2 ಸಮುಯೇಲ 14:17 - ಪರಿಶುದ್ದ ಬೈಬಲ್17 ರಾಜನಾದ ನನ್ನ ಒಡೆಯನ ಮಾತುಗಳು ನನಗೆ ವಿಶ್ರಾಂತಿಯನ್ನು ಕೊಡುತ್ತವೆ ಎಂದು ನನಗೆ ತಿಳಿದಿರುವುದರಿಂದ ನಿನ್ನ ಬಳಿಗೆ ಬಂದಿರುವೆನು. ಏಕೆಂದರೆ ನೀನು ದೇವದೂತನಂತಿರುವೆ. ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂಬುದು ನಿನಗೆ ತಿಳಿದಿದೆ. ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿರುವನು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿದ್ದಾನೆ. ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನನ್ನ ಒಡೆಯರಾದ ಅರಸರ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿಮ್ಮ ದಾಸಿಯಾದ ನಾನು ಬಂದೆ. ನ್ಯಾಯ ಅನ್ಯಾಯಗಳನ್ನು ಕಂಡು ಹಿಡಿಯುವುದರಲ್ಲಿ ನನ್ನ ಒಡೆಯರಾದ ಅರಸರು ದೇವದೂತನಂತೆ ಇರುತ್ತೀರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇರಲಿ!” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿರುತ್ತಾನೆ; ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ನಿನ್ನ ದಾಸಿಯು, ‘ಅರಸನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ. ಏಕೆಂದರೆ ಒಳ್ಳೆಯದನ್ನೂ, ಕೆಟ್ಟದ್ದನ್ನೂ ಕೇಳುವುದಕ್ಕೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ ಮತ್ತು ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರಲಿ,’ ಎಂದಳು.” ಅಧ್ಯಾಯವನ್ನು ನೋಡಿ |