Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:38 - ಪರಿಶುದ್ದ ಬೈಬಲ್‌

38 ಅಬ್ಷಾಲೋಮನು ಗೆಷೂರಿಗೆ ಓಡಿಹೋದ ನಂತರ, ಅಲ್ಲಿ ಅವನು ಮೂರು ವರ್ಷಗಳ ಕಾಲ ನೆಲೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ತಲ್ಮೈಯ ಬಳಿಯಲ್ಲಿ ಮೂರು ವರುಷ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿಹೋಗಿ ಅಲ್ಲಿ ಮೂರು ವರ್ಷ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:38
6 ತಿಳಿವುಗಳ ಹೋಲಿಕೆ  

ನಾನು ಅರಾಮಿನ ಗೆಷೂರಿನಲ್ಲಿ ನೆಲೆಸಿದ್ದಾಗ, ‘ಯೆಹೋವನು ನನ್ನನ್ನು ಜೆರುಸಲೇಮಿಗೆ ಮತ್ತೆ ಕರೆಸಿಕೊಂಡರೆ, ನಾನು ಯೆಹೋವನ ಆರಾಧನೆ ಮಾಡುತ್ತೇನೆ, ಎಂಬ ವಿಶೇಷ ಪ್ರಮಾಣವನ್ನು ಮಾಡಿದ್ದೆನು’” ಎಂದನು.


ಅಬ್ಷಾಲೋಮನು ಯೋವಾಬನಿಗೆ, “ನಾನು ನಿನಗೆ ಸಂದೇಶವನ್ನು ಕಳುಹಿಸಿ ಇಲ್ಲಿಗೆ ಬರಲು ಹೇಳಿ ಕಳುಹಿಸಿದ್ದೆನು. ರಾಜನ ಬಳಿಗೆ ನಿನ್ನನ್ನು ಕಳುಹಿಸಲು ನಾನು ಅಪೇಕ್ಷಿಸಿದೆನು. ಗೆಷೂರಿನಿಂದ ನನ್ನನ್ನು ಮನೆಗೆ ಕರೆಸಲು ಅವನು ಇಚ್ಛಿಸಿದ್ದು ಏಕೆ ಎಂಬುದನ್ನು ನೀನು ಕೇಳಬೇಕೆಂದು ನಾನು ಅಪೇಕ್ಷಿಸಿದೆನು. ನಾನು ಅವನನ್ನು ನೋಡಲಾಗದಿದ್ದರೆ ಗೆಷೂರಿನಲ್ಲಿ ವಾಸಿಸುವುದೇ ನನಗೆ ಚೆನ್ನಾಗಿರುತ್ತಿತ್ತು. ಈಗ ರಾಜನನ್ನು ನೋಡಲು ನನಗೆ ಅವಕಾಶವನ್ನು ಕೊಡು. ನಾನು ಪಾಪವನ್ನು ಮಾಡಿದ್ದರೆ ಅವನು ನನ್ನನ್ನು ಕೊಂದುಬಿಡಲಿ!” ಎಂದನು.


ನಂತರ ಯೋವಾಬನು ಮೇಲೆದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಜೆರುಸಲೇಮಿಗೆ ಕರೆದುತಂದನು.


ಅಬ್ಷಾಲೋಮನು ಓಡಿಹೋದನು. ಆ ನಗರದ ಗೋಡೆಯ ಮೇಲೆ ಒಬ್ಬ ಕಾವಲುಗಾರನು ನಿಂತಿದ್ದನು. ಬೆಟ್ಟದ ಬೇರೊಂದು ಕಡೆಯಿಂದ ಅಂದರೆ ಹೋರೋನಿನ ಮಾರ್ಗವಾಗಿ ಅನೇಕ ಜನರು ಬರುತ್ತಿರುವುದನ್ನು ಅವನು ನೋಡಿದನು.


ಆಗ ಆ ಸ್ತ್ರೀಯು, “ದೇವರ ಜನರ ವಿರುದ್ಧವಾಗಿ ನೀನು ಈ ಕಾರ್ಯಗಳನ್ನು ಮಾಡಲು ಯೋಚಿಸಿರುವುದಾದರೂ ಏಕೆ? ಹೌದು, ನೀನು ಕೊಟ್ಟ ತೀರ್ಪಿನ ಮೂಲಕ ನೀನು ನನ್ನನ್ನು ತಪ್ಪಿತಸ್ಥನೆಂದು ತೋರಿಸಿ ಕೊಟ್ಟಿರುವೆ. ಏಕೆಂದರೆ ನೀನು ಬಲಾತ್ಕಾರದಿಂದ ಮನೆ ಬಿಡಿಸಿದ ಮಗನನ್ನು ಮನೆಗೆ ಕರೆದು ತಂದಿಲ್ಲ.


ಕಿಲಾಬನು ಎರಡನೆಯ ಮಗ. ಕರ್ಮೆಲ್ಯನಾದ ನಾಬಾಲನ ವಿಧವೆಯಾದ ಅಬೀಗೈಲಳು ಕಿಲಾಬನ ತಾಯಿ. ಅಬ್ಷಾಲೋಮನು ಮೂರನೆಯ ಮಗ. ಗೆಷೂರಿನ ರಾಜ ತಲ್ಮೈನ ಮಗಳಾದ ಮಾಕಳು ಅಬ್ಷಾಲೋಮನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು