2 ಸಮುಯೇಲ 14:1 - ಪರಿಶುದ್ದ ಬೈಬಲ್1 ರಾಜನಾದ ದಾವೀದನಿಗೆ ಅಬ್ಷಾಲೋಮನ ಅಗಲಿಕೆಯಿಂದಾದ ಯಾತನೆಯು ಚೆರೂಯಳ ಮಗನಾದ ಯೋವಾಬನಿಗೆ ತಿಳಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದು ಚೆರೂಯಳ ಮಗನಾದ ಯೋವಾಬನಿಗೆ ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ದಾವೀದನ ಹೃದಯವು ಅಬ್ಷಾಲೋಮನ ಕಡೆಗೆ ಇರುವುದನ್ನು ಚೆರೂಯಳ ಮಗ ಯೋವಾಬನಿಗೆ ತಿಳಿಯಿತು. ಅಧ್ಯಾಯವನ್ನು ನೋಡಿ |
ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.
ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು.