2 ಸಮುಯೇಲ 13:29 - ಪರಿಶುದ್ದ ಬೈಬಲ್29 ಅಬ್ಷಾಲೋಮನ ಸೇವಕರು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದುಬಿಟ್ಟರು. ಆದರೆ ದಾವೀದನ ಇತರ ಗಂಡುಮಕ್ಕಳೆಲ್ಲರೂ ತಮ್ಮತಮ್ಮ ಹೇಸರಕತ್ತೆಗಳನ್ನೇರಿ ತಪ್ಪಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮತಮ್ಮ ಹೇಸರಕತ್ತೆಗಳನ್ನು ಹತ್ತಿ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅಬ್ಷಾಲೋಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆಲ್ಲರೂ ಎದ್ದು, ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು. ಅಧ್ಯಾಯವನ್ನು ನೋಡಿ |
ಅಬ್ಷಾಲೋಮನು ದಾವೀದನ ಸೈನಿಕರ ಕೈಗೆ ಸಿಕ್ಕಿಕೊಂಡನು. ಅವನು ಹೇಸರಕತ್ತೆಯ ಮೇಲೆ ಸವಾರಿ ಮಾಡುತ್ತಾ ತಪ್ಪಿಸಿಕೊಳ್ಳಲು ಹೋದನು. ಆ ಹೇಸರಕತ್ತೆಯು ದೊಡ್ಡ ಓಕ್ ಮರದ ರೆಂಬೆಗಳ ಕೆಳಗೆ ಓಡುತ್ತಾ ಹೋಯಿತು. ಆ ರೆಂಬೆಗಳು ದಟ್ಟವಾಗಿದ್ದುದರಿಂದ ಅಬ್ಷಾಲೋಮನ ತಲೆಯು ಮರದಲ್ಲಿ ಸಿಕ್ಕಿಹಾಕಿಕೊಂಡಿತು. ಅವನು ಕುಳಿತುಕೊಂಡಿದ್ದ ಹೇಸರಕತ್ತೆಯು ಓಡಿಹೋದುದರಿಂದ ಅಬ್ಷಾಲೋಮನು ಮರದಲ್ಲಿ ನೇತಾಡುವವನಾದನು.