2 ಸಮುಯೇಲ 14:26 - ಪರಿಶುದ್ದ ಬೈಬಲ್26 ಪ್ರತಿ ವರ್ಷಾಂತ್ಯದಲ್ಲಿಯೂ ಅಬ್ಷಾಲೋಮನು ತನ್ನ ತಲೆಕೂದಲನ್ನು ಕತ್ತರಿಸಿ ಅದನ್ನು ತೂಕ ಮಾಡಿಸುತ್ತಿದ್ದನು. ಅವನ ತಲೆಕೂದಲು ಐದು ಪೌಂಡುಗಳಷ್ಟು ಭಾರವಾಗಿರುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನ ತಲೆಯ ಕೂದಲು ಬಹು ಭಾರವಾದ್ದರಿಂದ ಪ್ರತಿ ವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ಕೂದಲು ರಾಜರ ತೂಕದ ಪ್ರಕಾರ ಇನ್ನೂರು ರೂಪಾಯಿ ತೂಕವಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅವನ ತಲೆಗೂದಲು ಬಹುಭಾರವಾಗುತ್ತಿದ್ದುದರಿಂದ ಪ್ರತಿವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ತಲೆಗೂದಲು ಸರಕಾರೀ ತೂಕದ ಪ್ರಕಾರ ಎರಡು ಕಿಲೋಗ್ರಾಂ ತೂಕವಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನು ತಲೆಗೂದಲು ಬಹುಭಾರವಾಗುವದರಿಂದ ಪ್ರತಿ ವರುಷದ ಅಂತ್ಯದಲ್ಲಿ ಬೋಳಿಸಿಕೊಳ್ಳುವನು. ಆಗ ಅವನ ಕೂದಲು ಸರಕಾರೀ ತೂಕದ ಪ್ರಕಾರ ಇನ್ನೂರು ರೂಪಾಯಿ ತೂಕವಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರ್ಷದ ಕೊನೆಯಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ರಾಜರ ತೂಕದ ಪ್ರಕಾರ ಎರಡು ಕಿಲೋಗ್ರಾಂ ತೂಕವಾಗಿರುತ್ತಿತ್ತು. ಅಧ್ಯಾಯವನ್ನು ನೋಡಿ |
ಅಬ್ಷಾಲೋಮನು ದಾವೀದನ ಸೈನಿಕರ ಕೈಗೆ ಸಿಕ್ಕಿಕೊಂಡನು. ಅವನು ಹೇಸರಕತ್ತೆಯ ಮೇಲೆ ಸವಾರಿ ಮಾಡುತ್ತಾ ತಪ್ಪಿಸಿಕೊಳ್ಳಲು ಹೋದನು. ಆ ಹೇಸರಕತ್ತೆಯು ದೊಡ್ಡ ಓಕ್ ಮರದ ರೆಂಬೆಗಳ ಕೆಳಗೆ ಓಡುತ್ತಾ ಹೋಯಿತು. ಆ ರೆಂಬೆಗಳು ದಟ್ಟವಾಗಿದ್ದುದರಿಂದ ಅಬ್ಷಾಲೋಮನ ತಲೆಯು ಮರದಲ್ಲಿ ಸಿಕ್ಕಿಹಾಕಿಕೊಂಡಿತು. ಅವನು ಕುಳಿತುಕೊಂಡಿದ್ದ ಹೇಸರಕತ್ತೆಯು ಓಡಿಹೋದುದರಿಂದ ಅಬ್ಷಾಲೋಮನು ಮರದಲ್ಲಿ ನೇತಾಡುವವನಾದನು.
ಆ ಸಮಯದಲ್ಲಿ ಸ್ತ್ರೀಯರ ಪರಿಮಳದ್ರವ್ಯವು ಕೊಳೆತ ವಾಸನೆಯಿಂದ ಕೂಡಿರುವುದು. ಅವರು ಸೊಂಟಪಟ್ಟಿಯ ಬದಲಿಗೆ ಹಗ್ಗ ಕಟ್ಟಿಕೊಳ್ಳುವರು; ತಲೆಕೂದಲನ್ನು ಅಂದವಾಗಿ ಹೆಣೆದುಕೊಳ್ಳುವ ಬದಲು ಬೋಳಿಸಿಕೊಳ್ಳುವರು. ಈಗ ಅವರಿಗೆ ಆಧುನಿಕ ವಸ್ತ್ರಗಳಿರುವವು; ಆದರೆ ಆಗ ಅವರು ಶೋಕವಸ್ತ್ರಗಳನ್ನೇ ಧರಿಸುವರು. ಈಗ ಅವರು ಮುಖಗಳಿಗೆ ಸೌಂದರ್ಯದ ಬೊಟ್ಟುಗಳನ್ನು ಇಟ್ಟುಕೊಳ್ಳುವರು; ಆದರೆ ಆಗ ಅವರ ಚರ್ಮದಲ್ಲಿ ಸುಟ್ಟಕಲೆಗಳೇ ಇರುವವು.