Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:28 - ಪರಿಶುದ್ದ ಬೈಬಲ್‌

28 ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದಕೂಡಲೆ ಅವನನ್ನು ಹೊಡೆದು ಕೊಂದುಹಾಕಿ; ಹೆದರಬೇಡಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೆ? ಧೈರ್ಯದಿಂದಿರಿ, ಶೂರರಾಗಿರಿ,” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ - ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ; ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೋ? ಧೈರ್ಯದಿಂದಿರಿ, ಶೂರರಾಗಿರಿ ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:28
30 ತಿಳಿವುಗಳ ಹೋಲಿಕೆ  

ಆದ್ದರಿಂದ ಆ ಲೇವಿಯು ಮತ್ತು ಅವನ ಮಾವನು ಒಟ್ಟಿಗೆ ಅನ್ನಪಾನಗಳನ್ನು ತೆಗೆದುಕೊಂಡರು. ಬಳಿಕ ಆ ಸ್ತ್ರೀಯ ತಂದೆಯು, “ದಯವಿಟ್ಟು ಈ ರಾತ್ರಿ ಇದ್ದುಬಿಡು. ವಿಶ್ರಮಿಸಿಕೋ, ಸಂತೋಷಪಡು” ಎಂದನು.


ಲೇವಿಯು ಮತ್ತು ಅವನ ಸಂಗಡಿಗರು ಸಂತೋಷದಿಂದ ಅಲ್ಲಿದ್ದಾಗ ಆ ನಗರದ ಕೆಲವು ಜನರು ಆ ಮನೆಗೆ ಮುತ್ತಿಗೆ ಹಾಕಿದರು. ಅವರು ಮಹಾ ನೀಚಜನರಾಗಿದ್ದರು. ಅವರು ಬಾಗಿಲು ತಟ್ಟತೊಡಗಿದರು. ಆ ಮನೆಯ ಯಜಮಾನನಾದ ವೃದ್ಧನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ. ನಾವು ಅವನೊಂದಿಗೆ ಸಂಭೋಗ ಮಾಡಬೇಕು”ಎಂದು ಕೂಗಾಡಿದರು.


ಆಮೇಲೆ ಆ ಲೇವಿಯೂ ಅವನ ಉಪಪತ್ನಿಯೂ ಅವನ ಆಳೂ ಹೊರಡಲು ಎದ್ದರು. ಆದರೆ ಆ ಸ್ತ್ರೀಯ ತಂದೆಯು, “ಈಗ ಕತ್ತಲಾಗುತ್ತಾ ಬಂತು, ಹೊತ್ತು ಮುಳುಗುವುದರಲ್ಲಿದೆ. ಈ ರಾತ್ರಿ ಇಲ್ಲಿಯೇ ಸಂತೋಷದಿಂದ ಕಾಲ ಕಳೆಯಿರಿ. ನಾಳೆ ಬೆಳಿಗ್ಗೆ ನೀವು ಬೇಗನೆ ಎದ್ದು ಪ್ರಯಾಣಮಾಡಬಹುದು” ಎಂದನು.


ಅನ್ನಪಾನಗಳನ್ನು ತೆಗೆದುಕೊಂಡು ಸಂತೃಪ್ತನಾಗಿದ್ದ ಬೋವಜನು ಧಾನ್ಯದ ರಾಶಿಯ ಹತ್ತಿರ ಮಲಗಲು ಹೋದನು. ಆಗ ರೂತಳು ರಹಸ್ಯವಾಗಿ ಬಂದು ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಅವನ ಪಾದಗಳ ಬಳಿಯಲ್ಲಿಯೇ ಮಲಗಿದಳು.


ಪೇತ್ರ ಮತ್ತು ಉಳಿದ ಅಪೊಸ್ತಲರು, “ನಾವು ವಿಧೇಯರಾಗಬೇಕಾದದ್ದು ದೇವರಿಗೇ ಹೊರತು ನಿಮಗಲ್ಲ!


“ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.


ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳುಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.


ಅದೇ ರಾತ್ರಿ ಕಸ್ದೀಯರ ರಾಜನಾದ ಬೇಲ್ಶಚ್ಚರನ ಕೊಲೆಯಾಯಿತು.


ಊಟವು ಸಂತೋಷಗೊಳಿಸುವುದು; ದ್ರಾಕ್ಷಾರಸವು ಉಲ್ಲಾಸಗೊಳಿಸುವುದು; ಹಣವು ಅನೇಕ ಸಮಸ್ಯೆಗಳನ್ನು ಬಗೆಹರಿಸುವುದು.


ಆದ್ದರಿಂದ ಹೋಗು, ಊಟಮಾಡಿ ಸಂತೋಷಪಡು; ದ್ರಾಕ್ಷಾರಸವನ್ನು ಕುಡಿದು ಉಲ್ಲಾಸಿಸು; ನಿನ್ನ ಈ ನಡತೆಯು ದೇವರಿಗೆ ಮೆಚ್ಚಿಕೆಯಾಗಿದೆ.


ನಮ್ಮನ್ನು ಸಂತೋಷಪಡಿಸುವ ದ್ರಾಕ್ಷಾರಸವನ್ನೂ ನಮ್ಮ ಚರ್ಮವನ್ನು ಮೃದುಗೊಳಿಸುವ ಎಣ್ಣೆಯನ್ನೂ ನಮ್ಮನ್ನು ಬಲಗೊಳಿಸುವ ಆಹಾರವನ್ನೂ ನಮಗೆ ದೇವರು ಕೊಡುತ್ತಾನೆ.


ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು.


ಮಧ್ಯಾಹ್ನದ ವೇಳೆಗೆ, ರಾಜನಾದ ಬೆನ್ಹದದನು ಮತ್ತು ಅವನ ಸಹಾಯಕ್ಕಾಗಿ ಬಂದಿದ್ದ ಮೂವತ್ತೆರಡು ಮಂದಿ ರಾಜರು, ಅವರ ಗುಡಾರಗಳಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದರು. ಆ ಸಮಯದಲ್ಲಿ ರಾಜನಾದ ಅಹಾಬನ ಆಕ್ರಮಣವು ಆರಂಭವಾಯಿತು.


ದಾವೀದನು ಆ ಪತ್ರದಲ್ಲಿ, “ಯುದ್ಧವು ಹೆಚ್ಚು ಭೀಕರವಾಗಿ ನಡೆಯುವ ಕಡೆ ಊರೀಯನನ್ನು ಮುಂದಿನ ಸಾಲಿನಲ್ಲಿ ನಿಲ್ಲಿಸು. ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡಿ. ಅವನು ಯುದ್ಧದಲ್ಲಿ ಕೊಲ್ಲಲ್ಪಡಲಿ” ಎಂದು ಬರೆದಿದ್ದನು.


ಆಗ ದಾವೀದನು ತನ್ನನ್ನು ಬಂದು ಕಾಣುವಂತೆ ಊರೀಯನಿಗೆ ಹೇಳಿ ಕಳುಹಿಸಿದನು; ಊರೀಯನು ದಾವೀದನೊಂದಿಗೆ ಕುಡಿದು ಊಟ ಮಾಡಿದನು. ದಾವೀದನು ಊರೀಯನನ್ನು ಮತ್ತನನ್ನಾಗಿ ಮಾಡಿದನು. ಆದರೂ ಊರೀಯನು ಮನೆಗೆ ಹೋಗಲಿಲ್ಲ. ಅಂದು ಸಂಜೆ ರಾಜನ ಮನೆಯ ಹೊರಬಾಗಿಲಿನಲ್ಲಿ ಸೇವಕರೊಂದಿಗೆ ಮಲಗಲು ಹೋದನು.


ರಾಜನು ಆ ಹೆಂಗಸಿಗೆ, “ಹೆದರದಿರು! ನಿನಗೇನು ಕಾಣಿಸುತ್ತಿದೆ?” ಎಂದು ಕೇಳಿದನು. ಆ ಹೆಂಗಸು, “ಒಂದು ಆತ್ಮವು ಭೂಮಿಯೊಳಗಿಂದ ಮೇಲಕ್ಕೆ ಬರುತ್ತಿರುವುದು ನನಗೆ ಕಾಣುತ್ತಿದೆ” ಎಂದು ಉತ್ತರಕೊಟ್ಟಳು.


ಸೌಲನು ಯೆಹೋವನ ಹೆಸರಿನಲ್ಲಿ ಆ ಬೇತಾಳಿಕಳಿಗೆ ವಾಗ್ದಾನಮಾಡಿ, “ಯೆಹೋವನಾಣೆ, ಈ ಕಾರ್ಯವನ್ನು ಮಾಡಿದ್ದಕ್ಕಾಗಿ ನಿನಗೆ ದಂಡನೆಯಾಗುವುದಿಲ್ಲ” ಎಂದು ಹೇಳಿದನು.


ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಒಮ್ಮೆ ಅವನು ದ್ರಾಕ್ಷಾರಸವನ್ನು ಕುಡಿದು ಮತ್ತೇರಿದ್ದರಿಂದ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿಕೊಂಡನು.


ನೀನು ಅವನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಮತ್ತು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದ ಕತ್ತಿಯು ನಿನ್ನ ಕುಟುಂಬವನ್ನು ಸದಾ ಹಿಡಿದಿರುವುದು.’


ಅಬ್ಷಾಲೋಮನು ದಾವೀದನನ್ನು ಬಹಳವಾಗಿ ಬೇಡಿಕೊಂಡನು. ಕೊನೆಗೆ ದಾವೀದನು ಅಮ್ನೋನನನ್ನು ಮತ್ತು ರಾಜನ ಗಂಡುಮಕ್ಕಳೆಲ್ಲರನ್ನು ಅಬ್ಷಾಲೋಮನ ಜೊತೆಯಲ್ಲಿ ಹೋಗಲು ಹೇಳಿದನು.


ಈಜಿಪ್ಟಿನ ರಾಜನು ದಾದಿಯರನ್ನು ಕರೆದು, “ನೀವು ಹೀಗೇಕೆ ಮಾಡುತ್ತಿದ್ದೀರಿ? ಗಂಡುಮಕ್ಕಳನ್ನು ನೀವು ಉಳಿಸುತ್ತಿರುವುದೇಕೆ?” ಎಂದು ಕೇಳಿದನು.


ಸೌಲನು ತನ್ನ ಅಧಿಕಾರಿಗಳಿಗೆ ಅಪ್ಪಣೆ ಮಾಡಿದನು. ಸೌಲನು ಅವರಿಗೆ, “ದಾವೀದನೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ‘ರಾಜನು ನಿನ್ನನ್ನು ಇಷ್ಟಪಟ್ಟಿದ್ದಾನೆ. ಅವನ ಅಧಿಕಾರಿಗಳೂ ನಿನ್ನನ್ನು ಇಷ್ಟಪಡುತ್ತಾರೆ. ನೀನು ಅವನ ಮಗಳನ್ನು ಮದುವೆಯಾಗಬೇಕು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು.


ನನಗೆ ಇಬ್ಬರು ಗಂಡುಮಕ್ಕಳಿದ್ದರು. ಈ ಇಬ್ಬರು ಗಂಡುಮಕ್ಕಳು ಜಗಳಮಾಡುತ್ತಾ ಹೊರಗೆ ಮೈದಾನದಲ್ಲಿದ್ದರು. ಅವರನ್ನು ತಡೆಯುವ ಬೇರೊಬ್ಬನು ಅಲ್ಲಿರಲಿಲ. ಒಬ್ಬ ಮಗನು ಮತ್ತೊಬ್ಬನನ್ನು ಕೊಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು