2 ಸಮುಯೇಲ 13:24 - ಪರಿಶುದ್ದ ಬೈಬಲ್24 ಅಬ್ಷಾಲೋಮನು ರಾಜನ ಬಳಿಗೆ ಹೋಗಿ, “ನನ್ನ ಕುರಿಗಳ ತುಪ್ಪಟವನ್ನು ಕತ್ತರಿಸಲು ಕೆಲವು ಜನರು ಬರುತ್ತಾರೆ. ದಯವಿಟ್ಟು ನೀವು ನಿಮ್ಮ ಸೇವಕರೊಂದಿಗೆ ಬಂದು ಅದನ್ನು ಗಮನಿಸಿ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವನು ಅರಸನ ಬಳಿಗೆ ಹೋಗಿ ಅವನನ್ನು, “ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರೆಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಬರಲಿ” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವನು ಅರಸನ ಬಳಿಗೂ ಹೋಗಿ, “ಅರಸರೇ, ತಮ್ಮ ಸೇವಕನಾದ ನಾನು ಕುರಿಗಳ ಉಣ್ಣೆಕತ್ತರಿಸುವವರನ್ನು ಕರೆಸಿದ್ದೇನೆ. ಅರಸನು ತಮ್ಮ ಸೇವಕರ ಸಮೇತ ಅಲ್ಲಿಗೆ ಚಿತ್ತೈಸೋಣವಾಗಲಿ,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವನು ಅರಸನ ಬಳಿಗೂ ಹೋಗಿ ಅವನನ್ನು - ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರಿಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಚಿತ್ತಯಿಸೋಣವಾಗಲಿ ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ, “ಇಗೋ, ಈಗ ನಿನ್ನ ಸೇವಕನ ಬಳಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ, ತನ್ನ ಸೇವಕರೂ ನಿನ್ನ ಸೇವಕನ ಬಳಿಗೆ ಬರಬಹುದೋ?” ಎಂದನು. ಅಧ್ಯಾಯವನ್ನು ನೋಡಿ |