36 ಯೋನಾದಾಬನು ಈ ಮಾತುಗಳನ್ನು ಹೇಳಿ ಮುಗಿಸುವಷ್ಟರಲ್ಲಿ ರಾಜನ ಗಂಡುಮಕ್ಕಳೆಲ್ಲರೂ ಬಂದರು. ಅವರು ಗಟ್ಟಿಯಾಗಿ ಅಳುತ್ತಿದ್ದರು. ದಾವೀದನು ಮತ್ತು ಅವನ ಸೇವಕರೆಲ್ಲ ಅಳರಾಂಭಿಸಿದರು. ಅವರೆಲ್ಲರೂ ಮತ್ತಷ್ಟು ಜೋರಾಗಿ ಗೋಳಾಡಿದರು.
ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.
ಅನಂತರ ಅಮ್ನೋನನು ತಾಮಾರಳನ್ನು ದ್ವೇಷಿಸಿದನು. ಅಮ್ನೋನನು ತಾನು ಅವಳನ್ನು ಮೊದಲು ಮೋಹಿಸಿದುದಕ್ಕಿಂತ ಹೆಚ್ಚಾಗಿ ದ್ವೇಷಿಸಿದನು. ಅಮ್ನೋನನು ತಾಮಾರಳಿಗೆ, “ಮೇಲೇಳು, ಹೊರಟುಹೋಗು!” ಎಂದನು.
ದಾವೀದನ ಸೇವಕರು ಅವನಿಗೆ, “ನೀನು ಹೀಗೇಕೆ ಮಾಡುತ್ತಿರುವೆ? ಮಗುವು ಇನ್ನೂ ಜೀವಂತವಾಗಿದ್ದಾಗ ನೀನು ಊಟಮಾಡಲಿಲ್ಲ. ನೀನು ಗೋಳಾಡಿದೆ, ಆದರೆ ಮಗುವು ಸತ್ತಮೇಲೆ ನೀನು ಮೇಲಕ್ಕೆದ್ದು ಊಟ ಮಾಡಿದೆ?” ಎಂದು ಕೇಳಿದರು.