2 ಸಮುಯೇಲ 13:23 - ಪರಿಶುದ್ದ ಬೈಬಲ್23 ಎರಡು ವರ್ಷಗಳ ನಂತರ, ಅಬ್ಷಾಲೋಮನ ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕೆಲವು ಜನರು ಬಾಳ್‌ಹಾಚೋರಿಗೆ ಬಂದರು. ಇದನ್ನು ಬಂದು ನೋಡುವಂತೆ ರಾಜನ ಮಕ್ಕಳಿಗೆಲ್ಲ ಅಬ್ಷಾಲೋಮನು ಆಹ್ವಾನವನ್ನು ನೀಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಯಿಮನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವ ವ್ಯವಸ್ಥೆಮಾಡಿದನು. ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಆಮಂತ್ರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಎರಡು ವರುಷಗಳಾದನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀವಿುನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಎರಡು ವರ್ಷ ಪೂರ್ಣ ಮುಗಿದ ತರುವಾಯ, ಅಬ್ಷಾಲೋಮನಿಗೆ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವಾಗ, ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು. ಅಧ್ಯಾಯವನ್ನು ನೋಡಿ |
ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.