Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:18 - ಪರಿಶುದ್ದ ಬೈಬಲ್‌

18 ರಾಜನಾದ ದಾವೀದನು ಆ ಸ್ತ್ರೀಗೆ, “ನಾನು ಕೇಳುವ ಪ್ರಶ್ನೆಗೆ ನೀನು ಉತ್ತರವನ್ನು ಹೇಳಲೇಬೇಕು” ಎಂದು ಉತ್ತರಿಸಿದನು. ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ದಯವಿಟ್ಟು ನಿನ್ನ ಪ್ರಶ್ನೆಯನ್ನು ಕೇಳು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಅರಸನು ಆ ಸ್ತ್ರೀಗೆ, “ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ. ನೀನು ಅದನ್ನು ಮರೆಮಾಚದೆ ತಿಳಿಸಬೇಕು” ಎಂದನು. ಆಗ ಆಕೆಯು, “ಅರಸನ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಅರಸನು ಆ ಸ್ತ್ರೀಗೆ, “ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ; ನೀನು ಅದನ್ನು ಮರೆಮಾಡದೆ ತಿಳಿಸಬೇಕು,” ಎಂದು ಹೇಳಿದನು. ಆಕೆ, “ಅರಸರ ಅಪ್ಪಣೆಯಾಗಲಿ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಅರಸನು ಆ ಸ್ತ್ರೀಗೆ - ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ; ನೀನು ಅದನ್ನು ಮರೆಮಾಡದೆ ತಿಳಿಸಬೇಕು ಎಂದು ಹೇಳಲು ಆಕೆಯು - ಅರಸನ ಅಪ್ಪಣೆಯಾಗಲಿ ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅರಸನು ಉತ್ತರವಾಗಿ ಆ ಸ್ತ್ರೀಗೆ, “ನಾನು ನಿನ್ನಿಂದ ಕೇಳುವುದನ್ನು ನನಗೆ ಮರೆಮಾಡಬೇಡ,” ಎಂದನು. ಅದಕ್ಕವಳು, “ಅರಸನಾದ ನನ್ನ ಒಡೆಯನು ಮಾತನಾಡಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:18
5 ತಿಳಿವುಗಳ ಹೋಲಿಕೆ  

ನಾನು ನಿನ್ನೊಂದಿಗೆ ಮಾತನಾಡಿದ್ದನ್ನು ಆ ಅಧಿಕಾರಿಗಳು ಪತ್ತೆ ಹಚ್ಚಬಹುದು. ಅವರು ನಿನ್ನ ಹತ್ತಿರ ಬಂದು, ‘ಯೆರೆಮೀಯನೇ, ನೀನು ರಾಜನಾದ ಚಿದ್ಕೀಯನಿಗೆ ಏನು ಹೇಳಿದೆ? ಚಿದ್ಕೀಯನು ನಿನಗೆ ಏನು ಹೇಳಿದನು? ಪ್ರಾಮಾಣಿಕವಾಗಿ ಎಲ್ಲವನ್ನು ನಮಗೆ ಹೇಳು; ಇಲ್ಲವಾದರೆ ನಾವು ನಿನ್ನನ್ನು ಕೊಂದುಬಿಡುತ್ತೇವೆ’ ಎನ್ನಬಹುದು.


ರಾಜನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಒಬ್ಬನ ಮೂಲಕ ಯೆಹೋವನ ಆಲಯದ ಮೂರನೇ ಪ್ರವೇಶದ್ವಾರಕ್ಕೆ ಕರೆಸಿದನು. ರಾಜನು ಅವನಿಗೆ, “ಯೆರೆಮೀಯನೇ, ನಾನು ನಿನಗೆ ಒಂದು ವಿಷಯವನ್ನು ಕೇಳಲಿದ್ದೇನೆ. ನನ್ನಿಂದ ಏನನ್ನೂ ಮುಚ್ಚಿಡಬೇಡ. ಎಲ್ಲವನ್ನು ಪ್ರಾಮಾಣಿಕವಾಗಿ ನನಗೆ ಹೇಳು” ಎಂದನು.


ರಾಜನಾದ ನನ್ನ ಒಡೆಯನ ಮಾತುಗಳು ನನಗೆ ವಿಶ್ರಾಂತಿಯನ್ನು ಕೊಡುತ್ತವೆ ಎಂದು ನನಗೆ ತಿಳಿದಿರುವುದರಿಂದ ನಿನ್ನ ಬಳಿಗೆ ಬಂದಿರುವೆನು. ಏಕೆಂದರೆ ನೀನು ದೇವದೂತನಂತಿರುವೆ. ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂಬುದು ನಿನಗೆ ತಿಳಿದಿದೆ. ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿರುವನು” ಎಂದು ಹೇಳಿದಳು.


ರಾಜನು, “ಈ ವಿಚಾರಗಳನ್ನೆಲ್ಲ ಹೇಳಲು ಯೋವಾಬನು ನಿನಗೆ ತಿಳಿಸಿದನಲ್ಲವೇ?” ಎಂದನು. ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ನಿಮ್ಮ ಆಣೆಯಾಗಿಯೂ, ನೀವು ಹೇಳಿದ್ದು ಸರಿ! ನಿಮ್ಮ ಸೇವಕನಾದ ಯೋವಾಬನು ಈ ವಿಷಯಗಳನ್ನು ಹೇಳಲು ನನಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು