Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:6 - ಪರಿಶುದ್ದ ಬೈಬಲ್‌

6 ಅಮ್ನೋನನು ಹಾಸಿಗೆಯಲ್ಲಿ ಮಲಗಿ ಕಾಯಿಲೆಯವನಂತೆ ನಟಿಸಿದನು. ಅವನನ್ನು ನೋಡಲು ರಾಜನಾದ ದಾವೀದನು ಅಲ್ಲಿಗೆ ಬಂದನು. ಅಮ್ನೋನನು ರಾಜನಾದ ದಾವೀದನಿಗೆ, “ದಯವಿಟ್ಟು ನನ್ನ ಸೋದರಿಯಾದ ತಾಮಾರಳನ್ನು ಒಳಕ್ಕೆ ಕರೆಯಿರಿ. ನಾನು ನೋಡುತ್ತಿರುವಂತೆ ಅವಳು ನನಗಾಗಿ ಎರಡು ಸಿಹಿ ರೊಟ್ಟಿಗಳನ್ನು ತಯಾರಿಸಲಿ. ಅವಳ ಕೈಗಳಿಂದ ಮಾಡಿದ ರೊಟ್ಟಿಗಳನ್ನೇ ನಾನು ತಿನ್ನುತ್ತೇನೆ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಮ್ನೋನನು ಅಸ್ವಸ್ಥನಾದವನಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, “ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನ್ನ ಬಳಿಗೆ ಕಳುಹಿಸು. ಆಕೆ ನನಗೋಸ್ಕರ ನನ್ನ ಕಣ್ಣ ಮುಂದೆಯೇ ಆಹಾರವನ್ನು ಸಿದ್ಧಮಾಡಿಕೊಡುವುದಾದರೆ ಊಟಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಮ್ನೋನನು ಅಸ್ವಸ್ಥನಾದವನೋ ಎಂಬಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, “ದಯವಿಟ್ಟು ನನ್ನ ತಂಗಿ ತಾಮಾರಳನ್ನು ನನ್ನ ಬಳಿಗೆ ಕಳುಹಿಸಿ; ಆಕೆ ನನ್ನ ಕಣ್ಮುಂದೆಯೇ ಒಂದೆರಡು ಭಕ್ಷ್ಯಗಳನ್ನು ಮಾಡಿಕೊಡುವುದಾದರೆ ಊಟಮಾಡುತ್ತೇನೆ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಮ್ನೋನನು ಅಸ್ವಸ್ಥವಾದವನೋ ಎಂಬಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವದಕ್ಕೆ ಬಂದಾಗ ಅವನು ಅರಸನಿಗೆ - ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನ್ನ ಬಳಿಗೆ ಕಳುಹಿಸು; ಆಕೆ ನನ್ನ ಕಣ್ಣುಮುಂದೆಯೇ ಎರಡು ಭಕ್ಷ್ಯಗಳನ್ನು ಮಾಡಿಕೊಡುವದಾದರೆ ಊಟಮಾಡೇನು ಎಂದು ಬೇಡಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಮ್ನೋನನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿಕೊಂಡನು. ಅರಸನು ತನ್ನನ್ನು ನೋಡುವುದಕ್ಕೆ ಬಂದಾಗ ಅಮ್ನೋನನು ಅರಸನಿಗೆ, “ನೀವು ನನ್ನ ಸಹೋದರಿ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣು ಮುಂದೆ ಎರಡು ಭಕ್ಷ್ಯಗಳನ್ನು ಮಾಡುವುದಕ್ಕೆ ಬರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:6
4 ತಿಳಿವುಗಳ ಹೋಲಿಕೆ  

ಅಬ್ರಹಾಮನು ಗುಡಾರಕ್ಕೆ ಬೇಗನೆ ಹೋಗಿ ಸಾರಳಿಗೆ, “ಮೂರು ದೊಡ್ಡ ರೊಟ್ಟಿಗಳಿಗೆ ಬೇಕಾಗುವಷ್ಟು ಗೋಧಿ ಹಿಟ್ಟನ್ನು ಬೇಗನೆ ನಾದು” ಎಂದು ಹೇಳಿದನು.


ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.”


ಯೋನಾದಾಬನು ಅಮ್ನೋನನಿಗೆ, “ನೀನು ಹೋಗಿ ಹಾಸಿಗೆಯಲ್ಲಿ ಮಲಗಿಕೋ. ನೀನು ಕಾಯಿಲೆಯವನಂತೆ ನಟಿಸು. ಆಗ ನಿನ್ನನ್ನು ನೋಡಲು ನಿನ್ನ ತಂದೆಯು ಬರುತ್ತಾನೆ. ಆಗ ನೀನು ಅವನಿಗೆ, ‘ದಯವಿಟ್ಟು ನನ್ನ ಸೋದರಿಯಾದ ತಾಮಾರಳು ಇಲ್ಲಿಗೆ ಬಂದು, ನನಗೆ ಊಟವನ್ನು ಕೊಡಲಿ. ಅವಳು ನನ್ನ ಎದುರಿನಲ್ಲೇ ಅಡಿಗೆಯನ್ನು ಮಾಡಲಿ. ನಾನು ಅದನ್ನು ಕಣ್ಣಾರೆ ಕಂಡು ಅವಳ ಕೈಗಳಿಂದ ಊಟಮಾಡುತ್ತೇನೆ’ ಎಂದು ಹೇಳು” ಎಂಬುದಾಗಿ ಹೇಳಿಕೊಟ್ಟನು.


ದಾವೀದನು ತಾಮಾರಳ ಮನೆಗೆ ಸಂದೇಶಕರನ್ನು ಕಳುಹಿಸಿದನು. ಸಂದೇಶಕರು ತಾಮಾರಳಿಗೆ, “ನಿನ್ನ ಸೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಸ್ವಲ್ಪ ಊಟವನ್ನು ತಯಾರಿಸು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು