2 ಸಮುಯೇಲ 13:3 - ಪರಿಶುದ್ದ ಬೈಬಲ್3 ಅಮ್ನೋನನಿಗೆ ಶಿಮ್ಮನ ಮಗನಾದ ಯೋನಾದಾಬನೆಂಬ ಹೆಸರಿನ ಗೆಳೆಯನಿದ್ದನು. (ಶಿಮ್ಮನು ದಾವೀದನ ಸೋದರ.) ಯೋನಾದಾಬನು ಬಹಳ ಯುಕ್ತಿಯುಳ್ಳ ಮನುಷ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗ ಹಾಗು ಬಹು ಯುಕ್ತಿವಂತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮೆಯನ ಮಗ ಯೊನಾದಾಬನೆಂಬ ಹೆಸರುಳ್ಳ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಬಹು ಕುಯುಕ್ತಿಯುಳ್ಳವನಾಗಿದ್ದನು. ಅಧ್ಯಾಯವನ್ನು ನೋಡಿ |
ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೆಷಳೂ ಮತ್ತು ಅವನ ಮಿತ್ರವೃಂದದವರೂ ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲುಮರವನ್ನು ನೆಡಿಸು. ಅದು ಎಪ್ಪತ್ತೈದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೈಯನ್ನು ಗಲ್ಲಿಗೇರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷಪಡು.” ಇದನ್ನು ಕೇಳಿ ಹಾಮಾನನು ಸಂತೋಷಗೊಂಡನು. ಕೂಡಲೇ ಸೇವಕನನ್ನು ಕರೆಸಿ ಗಲ್ಲುಮರವನ್ನು ಸಿದ್ಧಮಾಡಲು ಆಜ್ಞಾಪಿಸಿದನು.
ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು.