11 ಆ ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಈ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.
11 ಆಗ ಆ ಸ್ತ್ರೀಯು, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ನಾಶಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬುದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು” ಎಂದು ಬೇಡಿಕೊಂಡಳು. ಅದಕ್ಕೆ ಅರಸನು, “ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ” ಎಂದು ಹೇಳಿದನು.
11 ಆಗ ಆ ಸ್ತ್ರೀ, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ಹಾಳುಮಾಡದಂತೆ ಅರಸರು ತಾವಾಗಿ ನೋಡಿಕೊಳ್ಳುವರೆಂಬುದಾಗಿ ನನ್ನ ದೇವರಾದ ಸರ್ವೇಶ್ವರನ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಬೇಕು,” ಎಂದು ಬೇಡಿಕೊಂಡಳು. ಅದಕ್ಕೆ ದಾವೀದನು, “ಸರ್ವೇಶ್ವರನಾಣೆ, ನಿನ್ನ ಮಗನ ತಲೆಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳ್ಗೊಡುವುದಿಲ್ಲ,” ಎಂದು ಹೇಳಿದನು.
11 ಆಗ ಆ ಸ್ತ್ರೀಯು - ಸಮೀಪಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ಹಾಳುಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು ಎಂದು ಬೇಡಿಕೊಂಡಳು. ಅದಕ್ಕೆ ಅರಸನು - ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡುವದಿಲ್ಲ ಎಂದು ಹೇಳಿದನು.
11 ಆಕೆ, “ಹಾಗಾದರೆ ನನ್ನ ಮಗನು ಸಾಯದಂತೆ ನಾಶನಕ್ಕೆ ನಾಶನವನ್ನು ಕೂಡಿಸುವ ಸೇಡುತೀರಿಸುವವರನ್ನು ತಡೆಯಲು ಅರಸನು ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಲಿ,” ಎಂದಳು. ಅದಕ್ಕೆ ದಾವೀದನು, “ಯೆಹೋವ ದೇವರ ಜೀವದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ,” ಎಂದನು.
ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.
ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು.
ಆದ್ದರಿಂದ ಸೊಲೊಮೋನನು, “ಅದೋನೀಯನು ತಾನು ಒಳ್ಳೆಯ ಮನುಷ್ಯನೆಂದು ನಿರೂಪಿಸಿದರೆ ಅವನ ತಲೆಯ ಒಂದು ಕೂದಲಿಗೂ ತೊಂದರೆಯಾಗುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ಆದರೆ ಅವನೇನಾದರೂ ಕೇಡನ್ನು ಮಾಡಿದರೆ ಸಾಯುವನು” ಎಂದು ಹೇಳಿದನು.
ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”
ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವಿಬ್ಬರೂ ಗೆಳೆಯರಾಗಿರಲು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದೇವೆ. ನಮ್ಮಿಬ್ಬರಿಗೂ ನಮ್ಮ ಸಂತತಿಯವರಿಗೂ ಇರುವ ಸಂಬಂಧಕ್ಕೆ ಯೆಹೋವನೇ ಸಾಕ್ಷಿ ಎಂದು ಹೇಳಿದ್ದೇವೆ” ಎಂದನು.
ಆಮೇಲೆ ಲಾಬಾನನು “ನೀನು ನನ್ನ ಹೆಣ್ಣುಮಕ್ಕಳನ್ನು ನೋಯಿಸಿದರೆ, ದೇವರು ನಿನ್ನನ್ನು ದಂಡಿಸುವನು ಎಂಬುದನ್ನು ನೆನಪು ಮಾಡಿಕೊ. ನೀನು ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ, ದೇವರು ನಿನ್ನನ್ನು ನೋಡುತ್ತಿದ್ದಾನೆ ಎಂಬುದನ್ನು ನೆನಪು ಮಾಡಿಕೊ.