Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:34 - ಪರಿಶುದ್ದ ಬೈಬಲ್‌

34 ಅಬ್ಷಾಲೋಮನು ಓಡಿಹೋದನು. ಆ ನಗರದ ಗೋಡೆಯ ಮೇಲೆ ಒಬ್ಬ ಕಾವಲುಗಾರನು ನಿಂತಿದ್ದನು. ಬೆಟ್ಟದ ಬೇರೊಂದು ಕಡೆಯಿಂದ ಅಂದರೆ ಹೋರೋನಿನ ಮಾರ್ಗವಾಗಿ ಅನೇಕ ಜನರು ಬರುತ್ತಿರುವುದನ್ನು ಅವನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅಬ್ಷಾಲೋಮನು ತಪ್ಪಿಸಿಕೊಂಡು ಓಡಿಹೋದನು. ಅಷ್ಟರಲ್ಲಿ ದಾರಿನೋಡುತ್ತಿದ್ದ ಕಾವಲುಗಾರನು, ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 (ಅಬ್ಷಾಲೋಮನು ತಲೆ ತಪ್ಪಿಸಿಕೊಂಡನು.) ಅಷ್ಟರಲ್ಲಿ ದಾರಿ ನೋಡುತ್ತಿದ್ದ ಕಾವಲುಗಾರನು ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದುಬರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 (ಅಬ್ಷಾಲೋಮನು ತಪ್ಪಿಸಿಕೊಂಡನು.) ಅಷ್ಟರಲ್ಲಿ ದಾರಿ ನೋಡುತ್ತಿದ್ದ ಕಾವಲುಗಾರನು ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅಬ್ಷಾಲೋಮನು ಓಡಿಹೋದನು. ಆಗ ಕಾವಲುಗಾರನು ಕಣ್ಣೆತ್ತಿ ನೋಡುವಾಗ, ಅವನ ಹಿಂಭಾಗದಲ್ಲಿ ಬೆಟ್ಟದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು. ಕಾವಲುಗಾರನು ಹೋಗಿ ಅರಸನಿಗೆ, “ನಾನು ಬೆಟ್ಟದ ಬದಿಯಲ್ಲಿರುವ ಹೋರೋನೈಮ್ ದಿಕ್ಕಿನಲ್ಲಿ ಮನುಷ್ಯರನ್ನು ಕಂಡೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:34
6 ತಿಳಿವುಗಳ ಹೋಲಿಕೆ  

ಆಗ ನೀವು ಸಿಂಹದ ಬಾಯಿಂದ ತಪ್ಪಿಸಿಕೊಂಡು ಕರಡಿಯ ಬಾಯಿಗೆ ಬೀಳುವ ಮನುಷ್ಯನಂತಿರುವಿರಿ. ಆಗ ನೀವು ನಿಮ್ಮ ಮನೆಯ ಆಶ್ರಯಕ್ಕೆ ಓಡಿಹೋಗಿ ಗೋಡೆಗೆ ಒರಗಿ ನಿಂತಾಗ ಒಂದು ಹಾವಿನಿಂದ ಕಚ್ಚಿಸಿಕೊಂಡವರಂತೆ ಇರುವಿರಿ.


ಕೊಲೆಮಾಡಿದ ಅಪರಾಧಿಯು ತನ್ನ ಸಮಾಧಿಗೆ ಓಡಿಹೋಗಲಿ. ಅವನಿಗೆ ಸಹಾಯಮಾಡಬೇಡ.


ಯೋನಾದಾಬನು ರಾಜನಾದ ದಾವೀದನಿಗೆ, “ನಾನು ಹೇಳಿದ್ದು ಸರಿ. ಅಲ್ಲಿ ನೋಡು, ರಾಜನ ಗಂಡುಮಕ್ಕಳೆಲ್ಲರೂ ಬರುತ್ತಿದ್ದಾರೆ” ಎಂದನು.


ದಾವೀದನು ನಗರದ ಎರಡು ಬಾಗಿಲುಗಳ ನಡುವೆ ಕುಳಿತಿದ್ದನು. ಕಾವಲುಗಾರನು ಊರಬಾಗಿಲುಗಳ ಮಾಳಿಗೆಯ ಮೇಲಕ್ಕೆ ಹೋದನು. ಕಾವಲುಗಾರನು ದೃಷ್ಟಿಸಿ ನೋಡಿದಾಗ, ಒಬ್ಬ ಮನುಷ್ಯನು ಒಬ್ಬಂಟಿಗನಾಗಿ ಓಡಿಬರುತ್ತಿರುವುದನ್ನು ನೋಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು