Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:4 - ಪರಿಶುದ್ದ ಬೈಬಲ್‌

4 ಯೋನಾದಾಬನು ಅಮ್ನೋನನಿಗೆ, “ದಿನದಿಂದ ದಿನಕ್ಕೆ ನೀನು ತೆಳ್ಳಗಾಗುತ್ತಲೇ ಇರುವೆ. ನೀನು ರಾಜನ ಮಗ, ನಿನ್ನ ಬಳಿ ತಿನ್ನಲು ಬಹಳ ಇದ್ದರೂ ನೀನು ತೆಳ್ಳಗಾಗುತ್ತಿರುವುದು ಏಕೆ? ನನಗೆ ತಿಳಿಸು” ಎಂದು ಕೇಳಿದನು. ಅಮ್ನೋನನು ಯೋನಾದಾಬನಿಗೆ, “ನಾನು ತಾಮಾರಳನ್ನು ಮೋಹಿಸಿದ್ದೇನೆ. ಆದರೆ ಅವಳು ನನ್ನ ಸೋದರನಾದ ಅಬ್ಷಾಲೋಮನ ತಂಗಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬಹು ಯುಕ್ತಿವಂತನಾದ ಇವನು ಒಂದು ದಿನ ಅಮ್ನೋನನನ್ನು, “ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಲು ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹ ಉಂಟಾಗಿದೆ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನು ಒಂದು ದಿನ ಅಮ್ನೋನನನ್ನು, “ರಾಜಪುತ್ರರೇ, ನೀವು ದಿನೇದಿನೇ ಕ್ಷೀಣವಾಗುತ್ತಾ ಬರುವುದೇಕೆ? ನನಗೆ ತಿಳಿಸಬಾರದೇ?,” ಎಂದು ಕೇಳಿದನು. ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹವುಂಟಾಗಿದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬಹು ಯುಕ್ತಿವಂತನಾದ ಇವನು ಒಂದು ದಿವಸ ಅಮ್ನೋನನನ್ನು - ರಾಜಪುತ್ರನೇ, ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವದೇಕೆ? ನನಗೆ ತಿಳಿಸುವದಿಲ್ಲವೋ ಎಂದು ಕೇಳಲು ಅವನು - ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹವುಂಟಾಗಿದೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೋನಾದಾಬನು ಅಮ್ನೋನನಿಗೆ, “ಅರಸನ ಮಗನಾದ ನೀನು ದಿನದಿನಕ್ಕೆ ಏಕೆ ಕ್ಷೀಣವಾಗಿ ಹೋಗುತ್ತೀ? ನನಗೆ ತಿಳಿಸುವುದಿಲ್ಲವೋ?” ಎಂದನು. ಅದಕ್ಕೆ ಅಮ್ನೋನನು ಅವನಿಗೆ, “ನಾನು ನನ್ನ ಸಹೋದರನಾಗಿರುವ ಅಬ್ಷಾಲೋಮನ ಸಹೋದರಿ ತಾಮಾರಳನ್ನು ಪ್ರೀತಿಮಾಡುತ್ತಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:4
11 ತಿಳಿವುಗಳ ಹೋಲಿಕೆ  

“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.


ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಾರೆ. “ಪ್ರಮುಖ ನಾಯಕರು” ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.


ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’” ಯೆಹೋವನ ನುಡಿಗಳಿವು.


ಜನರ ಮುಖಭಾವವೇ ಅವರ ದುಷ್ಕೃತ್ಯಗಳನ್ನು ಎತ್ತಿತೋರಿಸುವವು. ಅವರು ತಮ್ಮ ಪಾಪಗಳಿಗಾಗಿ ಹೆಚ್ಚಳಪಡುವರು. ಅವರು ಸೊದೋಮಿನ ಜನರಂತಿದ್ದಾರೆ. ತಮ್ಮ ಪಾಪಗಳನ್ನು ಯಾರು ನೋಡಿದರೂ ಅವರಿಗೆ ಚಿಂತೆಯಿಲ್ಲ. ಇದು ನಿಜವಾಗಿಯೂ ಭಯಂಕರವಾದದ್ದು. ಅವರು ತಮಗೆ ಬಹಳ ಸಂಕಟಗಳನ್ನು ಬರಮಾಡಿಕೊಂಡಿದ್ದಾರೆ.


“ಒಬ್ಬನು ತನ್ನ ಸಹೋದರಿಯನ್ನಾಗಲಿ ತನ್ನ ತಂದೆಯ ಅಥವಾ ತಾಯಿಯ ಮಗಳನ್ನಾಗಲಿ ಮದುವೆಯಾಗಿ ಲೈಂಗಿಕ ಸಂಬಂಧ ಬೆಳೆಸಿದರೆ, ಅದು ಅವಮಾನಕರವಾದ ಕಾರ್ಯವಾಗಿದೆ! ಅವರಿಗೆ ಬಹಿರಂಗವಾಗಿ ಶಿಕ್ಷೆಯಾಗಬೇಕು. ಅವರನ್ನು ಅವರ ಕುಲದಿಂದ ತೆಗೆದುಹಾಕಬೇಕು. ತನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಿದ ಪುರುಷನಿಗೆ ಅವನು ಮಾಡಿದ ಪಾಪಕ್ಕಾಗಿ ಶಿಕ್ಷೆಯಾಗಬೇಕು.


“ಸಹೋದರಿಯೊಂದಿಗೆ, ಅಂದರೆ ನಿಮ್ಮ ತಂದೆ ಅಥವಾ ತಾಯಿಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ನಿಮ್ಮ ಸಹೋದರಿಯು ನಿಮ್ಮ ಮನೆಯಲ್ಲಾಗಲಿ ಅಥವಾ ಇನ್ನೊಂದು ಸ್ಥಳದಲ್ಲಾಗಲಿ ಹುಟ್ಟಿದರೂ ಆಕೆಯೊಡನೆ ಲೈಂಗಿಕ ಸಂಬಂಧ ಮಾಡಬಾರದು.


ಈಜೆಬೆಲಳು, “ನೀನು ಇಸ್ರೇಲಿಗೆಲ್ಲ ರಾಜ! ನಿನ್ನ ಹಾಸಿಗೆಯಿಂದ ಎದ್ದು ಬಾ. ನೀನು ಸ್ವಲ್ಪ ಊಟಮಾಡಿ, ಸಂತೋಷದಿಂದಿರು. ನಾನು ನಿನಗೆ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು.


ಅಮ್ನೋನನಿಗೆ ಶಿಮ್ಮನ ಮಗನಾದ ಯೋನಾದಾಬನೆಂಬ ಹೆಸರಿನ ಗೆಳೆಯನಿದ್ದನು. (ಶಿಮ್ಮನು ದಾವೀದನ ಸೋದರ.) ಯೋನಾದಾಬನು ಬಹಳ ಯುಕ್ತಿಯುಳ್ಳ ಮನುಷ್ಯ.


ಯೋನಾದಾಬನು ಅಮ್ನೋನನಿಗೆ, “ನೀನು ಹೋಗಿ ಹಾಸಿಗೆಯಲ್ಲಿ ಮಲಗಿಕೋ. ನೀನು ಕಾಯಿಲೆಯವನಂತೆ ನಟಿಸು. ಆಗ ನಿನ್ನನ್ನು ನೋಡಲು ನಿನ್ನ ತಂದೆಯು ಬರುತ್ತಾನೆ. ಆಗ ನೀನು ಅವನಿಗೆ, ‘ದಯವಿಟ್ಟು ನನ್ನ ಸೋದರಿಯಾದ ತಾಮಾರಳು ಇಲ್ಲಿಗೆ ಬಂದು, ನನಗೆ ಊಟವನ್ನು ಕೊಡಲಿ. ಅವಳು ನನ್ನ ಎದುರಿನಲ್ಲೇ ಅಡಿಗೆಯನ್ನು ಮಾಡಲಿ. ನಾನು ಅದನ್ನು ಕಣ್ಣಾರೆ ಕಂಡು ಅವಳ ಕೈಗಳಿಂದ ಊಟಮಾಡುತ್ತೇನೆ’ ಎಂದು ಹೇಳು” ಎಂಬುದಾಗಿ ಹೇಳಿಕೊಟ್ಟನು.


ಅಹಾಬನ ಪತ್ನಿಯಾದ ಈಜೆಬೆಲಳು ಅವನ ಹತ್ತಿರ ಹೋದಳು. ಈಜೆಬೆಲಳು, “ನೀನೇಕೆ ತಳಮಳಗೊಂಡಿರುವೆ? ನೀನು ಏಕೆ ಊಟಮಾಡಲಿಲ್ಲ?” ಎಂದು ಅವನನ್ನು ಕೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು