Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:19 - ಪರಿಶುದ್ದ ಬೈಬಲ್‌

19 ರಾಜನು, “ಈ ವಿಚಾರಗಳನ್ನೆಲ್ಲ ಹೇಳಲು ಯೋವಾಬನು ನಿನಗೆ ತಿಳಿಸಿದನಲ್ಲವೇ?” ಎಂದನು. ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ನಿಮ್ಮ ಆಣೆಯಾಗಿಯೂ, ನೀವು ಹೇಳಿದ್ದು ಸರಿ! ನಿಮ್ಮ ಸೇವಕನಾದ ಯೋವಾಬನು ಈ ವಿಷಯಗಳನ್ನು ಹೇಳಲು ನನಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈವಾಡ ಇದೆಯೇ?” ಎಂದು ಕೇಳಿದನು. ಅದಕ್ಕೆ ಆ ಸ್ತ್ರೀಯು, “ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ, ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ. ನಿನ್ನ ದಾಸಿಯಾದ ನನ್ನನ್ನು ಪ್ರೇರೇಪಿಸಿ, ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿ ಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದೆ ಅಲ್ಲವೇ?’ ಎಂದು ಕೇಳಿದನು. ಅದಕ್ಕೆ ಆ ಸ್ತ್ರೀ, “ಅರಸರ ಜೀವದಾಣೆ, ಅರಸರು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ನಿಮ್ಮ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವರು ನಿಮ್ಮ ಸೇವಕನಾದ ಯೋವಾಬನೇ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅರಸನು - ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದಲ್ಲವೋ ಎಂದು ಕೇಳಿದನು. ಅದಕ್ಕೆ ಸ್ತ್ರೀಯು - ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವದಕ್ಕೆ ಆಗುವದಿಲ್ಲ; ನಿನ್ನ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಅರಸನು, “ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ?” ಎಂದು ಕೇಳಿದನು. ಆ ಸ್ತ್ರೀಯು ಉತ್ತರವಾಗಿ, “ನಿನ್ನ ಜೀವದಾಣೆ, ಅರಸನಾದ ನನ್ನ ಒಡೆಯನೇ, ನೀನು ಒಂದು ಮಾತು ಹೇಳಿದರೆ, ನಾವು ಅದನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ಏಕೆಂದರೆ ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ, ಈ ಎಲ್ಲಾ ಮಾತುಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:19
22 ತಿಳಿವುಗಳ ಹೋಲಿಕೆ  

ರಾಜನ ಬಳಿಗೆ ಹೋಗಿ, ನಾನು ಹೇಳಿಕೊಟ್ಟ ಮಾತುಗಳನ್ನು ಅವನಿಗೆ ಹೇಳು” ಎಂದು ಹೇಳಿದನು. ಯೋವಾಬನು ಬುದ್ಧಿವಂತಳಾದ ಆ ಸ್ತ್ರೀಗೆ ಮಾತಾಡಬೇಕಾದದ್ದನ್ನು ಹೇಳಿಕೊಟ್ಟನು.


ಹನ್ನಳು, “ಸ್ವಾಮೀ, ನನ್ನನ್ನು ಕ್ಷಮಿಸಿ. ನಿಮ್ಮ ಬಳಿ ನಿಂತಿರುವ ನಾನೇ ಅಂದು ಯೆಹೋವನಿಗೆ ಪ್ರಾರ್ಥನೆ ಮಾಡಿದವಳು. ನಾನು ಹೇಳುತ್ತಿರುವುದು ನಿಜವೆಂದು ಪ್ರಮಾಣ ಮಾಡುತ್ತೇನೆ.


ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.


ಒಳ್ಳೆಯ ಮಾರ್ಗವನ್ನು ಬಿಟ್ಟು ಹೋಗಬೇಡ; ಆದರೆ ಕೆಡುಕಿಗೆ ಯಾವಾಗಲೂ ದೂರವಾಗಿರು.


ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು; ಏಕೆಂದರೆ ಬೇತೇಲಿಗೆ ಹೋಗುವಂತೆ ಯೆಹೋವನು ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಇಬ್ಬರೂ ಬೇತೇಲಿಗೆ ಹೋದರು.


ಊರೀಯನು ದಾವೀದನಿಗೆ, “ಪವಿತ್ರ ಪೆಟ್ಟಿಗೆಯೂ ಇಸ್ರೇಲಿನ ಮತ್ತು ಯೆಹೂದದ ಸೈನಿಕರೂ ಗುಡಾರಗಳಲ್ಲಿ ನೆಲೆಸಿದ್ದಾರೆ. ನನ್ನ ಒಡೆಯನಾದ ಯೋವಾಬನು ಮತ್ತು ನನ್ನ ರಾಜನ ಸೇವಕರು ಹೊಲದಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಆದ್ದರಿಂದ ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೂ ಪತ್ನಿಯ ಜೊತೆಯಲ್ಲಿ ಮಲಗುವುದಕ್ಕೂ ನಾನು ಮನೆಗೆ ಹೋಗುವುದು ಸರಿಯಲ್ಲ. ನಿನ್ನಾಣೆ, ನಿನ್ನ ಜೀವದಾಣೆ, ನಾನು ಇಂಥದನ್ನು ಮಾಡುವುದೇ ಇಲ್ಲ.” ಎಂದು ಹೇಳಿದನು.


ಅಬ್ನೇರನೇ, ನಿನ್ನ ಕೈಗಳನ್ನು ಹಗ್ಗದಿಂದ ಬಿಗಿದಿರಲಿಲ್ಲ. ನಿನ್ನ ಪಾದಗಳಿಗೆ ಸಂಕೋಲೆಯನ್ನು ತೊಡಿಸಿರಲಿಲ್ಲ. ದುಷ್ಟಜನರೆದುರು ನೀನು ಬಿದ್ದೆಯಲ್ಲ, ನೀನು ಬಿದ್ದು ಸತ್ತೆಯಲ್ಲ.” ಆಗ ಜನರೆಲ್ಲರೂ ಅಬ್ನೇರನಿಗಾಗಿ ಮತ್ತೆ ಗೋಳಾಡಿದರು.


ಯೋವಾಬನು ಮತ್ತು ಅವನ ವಂಶದವರು ಇದಕ್ಕೆ ಜವಾಬ್ದಾರರು. ಅವನ ವಂಶದವರನ್ನು ಇದಕ್ಕಾಗಿ ದೂಷಿಸಬೇಕು. ಯೋವಾಬನ ವಂಶಕ್ಕೆ ಅನೇಕ ಕಷ್ಟಗಳು ಬರಲಿ. ಅವನ ವಂಶದವರಲ್ಲಿ ಕುಷ್ಠರೋಗಿಗಳು, ಊರುಗೋಲು ಬಳಸುವವರು. ಕತ್ತಿಯಿಂದ ಸಾಯುವವರು, ಭಿಕ್ಷೆ ಬೇಡುವವರು ಇದ್ದೇ ಇರಲಿ” ಎಂದು ಹೇಳಿದನು.


ಅಬ್ನೇರನು ಹೆಬ್ರೋನಿಗೆ ಬಂದಾಗ, ಯೋವಾಬನು ಅವನ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತನಾಡುವುದಕ್ಕಾಗಿ ಊರಬಾಗಿಲಿನ ಒಂದು ಪಕ್ಕಕ್ಕೆ ಕರೆದುಕೊಂಡು ಹೋದನು. ಆದರೆ ಯೋವಾಬನು ಅಬ್ನೇರನ ಹೊಟ್ಟೆಗೆ ತಿವಿದಿದ್ದರಿಂದ ಅವನು ಸತ್ತನು. ಹಿಂದೆ, ಅಬ್ನೇರನು ಯೋವಾಬನ ಸೋದರನಾದ ಅಸಾಹೇಲನನ್ನು ಕೊಂದಿದ್ದನು. ಆದ್ದರಿಂದ ಯೋವಾಬನು ಅಬ್ನೇರನನ್ನು ಕೊಂದನು.


ಮುಗ್ದಜನರನ್ನು ಕೊಂದು ಅಪರಾಧಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆಯಾಗಿಯೂ ನಿನ್ನ ಆಣೆಯಾಗಿಯೂ ನಿನ್ನ ಶತ್ರುಗಳೂ ನಿನಗೆ ಕೇಡುಮಾಡುವವರೂ ನಾಬಾಲನಂತಾಗಲಿ.


ಆದರೆ ದಾವೀದನು, “ನಾನು ನಿನ್ನ ಗೆಳೆಯನೆಂಬುದು ನಿನ್ನ ತಂದೆಗೆ ಚೆನ್ನಾಗಿ ತಿಳಿದಿದೆ. ನಿನ್ನ ತಂದೆಯು, ‘ಯೋನಾತಾನನಿಗೆ ಇದು ತಿಳಿಯಲೇಬಾರದು. ಅವನಿಗೆ ತಿಳಿದುಬಿಟ್ಟರೆ ಅವನು ತನ್ನ ಹೃದಯದಲ್ಲಿ ದುಃಖಪಟ್ಟು ದಾವೀದನಿಗೆ ಹೇಳಿಬಿಡುತ್ತಾನೆ’ ಎಂದುಕೊಂಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ, ನಾನು ಸಾವಿಗೆ ಬಹು ಹತ್ತಿರವಾಗಿದ್ದೇನೆ” ಎಂದು ಹೇಳಿದನು.


ದಾವೀದನು ಗೊಲ್ಯಾತನೊಂದಿಗೆ ಯುದ್ಧಕ್ಕೆ ಹೊರಟಿದ್ದನ್ನು ಸೌಲನು ಗಮನಿಸುತ್ತಿದ್ದನು. ಸೌಲನು ತನ್ನ ಸೇನಾಧಿಪತಿಯಾದ ಅಬ್ನೇರನನ್ನು, “ಆ ಯುವಕನ ತಂದೆ ಯಾರು?” ಎಂದು ಪ್ರಶ್ನಿಸಿದನು. ಅಬ್ನೇರನು, “ಅರಸನೇ, ನಿನ್ನ ಜೀವದಾಣೆ, ಅವನು ಯಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು.


ಆದರೆ ನೀನು ಇನ್ನೊಂದು ವಿಷಯದಲ್ಲಿಯೂ ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು. ನನ್ನ ಸೇವಕನಾಗಿದ್ದ ಮೋಶೆಯು ನಿನಗೆ ಕೊಟ್ಟ ಆಜ್ಞೆಗಳನ್ನು ನೀನು ನಿಶ್ಚಿತವಾಗಿ ಪಾಲಿಸಬೇಕು. ಅವನ ಧರ್ಮೋಪದೇಶವನ್ನೆಲ್ಲಾ ಚಾಚೂತಪ್ಪದೆ ಅನುಸರಿಸಿದ್ದೇ ಆದರೆ ನೀನು ಮಾಡುವ ಎಲ್ಲ ಕಾರ್ಯಗಳಲ್ಲಿ ನಿನಗೆ ಜಯಸಿಗುವುದು ಖಂಡಿತ.


ನಾನು ಈ ಹೊತ್ತು ಬೋಧಿಸುವ ಯಾವುದನ್ನೂ ನೀವು ಉಲ್ಲಂಘಿಸಬಾರದು. ಇತರ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಪೂಜಿಸಬಾರದು.


“ಆದ್ದರಿಂದ, ಇಸ್ರೇಲ್ ಜನರೇ, ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಲು ನೀವು ಎಚ್ಚರದಿಂದಿರಬೇಕು. ಆತನನ್ನು ಹಿಂಬಾಲಿಸುವುದನ್ನು ನಿಲ್ಲಿಸಬೇಡಿ.


ನಿಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲಗಳಲ್ಲಿಯಾಗಲಿ ದ್ರಾಕ್ಷಿತೋಟಗಳಲ್ಲಿಯಾಗಲಿ ಹಾದುಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ತಮ್ಮ ದೇಶದ ಮೇರೆಗಳನ್ನು ದಾಟುವ ತನಕ ಎಡಕ್ಕಾಗಲಿ ಬಲಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.


ಅವನು ನಿನ್ನೊಡನೆ ಫರೋಹನ ಬಳಿಗೆ ಬರುವನು. ನೀನು ಹೇಳಬೇಕಾದದ್ದನ್ನು ನಾನೇ ನಿನಗೆ ತಿಳಿಸುವೆನು. ಅದನ್ನು ನೀನು ಆರೋನನಿಗೆ ತಿಳಿಸು. ಆರೋನನು ಫರೋಹನೊಡನೆ ಸರಿಯಾಗಿ ಮಾತಾಡುವನು.


ರಾಜನಾದ ದಾವೀದನು ಆ ಸ್ತ್ರೀಗೆ, “ನಾನು ಕೇಳುವ ಪ್ರಶ್ನೆಗೆ ನೀನು ಉತ್ತರವನ್ನು ಹೇಳಲೇಬೇಕು” ಎಂದು ಉತ್ತರಿಸಿದನು. ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ದಯವಿಟ್ಟು ನಿನ್ನ ಪ್ರಶ್ನೆಯನ್ನು ಕೇಳು” ಎಂದಳು.


ನಾನು ಅಬ್ಷಾಲೋಮನನ್ನು ಕೊಂದಿದ್ದರೆ ಸ್ವತಃ ರಾಜನೇ ಕಂಡು ಹಿಡಿಯುತ್ತಿದ್ದನು. ನೀನೇ ನನ್ನನ್ನು ದಂಡಿಸುತ್ತಿದ್ದೆ” ಎಂದು ಹೇಳಿದನು.


ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡುಹಿಡಿಯುವುದರಿಂದ ರಾಜನಿಗೆ ಸನ್ಮಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು