2 ಸಮುಯೇಲ 13:13 - ಪರಿಶುದ್ದ ಬೈಬಲ್13 ನನಗಾದ ಈ ಕಳಂಕವನ್ನು ಎಂದೆಂದಿಗೂ ನಾನು ತೊಡೆದುಹಾಕಲಾಗುವುದಿಲ್ಲ. ಇಸ್ರೇಲಿನ ಜನರಲ್ಲಿ ತಮ್ಮ ಅಪಮಾನಕರವಾದ ಕಾರ್ಯಗಳಿಂದ ನೀಚರೆನಿಸಿಕೊಳ್ಳುವ ಜನರಂತೆ ನೀನೂ ಆಗಿಬಿಡುವೆ. ದಯವಿಟ್ಟು ರಾಜನೊಂದಿಗೆ ಮಾತನಾಡು. ಅವನು ನಿನ್ನ ಜೊತೆಯಲ್ಲಿ ನನ್ನ ಮದುವೆ ಮಾಡಲಿ” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಈ ಅಪಮಾನವನ್ನು ನಾನು ಮರೆಮಾಡುವುದಾದರೂ ಹೇಗೆ? ನಿನಗಂತೂ ಇಸ್ರಾಯೇಲರಲ್ಲಿ ನೀಚನೆಂಬ ಹೆಸರು ತಪ್ಪದು. ಆದುದರಿಂದ ದಯವಿಟ್ಟು ಅರಸನ ಸಂಗಡ ಮಾತನಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇಂಥ ಹುಚ್ಚುತನ ಬೇಡ, ಈ ಅವಮಾನವನ್ನು ಮರೆಮಾಡುವುದು ಹೇಗೆ? ನಿನಗಂತೂ ಇಸ್ರಯೇಲರಲ್ಲಿ ನೀಚನೆಂಬ ಹೆಸರು ತಪ್ಪದು. ಆದುದರಿಂದ ದಯವಿಟ್ಟು ಅರಸನ ಸಂಗಡ ಮಾತಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಂಥ ಹುಚ್ಚುತನವನ್ನು ಮಾಡಬೇಡ. ಈ ಅಪಮಾನವನ್ನು ಮರೆಮಾಡುವದು ಹೇಗೆ? ನಿನಗಂತೂ ಇಸ್ರಾಯೇಲ್ಯರಲ್ಲಿ ನೀಚನೆಂಬ ಹೆಸರು ತಪ್ಪದು. ಆದದರಿಂದ ದಯವಿಟ್ಟು ಅರಸನ ಸಂಗಡ ಮಾತಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಈ ಅವಮಾನವನ್ನು ಮರೆಮಾಡುವುದು ಹೇಗೆ? ನೀನು ಇಸ್ರಾಯೇಲಿನಲ್ಲಿ ದುಷ್ಟ ಮೂರ್ಖರೊಳಗೆ ಒಬ್ಬನಾಗಿ ಇರುವೆ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು. ಏಕೆಂದರೆ ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ,” ಎಂದಳು. ಅಧ್ಯಾಯವನ್ನು ನೋಡಿ |