2 ಸಮುಯೇಲ 13:10 - ಪರಿಶುದ್ದ ಬೈಬಲ್10 ಅಮ್ನೋನನು ತಾಮಾರಳಿಗೆ, “ರೊಟ್ಟಿಗಳನ್ನು ಒಳ ಕೋಣೆಗೆ ತೆಗೆದುಕೊಂಡು ಬಾ. ನಾನು ನಿನ್ನ ಕೈಗಳಿಂದಲೇ ತಿನ್ನುತ್ತೇನೆ” ಎಂದನು. ತಾಮಾರಳು ತನ್ನ ಸೋದರನಾದ ಅಮ್ನೋನನಿದ್ದ ಒಳಕೋಣೆಗೆ ಹೋದಳು. ಅವಳು ತಾನು ಮಾಡಿದ ರೊಟ್ಟಿಗಳನ್ನು ತಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಎಲ್ಲರೂ ಹೋದ ಮೇಲೆ ಅವನು ತಾಮಾರಳಿಗೆ, “ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ; ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ” ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಆಹಾರವನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಎಲ್ಲರೂ ಹೋದಮೇಲೆ ಅವನು ತಾಮಾರಳಿಗೆ, “ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ, ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ!” ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಎಲ್ಲರೂ ಹೋದ ಮೇಲೆ ಅವನು ತಾಮಾರಳಿಗೆ - ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ; ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡುಹೋಗಿ ಅವನ ಮುಂದಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಅಮ್ನೋನನು, “ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿಯೊಳಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿಯೊಳಗೆ ತನ್ನ ಸಹೋದರನಾದ ಅಮ್ಮೋನನ ಬಳಿಗೆ ತೆಗೆದುಕೊಂಡು ಬಂದಳು. ಅಧ್ಯಾಯವನ್ನು ನೋಡಿ |