2 ಸಮುಯೇಲ 14:12 - ಪರಿಶುದ್ದ ಬೈಬಲ್12 ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ದಯವಿಟ್ಟು ನಾನು ನಿನಗೆ ಕೆಲವು ಮಾತುಗಳನ್ನು ಹೇಳಲು ಬಿಡು” ಎಂದಳು. “ಹೇಳು” ಎಂದು ರಾಜನು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಸ್ತ್ರೀಯು, “ನನ್ನ ಒಡೆಯನೇ, ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ” ಅನ್ನಲು ಅರಸನು, “ಹೇಳು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಗ ಆ ಸ್ತ್ರೀ, “ನನ್ನ ಒಡೆಯರಿಗೆ ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ,” ಎಂದಳು. ಅರಸನು, “ಹೇಳು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಗ ಸ್ತ್ರೀಯು - ನನ್ನ ಒಡೆಯನಿಗೆ ಇನ್ನೊಂದು ಮಾತನ್ನು ಹೇಳಿಕೊಳ್ಳುವದಕ್ಕೆ ಅಪ್ಪಣೆಯಾಗಲಿ ಅನ್ನಲು ಅರಸನು - ಹೇಳು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಆ ಸ್ತ್ರೀಯು, “ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವುದಕ್ಕೆ ಅಪ್ಪಣೆ ಆಗಬೇಕು,” ಎಂದಳು. ಆಗ ಅವನು, “ಹೇಳು,” ಎಂದನು. ಅಧ್ಯಾಯವನ್ನು ನೋಡಿ |
ಆ ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಈ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.