2 ಸಮುಯೇಲ 13:9 - ಪರಿಶುದ್ದ ಬೈಬಲ್9 ತಾಮಾರಳು ರೊಟ್ಟಿಗಳನ್ನು, ರೊಟ್ಟಿಮಾಡುವ ಪಾತ್ರೆಯಿಂದ ಹೊರ ತೆಗೆದು ಅಮ್ನೋನನಿಗೋಸ್ಕರ ಅವುಗಳನ್ನು ಬಡಿಸಿದಳು. ಆದರೆ ಅಮ್ನೋನನು ತಿನ್ನಲಿಲ್ಲ. ಅಮ್ನೋನನು ತನ್ನ ಸೇವಕರೆಲ್ಲರಿಗೆ, “ನೀವೆಲ್ಲರೂ ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟು ಹೋಗಿ!” ಎಂದನು. ಆದ್ದರಿಂದ ಸೇವಕರೆಲ್ಲರೂ ಅಮ್ನೋನನ ಕೊಠಡಿಯಿಂದ ಹೊರಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅನಂತರ ಆಕೆಯು ಅವುಗಳನ್ನು ಪಾತ್ರೆಯಿಂದ ತೆಗೆದು, ಅವನ ಮುಂದೆ ಇಟ್ಟಳು. ಅವನು ಊಟಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅನಂತರ ಆಕೆ ಅವುಗಳನ್ನು ಬಾಣಲಿಯಿಂದ ತೆಗೆದು ಅವನ ಮುಂದಿಟ್ಟಳು. ಅವನು ಊಟಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅನಂತರ ಆಕೆ ಅವುಗಳನ್ನು ಬಾಂಡ್ಲದಿಂದ ತೆಗೆದು ಅವನ ಮುಂದಿಟ್ಟಳು. ಅವನು ಊಟ ಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಪಾತ್ರೆ ತೆಗೆದುಕೊಂಡು ಅವನ ಮುಂದೆ ಇಟ್ಟಳು. ಆದರೆ ಅಮ್ನೋನನು, “ನಾನು ಉಣ್ಣುವುದಿಲ್ಲ,” ಎಂದು ಹೇಳಿ, “ನನ್ನ ಬಳಿಯಿಂದ ಎಲ್ಲಾ ಮನುಷ್ಯರನ್ನು ಕಳುಹಿಸಿಬಿಡಿರಿ,” ಎಂದನು. ಹಾಗೆಯೇ ಎಲ್ಲರು ಅವನನ್ನು ಬಿಟ್ಟುಹೋದರು. ಅಧ್ಯಾಯವನ್ನು ನೋಡಿ |