್ದರೆ, ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ನಾನು ನಿನಗೆ ನಿನ್ನ ಯಜಮಾನನ ಮನೆಯನ್ನು ಒಪ್ಪಿಸಿದೆನು; ಅವನ ಹೆಂಡತಿಯರನ್ನು ನಿನ್ನ ಮಗ್ಗಲಿಗೆ ಕೊಟ್ಟೆನು. ಇಸ್ರಾಯೇಲ್ ಮತ್ತು ಯೆಹೂದ ಕುಲಗಳನ್ನು ನಿನಗೆ ವಶಪಡಿಸಿದೆನು. ಇದು ಸಾಕಾಗಿರದಿದ್ದರೆ ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿನ್ನ ಯಜಮಾನನ ಮನೆಯನ್ನೂ, ನಿನ್ನ ಯಜಮಾನನ ಹೆಂಡತಿಯರನ್ನೂ ನಿನಗೆ ಕೊಟ್ಟು; ಇಸ್ರಾಯೇಲಿನ ಮನೆಯನ್ನೂ, ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು. ಇದು ಸಾಲದೆ ಇದ್ದರೆ, ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ಅಧ್ಯಾಯವನ್ನು ನೋಡಿ |